Wednesday, October 2, 2024
Wednesday, October 2, 2024

Bike Jatha in Ripponpet ಅಪರಾಧ ತಡೆ ಮಾಸಾಚರಣೆ ಬೈಕ್ ಜಾಥಾ ನಡೆಸಿದ ರಿಪ್ಪನ್ ಪೇಟೆ ಪೊಲೀಸ್

Date:

Bike Jatha in Ripponpet ರಿಪ್ಪನ್‌ಪೇಟೆ ಪೊಲೀಸರಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಜಾಗೃತಿಗಾಗಿ ಬೈಕ್ ರ್ಯಾಲಿ ನಡೆಯಿತು.

ವಾಹನ ಚಲಾಯಿಸುವ ವೇಳೆ ರಸ್ತೆ ಸುರಕ್ಷತೆಯ ನಿಯಮವನ್ನು ಪಾಲಿಸದೆ ಇರುವುದು ನಿಮಗೆ ನೀವೇ ದ್ರೋಹ ಮಾಡಿದ ಹಾಗೆ. ರಸ್ತೆ ಸುರಕ್ಷತೆಯ ಬಗ್ಗೆ ಯುವಜನತೆ ಪಾಲಿಸದೆ ಇರುವುದರಿಂದ ಹೆಚ್ಚಿನ ವಾಹನ ಅಪಘಾತಗಳಾಗಿ ಸಾವು ಸಂಭವಿಸುತ್ತದೆ. ಈ ನಿಟ್ಟಿನಲ್ಲಿ ವಾಹನ ಚಲಾಯಿಸವವರು ಜಾಗರೂಕರಾಗಬೇಕು ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ಅವರು ಹೇಳಿದರು.

ರಿಪ್ಪನ್ ಪಟ್ಟಣದಲ್ಲಿ ರಸ್ತೆ ಸುರಕ್ಷತೆ ಹಾಗೂ ಅಪರಾಧ ತಡೆ ಮಾಸ ಜಾಗೃತಿ ಕಾರ್ಯಕ್ರಮದ ಅಂಗವಾಗಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಆಶ್ರಯದಲ್ಲಿ ನಡೆದ ಬೈಕ್ ರ್‍ಯಾಲಿಗೆ ಚಾಲನೆ ನೀಡಿ ಮಾತನಾಡಿದರು.

ರಸ್ತೆಯಲ್ಲಿ ವಾಹನ ಚಲಾಯಿಸುವವರು ತಮ್ಮ ಸುರಕ್ಷತೆಯ ಜತೆಗೆ ವಾಹನಗಳ ದಾಖಲೆಗಳನ್ನು ಇಟ್ಟುಕೊಳ್ಳಬೇಕು, ಅಪ್ರಬುದ್ಧ ಮಕ್ಕಳು ವಾಹನ ಚಲಾಯಿಸಿದರೆ ಅವರ ಹೆತ್ತವರ ಹೊಣೆಗಾರರಗುವುದು ಮಾತ್ರವಲ್ಲದೆ ಶಿಕ್ಷಕಾರ್ಹರು,ಇತ್ತೀಚಿನ ದಿನಗಳಲ್ಲಿ ಅಂತರ್ಜಾಲದ ಮೂಲಕ ಜನರನ್ನು ಯಾಮಾರಿಸುವ ಘಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಇದರಲ್ಲಿ ಯುವಜನರು ಬಲಿಯಾಗುತಿದ್ದಾರೆ. ಈ ನಿಟ್ಟಿನಲ್ಲಿ ಜಾಗೃತಿ ವಹಿಸಬೇಕಾಗಿದೆ ಎಂದು ಕರೆ ನೀಡಿದರು.

ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಯಿತು.

Bike Jatha in Ripponpet ಈ ಸಂಧರ್ಭದಲ್ಲಿ ಪಿಎಸ್‌ಐ ಪ್ರವೀಣ್ ಎಸ್ ಪಿ ಸೇರಿದಂತೆ ಸಿಬ್ಬಂದಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Youth Empowerment and Sports ಸುತ್ತಮುತ್ತಲ ಪ್ರದೇಶದ ಸ್ಬಚ್ಛತೆ ನಮ್ಮ ಜವಾಬ್ದಾರಿ- ಶಾಸಕ ಚನ್ನಬಸಪ್ಪ

 Youth Empowerment and Sports ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು...

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...