Article 370 ಜಮ್ಮು ಮತ್ತು ಕಾಶ್ಮೀರ ರಾಜ್ಯದ ಬಗ್ಗೆ ಸಂವಿಧಾನದ 370ನೇ ವಿಧಿ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪಿತ್ತಿದೆ. 2019ರಲ್ಲಿ ಕೇಂದ್ರ ಸರ್ಕಾರವು ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ್ದ ಕ್ರಮವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಮಾನ್ಯ ನ್ಯಾಯಾಧೀಶರಾದ ಡಿ ವೈ ಚಂದ್ರಚೂಡ ನೇತೃತ್ವದ ಪೀಠ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಸ್ಥಾನಮಾನವನ್ನು ಶೀಘ್ರವೇ ಮರು ಸ್ಥಾಪಿಸಲು ಕೇಂದ್ರಕ್ಕೆ ನಿರ್ದೇಶನ ನೀಡಲಾಗುತ್ತದೆ ಎಂದು ತಿಳಿಸಿದೆ. ಸಂವಿಧಾನದ 370ನೇ ವಿಧಿ ಬಗ್ಗೆ 2019ರಲ್ಲಿ ಕೇಂದ್ರ ಸರ್ಕಾರದ ನಿರ್ಧಾರ ಮನ್ಯವಾಗಿದೆ.
370 ನೇ ವಿಧಿಯು ರಾಜ್ಯದಲ್ಲಿ ಉಂಟಾಗಿದ್ದ ಯುದ್ಧದ ಪರಿಸ್ಥಿತಿಗೆ ಅನುಕೂಲವಾಗಿ ಜಾರಿಯಾಗಿತ್ತು. ಅದೊಂದು ಮಧ್ಯಂತರ ವ್ಯವಸ್ಥೆ ಎಂದು ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಹೇಳಿದೆ .
Article 370 ಭಾರತಕ್ಕೆ ಜಮ್ಮು ಮತ್ತು ಕಾಶ್ಮೀರ ಸೇರ್ಪಡೆ ಬಳಿಕ ಅದರಲ್ಲಿ ಆಂತರಿಕ ಸಾರ್ವಭೌಮತ್ವ ಉಳಿಯುವುದಿಲ್ಲ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ತಿಳಿಸಲಾಗಿದೆ.
2024ರ ಸೆಪ್ಟೆಂಬರ್ 30ರ ಒಳಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ಸೂಚಿಸಲಾಗುವುದು ಎಂದು ತೀರ್ಪಿನಲ್ಲಿ ಹೇಳಲಾಗಿದೆ.