Guarantee Schemes ದೇಶದ ಪಂಚರಾಜ್ಯ ಚುನಾವಣೆಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವವಾದ ಜಯಬೇರಿ ಬಾರಿಸುವ ಮೂಲಕ ಅಧಿಕಾರಕ್ಕೆ ಮುಂದಾಗಿರುವುದು ಸ್ವಾಗತಾರ್ಹ ಎಂದು ಕಡವಂತಿ ಗ್ರಾಮ ಪಂಚಾಯಿತಿ ಸದಸ್ಯ ವಿನೋದ್ ಬೊಗಸೆ ಹೇಳಿದ್ದಾರೆ.
ಈ ಸಂಬoಧ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿರುವ ಅವರು ರಾಜಸ್ಥಾನ, ಛತ್ತಿಸ್‌ಘಡ್ ಹಾಗೂ ಮಧ್ಯಪ್ರ ದೇಶದಲ್ಲಿ ಮೋದಿ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇದರಿಂದ ಪಕ್ಷಕ್ಕೆ ಇನ್ನಷ್ಟು ಬಲಬಂದoತಾಗಿದೆ ಎಂದು ಹೇಳಿದ್ದಾರೆ.
ಮೂರು ರಾಜ್ಯಗಳಲ್ಲಿ ಮತದಾರರು ಗ್ಯಾರಂಟಿ ಭಾಗ್ಯಗಳಿಗೆ ಬೆಲೆಕೊಡದೇ ದೇಶ ಹಾಗೂ ರಾಜ್ಯದ ಹಿತ ಕಾಪಾಡುವಲ್ಲಿ ಪಣತೊಟ್ಟಿ ಬಿಜೆಪಿಗೆ ಅಧಿಕಾರಕ್ಕೆ ತಂದಿರುವುದು ಹೆಮ್ಮೆಯ ಸಂಗತಿ. ಕೇಂದ್ರ ಸರ್ಕಾರದ ಜನಪರ ಯೋಜನೆಗಳೇ ಮತದಾರರ ಪ್ರಮುಖ ಪಾತ್ರ ವಹಿಸಿದ ಪರಿಣಾಮ ಬಿಜೆಪಿ ಗೆಲುವು ಸಾಧಿಸಲು ಕಾರಣವಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಕಾಂಗ್ರೆಸ್ ಸರ್ಕಾರ ಆರು ತಿಂಗಳು ಕಳೆದರೂ ಸಹ ಸಂಪೂರ್ಣ ಗ್ಯಾರಂಟಿ ಒದಗಿ ಸದೇ ವಿಫಲತೆಯನ್ನು ಕಾಣುತ್ತಿದೆ. ಇದರಿಂದ ಚಿಕ್ಕಮಗಳೂರು-ಉಡುಪಿ ಲೋಕಸಭಾ ಚುನಾವಣೆಗೆ ಇನ್ನಷ್ಟು ಶಕ್ತಿ ತುಂಬಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ಅತಿಹೆಚ್ಚು ಸ್ಥಾನ ಲಭಿಸಲಿದೆ ಎಂದಿದ್ದಾರೆ.
Guarantee Schemes ಪ್ರಸ್ತುತ ಮೂರು ರಾಜ್ಯಗಳ ನಿರೀಕ್ಷೆಗೂ ಮೀರಿದ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಜೊತೆಗೆ ದೇಶ ಹಾಗೂ ರಾಜ್ಯದಲ್ಲೂ ಬಿಜೆಪಿ ಪ್ರಭಾವ ಬೀರುವ ಜೊತೆಗೆ ಮತ್ತೊಮ್ಮೆ ಮೂರನೇ ಬಾರಿಗೆ ದೇಶದಲ್ಲಿ ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದಾರೆ.