Monday, May 4, 2026
Monday, May 4, 2026

B.Y.Vijayendra ಭದ್ರಾವತಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ: ರಕ್ಷಣೆ ಕ್ರಮ ಕೈಗೊಳ್ಳಿ- ಬಿ.ವೈ.ವಿಜಯೇಂದ್ರ

Date:

B.Y.Vijayendra ಅಧಿಕಾರಸ್ಥ ಕಾಂಗ್ರೆಸ್ಸಿಗರ ಅಕ್ರಮಗಳ ವಿರುದ್ಧ ದನಿ ಎತ್ತುವ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಲ್ಲೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಕಲಬುರ್ಗಿ, ಬೆಳಗಾವಿಯ ಪ್ರಕರಣಗಳ ಬೆನ್ನಲೇ ಭದ್ರಾವತಿಯ ನಮ್ಮ ಬಿಜೆಪಿ ಮುಖಂಡ ಗೋಕುಲ್ ಕೃಷ್ಣನ್ ಅವರ ಮೇಲೆ ನಡೆದಿರುವ ಗೂಂಡಾಗಳ ಹಲ್ಲೆ ಆತಂಕಕಾರಿ ಘಟನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಭದ್ರಾವತಿಯಲ್ಲಿ ನಡೆಯುತ್ತಿರುವ ಅಕ್ರಮ ದಂಧೆಗಳಿಗೆ ಸ್ಥಳೀಯ ಶಾಸಕರ ಕೈವಾಡ ಇರುವ ಬಗ್ಗೆ ಜಾಲತಾಣದಲ್ಲಿ ಗೋಕುಲ್ ಕೃಷ್ಣನ್ ಪ್ರಶ್ನಿಸಿದ್ದೇ, ಈ ದಾಳಿ ನಡೆಯಲು ಕಾರಣವಾಗಿದೆ ಎಂದು ಹೇಳಲಾಗುತ್ತಿದೆ ಎಂದಿದ್ದಾರೆ.

B.Y.Vijayendra ಕಾಂಗ್ರೆಸ್ ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹಲ್ಲೆ ಮಾಡುವವರಿಗೆ ಕುಮ್ಮಕ್ಕು ನೀಡುತ್ತಿರುವಂತಿದೆ.
ತಕ್ಷಣವೇ ಭದ್ರಾತಿಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಮ್ಮ ಕಾರ್ಯಕರ್ತನಿಗೆ ರಕ್ಷಣೆ ನೀಡಿ, ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...