Sunday, September 27, 2026
Sunday, September 27, 2026

Amateur Boxing Association ರಾಜ್ಯ ಅಮೆಚೂರ್ ಬಾಕ್ಸಿಂಗ್ ಸಂಸ್ಥೆಯ ಸಹ ಕಾರ್ಯದರ್ಶಿಯಾಗಿ ವಿನೋದ್ ಆಯ್ಕೆ

Date:

Amateur Boxing Association ಬೆಂಗಳೂರಿನ ಕರ್ನಾಟಕ ಒಲಂಪಿಕ್ ಭವನದಲ್ಲಿ ನಡೆದ ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ನ ಚುನಾವಣೆಯಲ್ಲಿ ಸಹ ಕಾರ್ಯದರ್ಶಿ
ಸ್ಥಾನಕ್ಕೆ ಸ್ಪರ್ಧಿಸಿದ್ದ ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ಜಿಲ್ಲಾ ಅಮೆಚೂರು ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ಅವಿರೋಧವಾಗಿ 2023 ರಿಂದ 2027ನೇ ಸಾಲಿನ ಅವಧಿಗೆ ಕರ್ನಾಟಕ ಅಮೆಚೂರು ಬಾಕ್ಸಿಂಗ್ ಅಸೋಸಿಯೇಷನ್ ಸಹ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಸದರಿಯ ಅಸೋಸಿಯೇಷನ್ ಬಾಕ್ಸಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ಪಡೆದಿರುವ ಅಸೋಸಿಯೇಷನ್ ಆಗಿದೆ.

ಈ ಸಂದರ್ಭದಲ್ಲಿ ಚುನಾವಣೆ ನಿರ್ದೇಶಕರಾಗಿ ಹೈ ಕೋರ್ಟ್ ವಕೀಲರಾದ ಶಶಿವರ್ದನ್ ಹಾಗೂ ಯುವಸಬಲಿಕರಣ ಮತ್ತು ಕ್ರೀಡಾ ಇಲಾಖೆಯ ವೀಕ್ಷಕರಾಗಿ ಶ್ರೀಮತಿ ಶಶಿಕಲಾ ಮತ್ತು ಕರ್ನಾಟಕ ಒಲಂಪಿಕ ಅಸೋಸಿಯೇಷನ್ ವೀಕ್ಷಕರಾಗಿ ಆರ್ ಪ್ರಕಾಶ್ ಆಗಮಿಸಿದ್ದರು.

Amateur Boxing Association ಈ ಸಂದರ್ಭದಲ್ಲಿ ಸಹ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆಯಾಗಲು ಸಹಕರಿಸಿದ ಕರ್ನಾಟಕ ಒಲಂಪಿಕ್ ಅಧ್ಯಕ್ಷರಾದ ಕೆ ಗೋವಿಂದರಾಜು ಉಪಾಧ್ಯಕ್ಷರಾದ ಡಾ ಮಂಜೇಗೌಡ
ಮತ್ತು ಪ್ರಧಾನ ಕಾರ್ಯದರ್ಶಿ ಅನಂತರಾಜು ಮತ್ತು ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಸಾಯಿ ಸತೀಶ್ ರವರಿಗೆ ಶಿವಮೊಗ್ಗ ವಿನೋದ ಅಭಿನಂದನೆಗಳನ್ನು ತಿಳಿಸಿದ್ದು ಜಿಲ್ಲೆಯಲ್ಲಿ ಹಾಗೂ ರಾಜ್ಯದಲ್ಲಿ ಬಾಕ್ಸಿಂಗ್ ಅಭಿವೃದ್ಧಿಗೆ ಈ ಹುದ್ದೆ ಇಂದ ನಿಷ್ಠೆಯಿಂದ ಕೆಲಸ ನಿರ್ವಹಿಸುವುದಾಗಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...