Monday, December 15, 2025
Monday, December 15, 2025

B.R. Ambedkar ಡಾ.ಅಂಬೇಡ್ಕರ್ ಅವರ ಬಗ್ಗೆ ಆಳ ಆಧ್ಯಯನಮಾಡಿ ಇತರರಿಗೆ ತಿಳಿಸಬೇಕು-ಕೆ.ಪಿ.ವೆಂಕಟೇಶ್

Date:

B.R. Ambedkar ಅಂಬೇಡ್ಕರ್ ವಿಚಾರಧಾರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಮಾತ್ರ ಮನುಷ್ಯನಲ್ಲಿರುವ ಸ್ವಾರ್ಥ ತಾನಾಗಿಯೇ ಹೊರಹೊಮ್ಮಿ ಮನಸ್ಸು ಶುದ್ಧವಾಗಲಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ.ವೆಂಕಟೇಶ್ ಹೇಳಿದರು.

ಚಿಕ್ಕಮಗಳೂರು ನಗರದ ಬಿಜೆಪಿ ಕಚೇರಿಯಲ್ಲಿ ಡಾ|| ಬಿ.ಆರ್.ಅಂಬೇಡ್ಕರ್‌ರವರ ಪರಿನಿರ್ವಾಣ ದಿನದ ಪ್ರಯುಕ್ತ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು ಪ್ರತಿ ವ್ಯಕ್ತಿಯು ಅಂಬೇಡ್ಕರ್‌ರವರ ಆಶಯದಲ್ಲಿ ನಡೆದರೆ ಮಾತ್ರ ಯಶಸ್ಸಿನ ಮೆಟ್ಟಿಲೇರಲು ಸಾಧ್ಯ ಎಂದು ಹೇಳಿದರು.

ಅಂಬೇಡ್ಕರ್ ನೀಡಿರುವ ಸಂವಿಧಾನ ದೇಶದ ಜನತೆಯ ಭವಿಷ್ಯವನ್ನು ಬದಲಿಸುವ ಜೊತೆಗೆ ವಿಶ್ವಾದ್ಯಂತ ಮನ್ನಣೆ ಪಡೆದುಕೊಂಡಿದೆ. ಇಂತಹ ಮಹಾನ್ ನಾಯಕರ ಚರಿತ್ರೆಯನ್ನು ಕೇವಲ ಪೇಸ್‌ಬುಕ್, ವಾಟ್ಸಪ್‌ಗಳಲ್ಲಿ ಹಾಕಿಕೊಂಡರೆ ಸಾಲದು ಆಳವಾಗಿ ಅಧ್ಯಯನ ನಡೆಸಿ ಇತರರಿಗೆ ತಿಳಿಸುವಂತಾಗಬೇಕು ಎಂದು ಸಲಹೆ ಮಾಡಿದರು.

ಪರಿನಿರ್ವಾಣ, ಗೋರೆಗಾಂವ್ ಸೇರಿದಂತೆ ಅಂಬೇಡ್ಕರ್‌ಗೆ ಸಂಬಂಧಿಸಿದ ಜಯಂತಿಗಳು ಅಂದಿನ ದಿನಕ್ಕೆ ಮಾತ್ರ ಸೀಮಿತಗೊಳಿಸಬಾರದು. ವರ್ಷಪೂರ್ತಿ ಬಡವರು, ಹಿಂದುಳಿದವರು ಹಾಗೂ ಶೋಷಿತರನ್ನು ಮೇಲೆತ್ತುವ ಕಾರ್ಯದಲ್ಲಿ ತೊಡಗಿದರೆ ಅಂಬೇಡ್ಕರ್ ವಿಚಾರಧಾರೆಗಳಿಗೆ ನಿಜವಾದ ಅರ್ಥ ದೊರೆಯಲಿದೆ ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ನರೇಂದ್ರ ಮಾತನಾಡಿ ಪರಿಶಿಷ್ಟ ಜನಾಂಗವನ್ನು ಒಕ್ಕಲೆಬ್ಬಿಸುವ ನಿಟ್ಟಿನಲ್ಲಿ ಕೆಲವರು ಪೂರ್ಣ ಮಾಹಿತಿಯಿಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪೋಸ್ಟ್ಗಳನ್ನು ಹಾಕಿ ಒಡೆದಾಳುವ ನೀತಿ ಅನು ಸರಿಸುತ್ತಿದ್ದು ಇವುಗಳಿಗೆ ಸೂಕ್ತ ಉತ್ತರ ನೀಡಲು ಸಮರ್ಪಕ ಅಧ್ಯಯನ ನಡೆಸಬೇಕು. ಜೊತೆಗೆ ಅಂತಹ ಪೋಸ್ಟ್ ಗಳಿಗೆ ಪ್ರೇರಿತರಾಗಬಾರದು ಎಂದು ಸಲಹೆ ಮಾಡಿದರು.
ಇತ್ತೀಚೆಗೆ ಪರಿಶಿಷ್ಟ ಜನಾಂಗವನ್ನು ಮತಾಂತರಗೊಳಿಸುವ ನಿಟ್ಟಿನಲ್ಲಿ ಕೆಲವು ಮಂದಿ ಹಣದ ಆಮಿಷವೊಡ್ಡಿ ನಿರಂತರವಾಗಿ ಕೆಲಸ ಮಾಡುತ್ತಿದೆ. ಇಂತಹ ವ್ಯಕ್ತಿಗಳಿಗೆ ದೂರವಿದ್ದು ಭಾರತೀಯ ಸಂಸ್ಸೃತಿಯನ್ನು ಎತ್ತಿಹಿಡಿಯು ವ ಕೆಲಸ ಮಾಡಿದರೆ ನಮ್ಮ ಪೂರ್ವಜರ ಪರಂಪರೆಯನ್ನು ಉಳಿಸಿಬೆಳೆಸಲು ಸಾಧ್ಯ ಎಂದರು.

ಕಾರ್ಯಕ್ರಮಕ್ಕೂ ಮುನ್ನ ನೂರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಮೆರವಣ ಗೆ ನಡೆಸಿ ಭಾವಚಿತ್ರಕ್ಕೆ ಪುಷ್ಪನಮನ ಜೈಕಾರ ಹಾಕುವ ಸಂಭ್ರಮಿಸಿದರು.

B.R. Ambedkar ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಮಧುಕುಮಾರ್ ರಾಜ್ ಅರಸ್, ನಗರ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೇಶವ, ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಸೀತರಾಮಭರಣ್ಯ, ನಗರಸಭಾ ಮಾಜಿ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ, ಮುಖಂಡರುಗಳಾದ ದೀಪಕ್‌ದೊಡ್ಡಯ್ಯ, ಈಶ್ವರಹಳ್ಳಿ ಮಹೇಶ್, ಹಂಪಯ್ಯ, ಕನಕರಾಜ್‌ಅರಸ್, ಮೋಹನ್ ಮತ್ತಿತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...