Monday, December 15, 2025
Monday, December 15, 2025

District Rural Postal Servants Association ಪ್ರತಿಭಟನೆ ನಡೆಸುತ್ತಿರುವ ಗ್ರಾಮೀಣ ಅಂಚೆ ನೌಕರರ ಸಂಘಕ್ಕೆ ಬೆದರಿಕೆ,ಸೂಕ್ತ ನ್ಯಾಯಕ್ಕೆ ನೌಕರರ ಮನವಿ

Date:

District Rural Postal Servants Association ನಿರಂತರವಾಗಿ ಗ್ರಾಮೀಣ ಅಂಚೆ ನೌಕರರ ಮುಷ್ಕರ ಮೂರನೇ ದಿನ ಪೂರೈಸಿದ ಹಿನ್ನೆಲೆಯಲ್ಲಿ ಇಲಾಖೆ ಮೇಲಾಧಿಕಾರಿಗಳಿಂದ ಬೆದರಿಕೆಗಳು ಬರಲಾರಂಭಿಸಿದ್ದು ನೌಕರರಿಗೆ ಸೂಕ್ತ ನ್ಯಾಯ ಒದಗಿಸಿಕೊಡಬೇಕು ಎಂದು ಜಿಲ್ಲಾ ಗ್ರಾಮೀಣ ಅಂಚೆ ಸೇವಕರ ಸಂಘ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಈ ಸಂಬಂಧ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಗುರುವಾರ ಮನವಿ ಸಲ್ಲಿಸಿದ ಸಂಘದ ಪದಾಧಿಕಾರಿಗಳು ಸಂವಿಧಾನದಡಿಯಲ್ಲಿ ನ್ಯಾಯಕ್ಕಾಗಿ ಶಾಂತಿಯುತವಾಗಿ ಮುಷ್ಕರ ನಡೆಸುತ್ತಿರುವ ನೌಕರರಿಗೆ ಇಲಾಖೆಯ ಮೇಲಾಧಿಕಾರಿಗಳು ವೃತ್ತಿಯಲ್ಲಿ ನಿರಂತರಾಗದಿದ್ದರೆ ಅಮಾನತ್ತುಗೊಳಿಸುವ ಬೆದರಿಕೆಗಳು ಬರುತ್ತಿವೆ ಎಂದು ಹೇಳಿದರು.

ಭಾರತೀಯ ಸಂವಿಧಾನದ ಪ್ರಕಾರ ನ್ಯಾಯಸಮ್ಮತವಾದ ಹಕ್ಕನ್ನು ಹತ್ತಿಕ್ಕುವ ಪ್ರಯತ್ನವನ್ನು ಅಂಚೆ ಇಲಾಖೆ ಅಧಿಕಾರಿಗಳು ಮಾಡುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ನೌಕರರ ಜೀವನ ಸುರಕ್ಷತೆ ಹಾಗೂ ಪರಿಸ್ಥಿತಿ ಅರ್ಥೈಸಿಕೊಂಡು ಸಮ್ಮತವಾದ ಹಕ್ಕುಗಳನ್ನು ಪ್ರತಿಪಾದಿಸಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಅಂಚೆ ಸೇವಕರ ಒಕ್ಕೂಟದಿಂದ ಜಿಲ್ಲೆಯಾದ್ಯಂತ ಕಮಲೇಶ್‌ಚಂದ್ರ ವರದಿಯ ಶಿಫಾರಸ್ಸುಗಳನ್ನು ಯಥಾವತ್ತಾಗಿ ಅನುಮೋದನೆ ಮಾಡಲು ಕಳೆದ ಮೂರು ದಿನಗಳಿಂದ ಅನಿರ್ದಿಷ್ಟ ಮುಷ್ಕರ ನಡೆಸುವ ಮೂಲಕ ಪತ್ರ ನೀಡಿದರೂ ಸಹ ಅಧಿಕಾರಿ ವರ್ಗದವರು ಸಕರಾತ್ಮಕವಾಗಿ ಸ್ಪಂದಿಸುತ್ತಿಲ್ಲ ಎಂದು ಹೇಳಿದರು.

ಆ ನಿಟ್ಟಿನಲ್ಲಿ ದೇಶಾದ್ಯಂತ ಗ್ರಾಮೀಣ ಅಂಚೆ ನೌಕರರು ಮುಷ್ಕರದಲ್ಲಿ ತೊಡಗಿದ್ದು ಇಲಾಖೆಯ ಮೇಲಾ ಧಿಕಾರಿಗಳು ಹೊಸದಾಗಿ ಸೇರ್ಪಡೆಗೊಂಡಿರುವ ಯುವಕರಿಗೆ ಅಮಾನತ್ತು ಸೇರಿದಂತೆ ಇತರೆ ರೀತಿಯ ಬೆದರಿಕೆ ಹಾಕಲಾಗುತ್ತಿದ್ದು ಇದ್ಯಾವುದಕ್ಕೂ ಜಗ್ಗದೇ ಎಲ್ಲಾ ತಾಲ್ಲೂಕುಗಳಲ್ಲಿ ಅಂಚೆ ನೌಕರರು ನಿರಂತರ ಮುಷ್ಕರದಲ್ಲಿ ತೊಡ ಗಿದ್ದಾರೆ ಎಂದರು.

District Rural Postal Servants Association ಹಾಗಾಗಿ ಜಿಲ್ಲಾಡಳಿತ ಸೀಮಿತ ಅವಧಿಗಿಂತ ಹೆಚ್ಚುಗಳ ಕಾಲ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ನ್ಯಾಯ ಯುತ ಬೇಡಿಕೆಗಳು ದೊರೆಯುವಂತೆ ಕೇಂದ್ರ ಸರ್ಕಾರ ಕಣ್ತೆರೆಸುವ ರೀತಿಯಲ್ಲಿ ಗಮನಕ್ಕೆ ತರಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಟಿ.ಸಿ.ಚಂದ್ರಪ್ರಕಾಶ್, ಕಾರ್ಯದರ್ಶಿ ಹನುಮಂತಪ್ಪ, ಸದಸ್ಯರುಗಳಾದ ಜೋಸೆಫ್ ಪೆರೋಟೋ, ವೇಣುಗೋಪಾಲಸ್ವಾಮಿ, ರಂಗನಾಥ್, ಸತೀಶ್ ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...