Friday, November 22, 2024
Friday, November 22, 2024

Scouts and Guides ಸ್ಕೌಟ್ಸ್ & ಗೈಡ್ಸ್ ನಿಸರ್ಗದೊಡನೆ ಸಮನ್ವಯ ಜೀವನ ಕಲಿಸುತ್ತದೆ- ಪಿ.ಜಿ.ಆರ್.ಸಿಂಧ್ಯಾ

Date:

Scouts and Guides ಮಕ್ಕಳು ನಾಲ್ಕು ಗೋಡೆಗಳ ನಡುವೆ ಓದು-ಬರಹಗಳನ್ನು ಕಲಿಯು ವುದರ ಜೊತೆಗೆ, ನಿಸರ್ಗದ ಮಡಿಲಲ್ಲಿ ಒಂದಾಗಿ ಬೆರೆತು, ಸಮನ್ವಯದಿಂದ ಬಾಳಲು ಕಲಿಯುವಂತೆ ಪ್ರೇರೇ ಪಿಸುವ ಕಾರ್ಯವೇ ಸ್ಕೌಟ್ ಮತ್ತು ಗೈಡ್‌ನ ಮೂಲ ಉದ್ದೇಶ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.

ಚಿಕ್ಕಮಗಳೂರು ನಗರದ ಸ್ಕೌಟ್ಸ್ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಘಟಕ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಏರ್ಪಡಿಸಿದ್ದ ಆರನೇ ದಿನದ ಸ್ಕೌಟ್ ಮತ್ತು ಗೈಡ್ಸ್ ಮೂಲ ತರಬೇತಿ ಶಿಬಿರದ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿ ಅವರು ಮಾತನಾಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಸಮಾಜಮುಖಿ ಕೆಲಸಗಳು ಮತ್ತು ಪ್ರತಿಯೊಬ್ಬರಲ್ಲಿ ದೇಶ ಪ್ರೇಮ ಸಾರುವ ಯೋಜನೆಗಳನ್ನು ಮನಗಂಡಿರುವ ಸರಕಾರ ಪ್ರತಿಯೊಂದು ಶಾಲೆ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಪ್ರಾರಂಭಿಸಲು ಸಹಕರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಕಡೆಗಳಲ್ಲಿಯೂ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ನೀಡುವ ಮೂಲಕ ಅನೇಕ ಅನುಕೂಲಗಳನ್ನು ಸರಕಾರ ಮಾಡುವುದರಿಂದ ಶಿಕ್ಷಕರು ಮತ್ತು ಮಕ್ಕಳು ಮುಕ್ತವಾಗಿ ಭಾಗ ವಹಿಸಿ ಸ್ಕೌಟ್ಸ್ ಮತ್ತು ಗೈಡ್ಸ್ನ ಅನುಕೂಲ ಪಡೆಯುವ ಜೊತೆಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಿ ಎಂದರು.

ಈಗಾಗಲೇ ಹತ್ತು ವರ್ಷಗಳ ತಮ್ಮ ಅವಧಿಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹಲವಾರು ಜಿಲ್ಲೆಗಳಲ್ಲಿ ಕಾರ್ಯ ಕ್ರಮ ನಡೆಸಲು ಸಹಕಾರ ನೀಡಿ ಸ್ಕೌಟ್ಸ್ ಮತ್ತು ಗೈಡ್ಸ್ನ ಬೆಂಬಲಕ್ಕೆ ನಿಂತಿದೆ. ಜೊತೆಗೆ ಹಾಸನಾಂಬ ದೇವಾಲಯ ದಲ್ಲೂ ಸೇವಕರ ಬದಲಾಗಿ ಸ್ಕೌಟ್ಸ್ ಮಕ್ಕಳನ್ನು ಸೇವಾ ಕಾರ್ಯಕ್ಕೆ ಬಳಸಿಕೊಂಡಿರುವ ಜಿಲ್ಲಾಧಿಕಾರಿಗಳು ಹುಂಡಿ ಯ ಕಾಣಿಕೆ ಹಣವನ್ನು ಏಣಿಕೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.

