Sunday, December 7, 2025
Sunday, December 7, 2025

Janata Darshan programme ಶಿಕಾರಿಪುರ ತಾಲ್ಲೂಕಿನಲ್ಲಿ ಶೇ.83 ರಷ್ಟು ಮಂದಿ ಬೆಳೆನಷ್ಟ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ-ಡಾ.ಸೆಲ್ವಮಣಿ

Date:

Janata Darshan programme ಪ್ರಸಕ್ತ ಸಾಲಿನ ಮುಂಗಾರು ವೈಫಲ್ಯದ ಕಾರಣ ಹಾನಿಯಾಗಿರುವ ಕೃಷಿ ಬೆಳೆಗೆ ಸಂಬಂಧಿಸಿದಂತೆ ಬಾಧಿತ ರಾಗಿರುವ ರೈತರು ಸರ್ಕಾರದಿಂದ ಪರಿಹಾರ ಧನವನ್ನು ಪಡೆಯಲು ಆನ್‌ಲೈನ್‌ನಲ್ಲಿ ತಮ್ಮ ವೈಯಕ್ತಿಕ ವಿವರಗಳನ್ನು ಫ್ರೂಟ್ ತಂತ್ರಾಂಶದ ಮೂಲಕ ಸಲ್ಲಿಸಿ, ಸೌಲಭ್ಯ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆರ್ .ಸೆಲ್ವಮಣಿ ಅವರು ಹೇಳಿದರು.

ಇಂದು ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲಾಡಳಿತವು ಶಿಕಾರಿಪುರ ಪಟ್ಟಣದ ಸುವರ್ಣ ಸಂಸ್ಕೃತಿ ಭವನದಲ್ಲಿ ಏರ್ಪಡಿಸಿದ್ದ ಜನತಾದರ್ಶನ ಕಾರ್ಯಮಕ್ರಮದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡುತ್ತಿದ್ದರು.

ಶಿಕಾರಿಪುರ ತಾಲೂಕಿನಲ್ಲಿ ಈವರೆಗೆ ಶೇ.83ರಷ್ಟು ಮಂದಿ ಬೆಳೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಉಳಿದ ರೈತರು ಸಕಾಲದಲ್ಲಿ ನಿಯಮಾನುಸಾರ ಅರ್ಜಿ ಸಲ್ಲಿಸಿ, ಸೌಲಭ್ಯವನ್ನು ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.

ಜಿಲ್ಲಾ ಕೇಂದ್ರ ಶಿವಮೊಗ್ಗ ನಂತರ ಸೊರಬ ತಾಲೂಕು ಕೇಂದ್ರದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿ, ಸಹಸ್ರಾರು ಸಂಖ್ಯೆಯ ಜನರಿಂದ ಅಹವಾಲುಗಳನ್ನು ಸ್ವೀಕರಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ನೀಡುವ ಕಾರ್ಯ ಮುಂದುವರೆದಿದ್ದು, ಶಿಕಾರಿಪುರದಲ್ಲಿ ಜನತಾದರ್ಶನ ಆಯೋಜಿಸಲಾಗಿದೆ. ಇಲ್ಲಿ ಸಾರ್ವಜನಿಕರಿಂದ ಪಡೆದ ಸುಮಾರು 275ಅರ್ಜಿಗಳಲ್ಲಿ ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲಾಗಿದೆ. ಉಳಿದ ಅರ್ಜಿಗಳನ್ನು ನಿಯಮಿತ ಕಾಲಾವಧಿಯಲ್ಲಿ ವಿಲೇವಾರಿ ಮಾಡುವಂತೆ ಸೂಚಿಸಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗಿದೆ. ಸಾರ್ವಜನಿಕರು ಈ ಅರ್ಜಿಗಳ ಪ್ರತಿ ಹಂತದ ಮಾಹಿತಿಯನ್ನು ಸಾಮಾಜಿಕ ಜಾಲತಾಣದ ಮೂಲಕ ತಿಳಿಯಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವೃದ್ಧರು ಮಹಿಳೆಯರು ಮಕ್ಕಳು ಸಾರ್ವಜನಿಕರಿಂದ ಮೊದಲ ಹಂತದಲ್ಲಿ ಅರ್ಜಿಗಳನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು ನಂತರದಲ್ಲಿ ವೈಯಕ್ತಿಕ ಹಾಗೂ ಗುಂಪುಗಳಲ್ಲಿ ಅರ್ಜಿಗಳನ್ನು ಪಡೆದು, ಕೆಲವು ಅರ್ಜಿಗಳಿಗೆ ತಕ್ಷಣದ ಪರಿಹಾರ ಕ್ರಮ ಕೈಗೊಳ್ಳಲಾಗುವುದು. ತಾಂತ್ರಿಕ, ಮತ್ತಿತರ ಸಮಸ್ಯೆಗಳಿರುವ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ವರ್ಗಾಯಿಸಿ ಶೀಘ್ರವಾಗಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದವರು ನುಡಿದರು.

