S.N. Chennabasappa ರಾಜ್ಯಸರ್ಕಾರ ಹಾಗೂ ಕಾಂಗ್ರೆಸ್ಸಿಗರ ಅಕ್ರಮಗಳ ವಿರುದ್ಧ ಧ್ವನಿ ಎತ್ತುವ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಲ್ಲೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ.
ಕಲಬುರ್ಗಿ, ಬೆಳಗಾವಿಯ ಪ್ರಕರಣಗಳ ಬೆನ್ನಲೇ ಭದ್ರಾವತಿಯ ನಮ್ಮ ಬಿಜೆಪಿ ಮುಖಂಡ ಗೋಕುಲ್ ಕೃಷ್ಣನ್ ಅವರ ಮೇಲೆ ನಡೆದಿರುವ ಗೂಂಡಾಗಳ ಹಲ್ಲೆ ಆತಂಕಕಾರಿ ಘಟನೆಯಾಗಿದೆ ಎಂದು ಶಿವಮೊಗ್ಗ ಶಾಸಕರಾದ ಎಸ್ಎನ್ ಚೆನ್ನಬಸಪ್ಪ ಅವರು ತಿಳಿಸಿದ್ದಾರೆ.
ಭದ್ರಾವತಿಯಲ್ಲಿ ನಡೆಯುತ್ತಿರುವ ಅಕ್ರಮ ದಂಧೆಗಳಿಗೆ ಸ್ಥಳೀಯ ಶಾಸಕರ ಕೈವಾಡ ಇರುವ ಬಗ್ಗೆ ಜಾಲತಾಣದಲ್ಲಿ ಗೋಕುಲ್ ಕೃಷ್ಣನ್ ಪ್ರಶ್ನಿಸಿದ್ದೇ, ಈ ದಾಳಿ ನಡೆಯಲು ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
S.N. Chennabasappa ಭಾನುವಾರ ತಡರಾತ್ರಿ ನಗರದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗೋಕುಲನ ಆರೋಗ್ಯ ವಿಚಾರಿಸಲಾಯಿತು. ಮತ್ತು ತಕ್ಷಣವೇ ಭದ್ರಾತಿಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೆ, ನಮ್ಮ ಕಾರ್ಯಕರ್ತರಿಗೆ ರಕ್ಷಣೆ ನೀಡಬೇಕು, ಹಾಗೂ ತಕ್ಷಣವೇ ದುಷ್ಕರ್ಮಿಗಳನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.