Saturday, December 6, 2025
Saturday, December 6, 2025

All India Rural Postal Servants Association ಎರಡನೇ ದಿನಕ್ಕೆ ಕಾಲಿಟ್ಟ ಕೊಪ್ಪ ತಾಲ್ಲೂಕು ಅಂಚೆ ನೌಕರರ ಸಂಘದ ಪ್ರತಿಭಟನೆ

Date:

All India Rural Postal Servants Association ವಿವಿಧ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ ಎರಡನೇ ಕಾಲಿಟ್ಟಿದ್ದು ನಿರಂತರವಾಗಿ ಸಾರ್ವಜನಿಕ ಸೇವೆಯನ್ನು ತ್ಯಜಿಸಿ 7ನೇ ವೇತನ ಆಯೋಗದ ವರದಿ ಜಾರಿಗೊಳಿಸುವಂತೆ ನೌಕರರು ಪಟ್ಟು ಹಿಡಿದರು.

ಈ ವೇಳೆ ಮಾತನಾಡಿದ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದ ಅಧ್ಯಕ್ಷ ಟಿ.ಸಿ.ಚಂದ್ರಪ್ರಕಾಶ್ ನಿರಂತರವಾಗಿ ಚಿಕ್ಕಮಗಳೂರು ಹಾಗೂ ಕೊಪ್ಪ ತಾಲ್ಲೂಕಿನಲ್ಲಿ ಅಂಚೆ ನೌಕರರು ಎರಡನೇ ದಿನಕ್ಕೆ ಪ್ರತಿಭಟನೆ ನಡೆಸಲಾಗುತ್ತಿದ್ದು ಗುರುವಾರದಿಂದ ಆಯಾ ತಾಲ್ಲೂಕು ಮಟ್ಟದಲ್ಲಿ ನೌಕರರು ಮುಷ್ಕರವನ್ನು ಮುಂದುವರೆಸಲಿದ್ದಾರೆ ಎಂದು ಹೇಳಿದರು.

ಸರ್ಕಾರ ಎಲ್ಲಿಯವರೆಗೆ ನೌಕರರ ಬೇಡಿಕೆಗಳನ್ನು ಈಡೇರಿಸುವುದಿಲ್ಲವೋ ಅಲ್ಲಿಯವರೆಗೂ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ತಮ್ಮ ಕೆಲಸವನ್ನು ತ್ಯಜಿಸುವ ಮೂಲಕ ಪ್ರತಿಭಟನೆ ನಡೆಸಲಿ ದ್ದಾರೆ.

ಇದರಿಂದ ಪ್ರತಿನಿತ್ಯ ಜಿಲ್ಲೆಯಲ್ಲಿ 250 ಗ್ರಾಮೀಣ ಅಂಚೆ ಕಚೇರಿಗಳನ್ನು ಬಂದ್‌ಗೊಳಿಸಿ ಸೇವೆಯನ್ನು ಸ್ಥಗಿತ ಗೊಳಿಸಲಾಗುತ್ತಿದೆ ಎಂದರು.

ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಒಟ್ಟು 1.55 ಲಕ್ಷ ಅಂಚೆ ಕಚೇರಿಗಳಲ್ಲಿ ಕಳೆದ ಎರಡು ದಿನಗಳಿ ಂದ ತಮ್ಮೆಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದೆ.

All India Rural Postal Servants Association ನೌಕರರ ಬೇಡಿಕೆಗೆ ಸಂಬಂಧ ರಾಜ್ಯದ 26 ಸಂಸದರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಕೂಡಾ ಸಮಸ್ಯೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಆರೋಪಿ ಸಿದರು.

ಕೂಡಲೇ ಸರ್ಕಾರಗಳು ಮದ್ಯಪ್ರವೇಶಿಸಿ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಂಘದ ವಿಭಾಗೀಯ ಕಾರ್ಯದರ್ಶಿ ಟಿ.ಹನುಮಂತಪ್ಪ, ಖಜಾಂಚಿ ಎ.ಓ.ಭರತ್, ಕಾರ್ಯಕಾರಿ ಸಮಿತಿಯವರಾದ ಗಂಗಾಧರ್, ಸುರೇಶ್, ಶಿವಣ್ಣ, ಹರ್ಷ, ಘನಲಿಂಗಮೂರ್ತಿ, ನಿಶಾಂತ್, ನೌಕರರಾದ ಪ್ರಕಾಶ್, ಶಿವಶಂಕರ್, ರವಿ, ಶೇಷಣ್ಣಗೌಡ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...