Friday, April 18, 2025
Friday, April 18, 2025

KSRTC SC and ST Officers and Employees Welfare Association ಸರ್ವಜನಾಂಗಕ್ಕೂ ಸಾಮಾಜಿಕ ನ್ಯಾಯ ಕಲ್ಪಿಸಿದ ಡಾ.ಅಂಬೇಡ್ಕರ್

Date:

KSRTC SC and ST Officers and Employees Welfare Association ಕಲ್ಪಿಸಿದ ಪುಣ್ಯಪುರುಷ ಡಾ.ಬಿ.ಆರ್.ಅಂಬೇಡ್ಕರ್. ಅವರ ಚಿಂತನೆ, ಆದರ್ಶಗಳು ಪ್ರತಿಯೊ ಬ್ಬರಿಗೂ ಮಾದರಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಕೆಎಸ್‌ಆರ್‌ಟಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಧಿಕಾರಿಗಳ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಚಿಕ್ಕಮಗಳೂರು ಘಟಕದ ಗೌರವಾಧ್ಯಕ್ಷ ಹಿರೇಮ ಗಳೂರು ರಾಮಚಂದ್ರ ಹೇಳಿದರು.

ಚಿಕ್ಕಮಗಳೂರು ನಗರದ ಕೆಎಸ್‌ಆರ್‌ಟಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಧಿಕಾರಿಗಳ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಬಾಬಾ ಸಾಹೇಬ ಡಾ.ಬಿ.ಅರ್.ಅಂಬೇಡ್ಕರ್ ಅವರ 67 ಮಹಾಪರಿನಿರ್ವಾಣ ದಿನದ ಆಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವದಲ್ಲೇ ಶ್ರೇಷ್ಟ ಸಂವಿಧಾನ ರಚನೆ ಮಾಡುವ ಮೂಲಕ ದೇಶಕ್ಕೆ ಕೊಡುಗೆ ನೀಡಿದ್ದಾರೆ. ಯಾವುದೇ ಜಾತಿ, ಧರ್ಮ ಎನ್ನದೇ ದಲಿತರು, ಶೋಷಿತರು, ಹಿಂದುಳಿದವರ ಏಳಿಗೆಗೆ ಹೋರಾಟ ನಡೆಸಿ ಸರ್ವಜನಾಂಗಕ್ಕೂ ಸಾಮಾಜಿಕ ನ್ಯಾಯವನ್ನು ಕಲ್ಪಿಸಿದ್ದಾರೆ ಅವರ ಹೋರಾಟದ ಬದುಕು, ಚಿಂತನೆಗಳು ನಮ್ಮೆಲ್ಲರಿಗೂ ಆದರ್ಶವಾಗಬೇಕು ಎಂದರು.

ಡಿ.6 ರಂದು ಅಂಬೇಡ್ಕರ್ ಅವರು ನಮ್ಮನ್ನು ಅಗಲಿ ಇಂದಿಗೆ 67 ವರ್ಷ ಕಳೆದಿವೆ. ಆದ್ದರಿಂದ ಇಡೀ ದೇಶದಾದ್ಯಂತ ಪರಿನಿರ್ವಾಣ ದಿನದ ಮೂಲಕ ಅವರ ಸ್ಮರಿಸಲಾಗುತ್ತಿದೆ. ಅಧಿಕಾರ ಮತ್ತು ಭೂಮಿ ಸಮಾನ ಹಂಚಿಕೆಯಾಗಬೇಕು, ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ಆಶಯ ಹೊಂದಿದ್ದರು. ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ಹೇಳಿದರು.

ಸಂಘದ ಚಿಕ್ಕಮಗಳೂರು ಘಟಕದ ವಿಭಾಗೀಯ ಅಧ್ಯಕ್ಷ ಎಂ.ಎಸ್.ಉಮೇಶ್ ಮಾತನಾಡಿ, ಸಮಾಜದಲ್ಲಿ ಯಾರೊಬ್ಬರು ಅವಕಾಶದಿಂದ ವಂಚಿತರಾಗಬಾರದು ಎಂಬ ಸದಾಶಯದಿಂದ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಕಾನೂನು ರೂಪಿಸಿದ್ದಾರೆ. ಅವರ ಪರಿನಿರ್ವಾಣ ದಿನದಂದು ಅವರು ಸಾಧನೆ, ಹೋರಾಟ, ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಮುಂದಿನ ಪೀಳಿಗೆಗೂ ತಿಳಿಸಬೇಕು ಎಂದರು.
ಕೆಎಸ್‌ಆರ್‌ಟಿಸಿ ಸಂಚಾರಿ ನಿಯಂತ್ರಕ ಸದಾಶಿವ ಮಾತನಾಡಿ, ಅಂಬೇಡ್ಕರ್ ಅವರು ಜಾತಿಯತೆ, ಅಸಮಾನತೆಯಲ್ಲಿ ಬೆಂದು ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ತಮ್ಮನ್ನು ತಾವು ತ್ಯಾಗ ಮಾಡಿ ಮಾನವತವಾದಿಯಾಗಿ ಬೆಳೆದು ನಮ್ಮೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ ಎಂದು ಸ್ಮರಿಸಿದರು.

KSRTC SC and ST Officers and Employees Welfare Association ಕಾರ್ಯಕ್ರಮಕ್ಕೂ ಮೊದಲು ಒಂದು ನಿಮಿಷ ಕಾಲ ಮೌನಾಚರಣೆ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸ್ಮರಣೆ ಮಾಡಿದರು. ಸಂಘದ ಖಜಾಂಚಿ ಕೆ.ಆರ್. ಪ್ರಸನ್ನಕುಮಾರ್, ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ದಿನೇಶ್‌ಕುಮಾರ್, ಶ್ರೀನಾಥ್, ಹಾಲಪ್ಪ, ಪುಟ್ಟಸ್ವಾಮಿ, ಕುಮಾರಸ್ವಾಮಿ, ರಮೇಶ್, ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....