Friday, March 20, 2026
Friday, March 20, 2026

Kuvempu University ಮರು ಕೌನ್ಸೆಲಿಂಗ್ ವ್ಯವಸ್ಥೆ & ಅತಿಥಿ ಉಪನ್ಯಾಸಕರ ನೇಮಕಕ್ಕೆ ಎನ್ಎಸ್ ಯು ಐ ಆಗ್ರಹ

Date:

Kuvempu University ಕುವೆಂಪು ವಿಶ್ವವಿದ್ಯಾಲಯದಲ್ಲಿ 2023-24ನೇ ಸಾಲಿನ ಪಿಜಿ ಪ್ರವೇಶ ಮುಕ್ತಾಯಗೊಂಡಿದ್ದು, ಎಸ್.ಸಿ./ಎಸ್.ಟಿ., ಹಾಗೂ ಅಂಗವಿಲಕರ ಕೋಟಾದ ಸೀಟುಗಳಿಗೆ ನಿಗಧಿಪಡಿಸಿದಷ್ಟು ವಿದ್ಯಾರ್ಥಿಗಳು ಪ್ರವೇಶ ಪಡೆದಿರುವುದಿಲ್ಲ.

ಓಬಿಸಿ, ಹಾಗೂ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಹಲವರು ಮೀಸಲಾತಿಯಲ್ಲಿ ಪ್ರವೇಶ ಸಿಗದೇ ವಂಚಿತರಾಗಿದ್ದಾರೆ. ಎಸ್.ಸಿ./ಎಸ್.ಟಿ., ಹಾಗೂ ಅಂಗವಿಕಲರ ಕೋಟಾದ ಸೀಟುಗಳಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳೇ ಇಲ್ಲದಿರುವುದರಿಂದ ಅವಕಾಶ ವಂಚಿತರಾಗಿರುವ ಓಬಿಸಿ ಹಾಗೂ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಕೌನ್ಸಿಲಿಂಗ್ ನಡೆಸಿ, ಈ ಸೀಟುಗಳನ್ನು ಭರ್ತಿ ಮಾಡಿಕೊಳ್ಳಬೇಕೆಂದು ಎನ್.ಎಸ್.ಯು.ಐ. ವತಿಯಿಂದ ಈ ಮೂಲಕ ಮನವಿ ಮಾಡುತ್ತಿದ್ದೇವೆ.

ಕುವೆಂಪು ವಿಶ್ವವಿದ್ಯಾಲಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆ ಇದ್ದು, ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಅನುಸರಿಸುತ್ತಿರುವ ವಿಳಂಬನೀತಿಯನ್ನು ಎನ್.ಎಸ್.ಯು.ಐ. ತೀವ್ರವಾಗಿ ಖಂಡಿಸುತ್ತದೆ. ಪ್ರತಿ ವರ್ಷ ಕಾಲೇಜುಗಳು ಆರಂಭವಾಗುವ ಮೊದಲೇ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಬೇಕು. ಆದರೆ, ಈ ಬಾರಿ ತರಗತಿಗಳು ಆರಂಭವಾಗಿ ಸೆಮಿಸ್ಟರ್ ಪರೀಕ್ಷೆಗಳು ಸಮೀಪಿಸುತ್ತಿದ್ದರೂ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಂಡಿಲ್ಲ. ಈ ಬಗ್ಗೆ ಎನ್.ಎಸ್.ಯು.ಐ. ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಲವಾರು ಬಾರಿ ವಿಶ್ವವಿದ್ಯಾಲಯದ ಕುಲಪತಿಗಳಿಗೆ, ಕುಲಸಚಿವರಿಗೆ ಮನವಿ ಮಾಡಿದ್ದಾರೆ. ಆದರೆ, ಇದುವರೆಗೂ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸದೇ ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸಲಾಗುತ್ತಿದೆ.

Kuvempu University ತರಗತಿಗಳು ಆರಂಭವಾಗಿ ಎರಡು ತಿಂಗಳಾಗುತ್ತಾ ಬಂದಿದ್ದು, ನಿಗಧಿತ ಪಠ್ಯಕ್ರಮಗಳ ಬೋಧನೆ ನಡೆದಿಲ್ಲ. ಸೆಮಿಸ್ಟರ್ ಪರೀಕ್ಷೆ ಹತ್ತಿರವಾಗುತ್ತಿದ್ದು, ಪಾಠವನ್ನೇ ಕೇಳದೆ ಪರೀಕ್ಷೆ ಬರೆಯುವುದು ಹೇಗೆಂಬ ಅತಂಕ ವಿದ್ಯಾರ್ಥಿಗಳಲ್ಲಿ ಮನೆಮಾಡಿದೆ. ಆದ್ದರಿಂದ ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು ನಿಗಧಿತ ಪಠ್ಯಕ್ರಮಗಳನ್ನು ಮುಗಿಸಲು ಕ್ರಮ ಕೈಗೊಳ್ಳಬೇಕು ಎಂದು ಎನ್.ಎಸ್.ಯು.ಐ. ಆಗ್ರಹಿಸುತ್ತಿದ್ದು, ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದೇ ಇದೇ ರೀತಿ ವಿದ್ಯಾರ್ಥಿ ವಿರೋಧಿ ಧೋರಣೆ ಮುಂದುವರಿಸಿದರೆ ವಿವಿ ಬಂದ್ ನಡೆಸಿ ಪ್ರತಿಭಟನೆ ನಡೆಸಬೇಕಾಗುವುದು ಎಂದು ಈ ಮೂಲಕ ಎಚ್ಚರಿಸುತ್ತಿದ್ದೇವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...