Saturday, October 17, 2026
Saturday, October 17, 2026

Kannada Rajyotsava ಜನಮನಗೆದ್ದ ಕಲಾಕೌಸ್ತುಭ ಕನ್ನಡ ರಾಜ್ಯೋತ್ಸವ

Date:

Kannada Rajyotsava ರಿಪ್ಪನ್‌ಪೇಟೆ ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಶುಕ್ರವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವದ ಅದ್ಧೂರಿ ಕನ್ನಡ ಸಂಭ್ರಮದಲ್ಲಿ ಚಂಡೆ ನೃತ್ಯ,ವಿದ್ಯಾರ್ಥಿಗಳ ವಾದ್ಯ ಘೋಷ್ ಮೆರವಣಿಗೆಗೆ ಮೆರಗು ನೀಡಿತ್ತು .

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಪ್ರವೀಣ್ ಕನ್ನಡ ಧ್ವಜಾರೋಹಣ ನೆರವೇರಿಸಿದರು.ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಪಿಎಸ್‌ಐ ಪ್ರವೀಣ್ ಎಸ್ ಪಿ ಚಾಲನೆ ನೀಡಿದರು.

ಈ ಮೆರವಣಿಗೆಯಲ್ಲಿ ಚಂಡೆ ನೃತ್ಯ, ವಿವಿಧ ಶಾಲಾ ಕಾಲೇಜುಗಳ ವಾದ್ಯ ಘೋಷ್ ಮೆರವಣಿಗೆಗೆ ಸಾಥ್ ನೀಡಿದವು .

ತೆರೆದ ವಾಹನದಲ್ಲಿ ಅನಾವರಣಗೊಂಡ ಭಾರೀ ಗಾತ್ರದ ತಾಯಿ ಭುವನೇಶ್ವರಿ ಹಾಗೂ ರಾಷ್ಟ್ರ ಶಕ, ಪುರುಷರ ವಿವಿಧ ವೇಷ ಭೂಷಣಗಳ ಧಿರಿಸು ತೊಟ್ಟು ಸಂಭ್ರಮಿಸಿದ ಪುಟಾಣಿಗಳ ಸಾಲು , ಸಹಸ್ರಾರು ಸಂಖ್ಯೆಯ ಶಾಲಾ, ಕಾಲೇಜು ವಿದ್ಯಾರ್ಥಿಗಳ ಪಥಸಂಚಲನದ ಅಕರ್ಷಣೆಯ ಮೆರವಣಿಗೆ ದಾರಿಹೋಕರನ್ನು ತನ್ನತ್ತ ಸೆಳೆಯುವಂತೆ ಮಾಡಿತ್ತು.

Kannada Rajyotsava ಈ ಸಂಧರ್ಭದಲ್ಲಿ ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷೆ ಲೀಲಾ ಶಂಕರ್,ಸಂಘದ ಪ್ರಧಾನ ಕಾರ್ಯದರ್ಶಿ ಶೈಲಾ ಪ್ರಭು ,ಗ್ರಾ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ,ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ,
ಸಮಿತಿಯ ಪ್ರಮುಖರಾದ ಎಂ ಬಿ ಮಂಜುನಾಥ್, ಸುರೇಶ್ ಸಿಂಗ್,ಆರ್ ಟಿ ಗೋಪಾಲ್,ನಾಗರತ್ನ ದೇವರಾಜ್,ಹಿರಿಯಣ್ಣ ಭಂಡಾರಿ, ಉಮಾ ಸುರೇಶ್ ,ಗ್ರಾಪಂ ಸದಸ್ಯರಾದ ಮಹಾಲಕ್ಷ್ಮಿ , ದೀಪಾ ಸುಧೀರ್ ,ಅಶ್ವಿನಿ ರವಿಶಂಕರ್ ,ಪದ್ಮಾ ಸುರೇಶ್,ಲಕ್ಷ್ಮಿ ಶ್ರೀನಿವಾಸ್ ,ರಂಜನ್ ,ರಾಮಚಂದ್ರ ಬಿ , ಹಾಗೂ ಮತ್ತು ಸಿಬ್ಬಂದಿ ವರ್ಗ ಸೇರಿದಂತೆ ಆಟೊ ಚಾಲಕರ ಮತ್ತು ಮಾಲಕರ ಸಂಘದ ಸದಸ್ಯರು , ವಿವಿಧ ಸಂಘ ಸಂಸ್ಥೆಗಳ ಮತ್ತು ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜ್ ಶಿಕ್ಷಣ ಸಂಸ್ಥೆಯ ಪ್ರಮುಖರು ಕರ್ನಾಟಕ ರಾಜ್ಯೋತ್ಸವದ ಮೆರವಣಿಗೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...