ಸ್ಕೌಟ್ಸ್ ಮತ್ತು ಗೈಡ್ಸ್ ದೇಶಪ್ರೇಮ ಹಾಗೂ ಶಿಸ್ತನ್ನು ಸಾರುವುದನ್ನು ಮನಗಂಡು ರಾಜ್ಯದಲ್ಲಿ ಸುಮಾರು 05 ಲಕ್ಷ ಮಂದಿ ವಾರದಲ್ಲಿ ತರಬೇತಿಯಲ್ಲಿ ಪಾಲ್ಗೊಂಡು ಕಲಿಕೆಗೆ ಮುಂದಾಗುತ್ತಿದ್ದು ಇಪ್ಪತ್ತೈದು ಸಾವಿರಕ್ಕೂ ಹೆಚ್ಚು ಶಿಕ್ಷಕರು ಶಿಬಿರಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.

Scouts and Guides ಸಮಾಜದಲ್ಲಿ ಎದುರಾಗುವ ಸಮಸ್ಯೆಗಳನ್ನು ಮಾನಸಿಕವಾಗಿ ಆತ್ಮಸ್ಥೈರ್ಯ ತುಂಬುವ ಮೂಲಕ ಸ್ಕೌಟ್ಸ್ & ಗೈಡ್ಸ್ ಕಾರ್ಯನಿರ್ವಹಿಸುತ್ತಿದ್ದು ಕೇಂದ್ರ ಸರ್ಕಾರವು ಈ ಬಗ್ಗೆ ವಿಶೇಷ ಕಾಳಜಿ ವಹಿಸಿ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಕಡ್ಡಾಯಗೊಳಿಸಲು ಮುಂದಾಗಿದ್ದು ರಾಜ್ಯದಲ್ಲೂ ಈ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಸಿ.ರವೀಶ್ ಮಾತನಾಡಿ ಅಂತರಾಷ್ಟ್ರೀಯ ಸಂಸ್ಥೆಯಾದ ಸ್ಕೌಟ್ಸ್ ಮತ್ತು ಗೈಡ್ಸ್ ನ್ನು ಗ್ರಾಮೀಣ ಪ್ರದೇಶದ ಶಾಲೆಗಳಿಗೂ ವಿಸ್ತರಿಸಿದರೆ ಮಕ್ಕಳ ಕಲಿಕೆಗೆ ಅನುಕೂಲವಾಗಲಿದೆ. ಜೊತೆಗೆ ಪಠ್ಯಪುಸ್ತಕದಲ್ಲೂ ಈ ವಿಷಯವನ್ನು ಅಳವಡಿಸಲು ಶಿಕ್ಷಣ ಸಚಿವರಿಗೆ ಶಿಕ್ಷಕರು ಮನವಿ ಸಲ್ಲಿಸಿ ಒತ್ತಾಯಿಸಿದರೆ ಮಕ್ಕಳ ಶ್ರೇಯೋಭಿವೃದ್ದಿ ಬಹಳಷ್ಟು ಉಪಯೋಗವಾಗಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಜಿಲ್ಲಾ ಆಯುಕ್ತ ಎಂ.ಎನ್.ಷಡಕ್ಷರಿ ವಿದ್ಯಾರ್ಥಿ ಗಳಿಗೆ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಲು ಶಿಕ್ಷಕರು ಮಹತ್ತರ ಕೆಲಸ ನಿಭಾಯಿಸುತ್ತಿದ್ದು ಇದರೊಂ ದಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಣವು ಅತ್ಯಗತ್ಯ. ಆ ನಿಟ್ಟಿನಲ್ಲಿ ಶಿಕ್ಷಕರು ಶಿಬಿರದಲ್ಲಿ ಪಡೆದುಕೊಂಡ ತರಬೇತಿಯನ್ನು ಮಕ್ಕಳಿಗೆ ಬೋಧಿಸಿ ಪ್ರತಿ ಶಾಲೆಗಳಲ್ಲಿ ಒಂದೊಂದು ತಂಡ ರಚಿಸಬೇಕು ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ಜಿಲ್ಲಾ ಆಯುಕ್ತೆ ಮಮತ, ತರಬೇತಿ ಆಯುಕ್ತೆ ಸಂಧ್ಯಾರಾಣ , ಸಂಘಟನಾ ಆಯುಕ್ತ ಕಿರಣ್‌ಕುಮಾರ್, ಜಂಟಿ ಕಾರ್ಯದರ್ಶಿ ಪ್ರತಿಮಾ, ಸಹಾಯಕ ಕಾರ್ಯದರ್ಶಿ ನೀಲಕಂಠಚಾರ್, ಗೈಡ್ಸ್ ತರಬೇತಿ ನಾಯಕ ಡಾ|| ಇಂಚರ ನಾರಾಯಣಸ್ವಾಮಿ, ಗೈಡ್ಸ್ ತರಬೇತಿ ನಾಯಕಿ ಮಮತ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...