Saturday, December 6, 2025
Saturday, December 6, 2025

Youth Congress ಸಂಸದ ಪ್ರತಾಪ ಸಿಂಹ ಅವರ ರಾಜಿನಾಮೆಗೆ ಒತ್ತಾಯ

Date:

Youth Congress ಸಂಸತ್ ಭವನದ ದಾಳಿಗೆ ಕಾರಣರಾಗಿರುವ ಪ್ರತಾಪ್‌ ಸಿಂಹ ಅವರನ್ನು ಕೂಡಲೇ ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ನಡೆಸಬೇಕು ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಸಂಸತ್ ಭವನದ ಮೇಲೆ ಸ್ಮೋಕ್ ಬಾಂಬ್ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಸಂಸದ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಪಾಸ್ ಪಡೆದಿರುವ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು’ ಎಂದು ಚೇತನ್ ಪ್ರಶ್ನಿಸಿದ್ದಾರೆ.

ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ ಎಂದಿದ್ದಾರೆ.

ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ ಎಂದಿದ್ದಾರೆ.

Youth Congress ಇಪ್ಪತ್ತೆರಡು ವರ್ಷಗಳ ಹಿಂದೆ (2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಭದ್ರತಾ ಲೋಪ ಎದ್ದು ಕಾಣುತ್ತಿದೆ. 300 ಕೆಜಿ RDX ಯಾವುದೇ ಅಡೆತಡೆ ಇಲ್ಲದೆ ಕಾಶ್ಮೀರದೊಳಗೆ ಬರುತ್ತದೆ. ಸ್ಪೋಟಕ ವಸ್ತು ಯಾವುದೇ ಅಡೆತಡೆ ಇಲ್ಲದೆ ಸಂಸತ್ತಿನೊಳಗೆ ಬರುತ್ತದೆ. ಸಂಸತ್ತನ್ನೇ ಕಾಯಲಾಗದ ಚೌಕಿದಾರ್ ದೇಶ ಕಾಯಲು ಸಾಧ್ಯವೇ? ಎಂದು ಚೇತನ್ ಪ್ರಶ್ನಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...