ಸಲ್ಲಿಕೆಯಾದ ಅರ್ಜಿಗಳಲ್ಲಿ ಪ್ರಮುಖವಾಗಿ ಬಗರ್‌ಹುಕುಂ ಸಾಗುವಳಿ ಭೂಮಿ ಮಂಜೂರಾತಿ, ಅಂಜನಾಪುರ ಜಲಾಶಯದ ಹೂಳೆತ್ತುವುದು, ರೈಲ್ವೆ ಮಾರ್ಗ ವಿಸ್ತರಣೆಗೆ ಭೂಸ್ವಾಧೀನಪಡಿಸಿಕೊಂಡ ರೈತರಿಗೆ ಸಕಾಲದಲ್ಲಿ ಪರಿಹಾರ ಧನ ಬಿಡುಗಡೆ, ವರ್ತುಲ ರಸ್ತೆ, ಬೈಪಾಸ್ ರಸ್ತೆ, ಕೆರೆ ಒತ್ತುವರಿ ತೆರವುಗೊಳಿಸಿ ಗ್ರಾಮೀಣ ಪ್ರದೇಶದ ಕೆರೆಕಟ್ಟೆಕಾಲುವೆಗಳಲ್ಲಿನ ಹೂಳನ್ನು ತೆಗೆಸಿ ಜನ- ಜಾನುವಾರುಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದು, ಅಕ್ರಮ ಮನೆಗಳನ್ನು ಸಕ್ರಮಗೊಳಿಸುವುದು, ಇ-ಸ್ವತ್ತು ಮಾಡಿಸುವುದು, ಹೊಸ ಅಂಗನವಾಡಿ ಕೇಂದ್ರಗಳ ಮಂಜೂರಾತಿ, ರೇಷನ್‌ಕಾರ್ಡ್,ಇಂದಿರಾ ಕ್ಯಾಂಟೀನ್, ಗೃಹಲಕ್ಷ್ಮಿ ಯೋಜನೆ ಅಡಿ ಸೌಲಭ್ಯ ಕೊಡಿಸಿ, ಮಕ್ಕಳ ಶೈಕ್ಷಣ ಕ ಹಿತದೃಷ್ಟಿಯಿಂದ ಗ್ರಾಮೀಣ ಪ್ರದೇಶಗಳಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಸಂಪರ್ಕ ಸೌಲಭ್ಯ, ರೈತರ ಜಮೀನುಗಳನ್ನು ಖಾತೆ ಪೋಡಿ ಮಾಡಿಕೊಡುವುದು, ಗ್ರಾಮೀಣ ಪ್ರದೇಶದಲ್ಲಿ ಸ್ಮಶಾನಭೂಮಿ ಮಂಜೂರಾತಿ ಮುಂತಾದ ಸಾಮಾನ್ಯದಿಂದ ಗಂಭೀರ ಸ್ವರೂಪದ 275ಕ್ಕೂ ಹೆಚ್ಚಿನ ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆಯಾದವು.

Janata Darshan programme ಅಲ್ಲದೇ ಸಾರ್ವಜನಿಕರ ನೆಮ್ಮದಿಯ ಕೌಟುಂಬಿಕ ಬದುಕನ್ನು ಹಾಳು ಮಾಡುವ ಮಟ್ಕಾ, ಜೂಜುಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕು. ಸಂಚಾರಿ ಪೊಲೀಸ್ ಠಾಣೆ, ಚೋರಡಿ-ಶಿಕಾರಿಪುರ ರಸ್ತೆ ದುರಸ್ತಿ, ಗೃಹಲಕ್ಷ್ಮಿ ಯೋಜನೆಯಡಿ ಸೌಲಭ್ಯ ಮಂಜೂರು ಮಾಡುವುದು ಸೇರಿದಂತೆ ಇನ್ನಷ್ಟು ವಿಷಯಗಳ ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆಯಾದವು.

ಈ ಸಂದರ್ಭದಲ್ಲಿ ಸಿ.ಇ.ಒ. ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ದಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...