FRUITS Software ರೈತರು ಬರ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆ, ಕೃಷಿ ಪರಿಕರಗಳು ಮತ್ತು ಸವಲತ್ತುಗಳ ವಿತರಣೆ ಹಾಗೂ ಇನ್ನಿತರ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಫ್ರೂಟ್ಸ್(FRUITS ) ತಂತ್ರಾಂಶದಲ್ಲಿ ತಮ್ಮ ಎಲ್ಲ ಸರ್ವೇ ನಂಬರ್‍ಗಳನ್ನು ಸೇರಿಸಿ ನೋಂದಣಿ ಹೊಂದಿರುವುದು ಕಡ್ಡಾಯವಾಗಿರುತ್ತದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 5,14,015 ಕೃಷಿ ಯೋಗ್ಯ ತಾಕುಗಳಿದ್ದು, ಅವುಗಳಲ್ಲಿ ಈಗಾಗಲೇ 3,30,309 ತಾಕುಗಳನ್ನು ನೋಂದಣಿ ಮಾಡಲಾಗಿದ್ದು 1,85,949 ತಾಕುಗಳ ನೋಂದಣಿ ಬಾಕಿ ಇರುತ್ತದೆ.
ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಸಾಗರ, ಹೊಸನಗರ, ಶಿಕಾರಿಪುರ, ಸೊರಬ ತಾಲ್ಲೂಕುಗಳನ್ನು ಈಗಾಗಲೇ ಬರಪೀಡಿತ ಎಂದು ಘೋಷಣೆಯಾಗಿರುವುದರಿಂದ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ಒಟ್ಟು ವಿಸ್ತೀರ್ಣ ಮತ್ತು ಬೆಳೆ ಸಮೀಕೆ ದತ್ತಾಂಶ ಆಧಾರದ ಮೇಲೆ ಬೆಳೆ ನಷ್ಟ ಪರಿಹಾರ ನೇರ ನಗದು ವರ್ಗಾವಣೆ ಮೂಲಕ ವಿತರಣೆಯಾಗಲಿರುವ ಕಾರಣ ರೈತರು ತಮ್ಮ ವ್ಯಾಪ್ತಿಯ ಕಂದಾಯ, ಕೃಷಿ, ತೋಟಗಾರಿಕೆ ಇಲಾಖಾ ಅಧಿಕಾರಿಗಳನ್ನು ಸಂಪರ್ಕಿಸಿ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಪಡೆಯಲು ಕೋರಿದೆ.
ಒಂದು ವೇಳೆ ಈಗಾಗಲೇ ವಿಶಿಷ್ಟ ಗುರುತಿನ ಸಂಖ್ಯೆ ಹೊಂದಿದ್ದಲ್ಲಿ ತಮ್ಮ ಎಲ್ಲಾ ಸರ್ವೇ ನಂಬರ್‍ಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಸೇರಿಸಿಕೊಂಡು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆಯಲು ಜಿಲ್ಲೆಯ ರೈತ ಬಾಂಧವರಲ್ಲಿ ಕೋರಿದೆ.
ಸರ್ಕಾರದಿಂದ ಘೋಷಣೆಯಾಇರುವ ಬರ ಪರಿಹಾರ ಮೊತ್ತವು ಎಫ್‍ಐಡಿ ಹೊಂದಿದ ರೈತರ ಖಾತೆಗಳಿಗೆ ಮಾತ್ರ ನೇರವಾಗಿ ವರ್ಗಾವಣೆಯಾಗುವುದರಿಂದ ರೈತರು ತಮ್ಮ ಎಲ್ಲಾ ಸರ್ವೇ ನಂಬರ್‍ಗಳನ್ನು ಕಡ್ಡಾಯವಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ಸೇರ್ಪಡೆ ಮಾಡುವುದರಿಂದ ನೋಂದಣಿ ಮಾಡಿಕೊಳ್ಳಲು ಕೋರಿದೆ.
FRUITS Software ಜಿಲ್ಲೆಯಾದ್ಯಂತ ಫ್ರೂಟ್ಸ್ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ರೈತ ಬಾಂಧವರು ತಮ್ಮ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಜಾರಿ ಪ್ರಮಾಣ ಪತ್ರ ಮತ್ತು ಬ್ಯಾಂಕ್ ವಿವರಗಳನ್ನು ಕೂಡಲೇ ಜೋಡಣೆ ಮಾಡಲು ತಮ್ಮ ವ್ಯಾಪ್ತಿಯ ಕಂದಾಯ ಇಲಾಖೆಯ ಗ್ರಾಮದ ಆಡಳಿತಾಧಿಕಾರಿಗಳು, ರೈತ ಸಂಪರ್ಕ ಕೇಂದ್ರ ಹಾಗೂ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.