Wednesday, October 2, 2024
Wednesday, October 2, 2024

District Commissioner Office Shimoga ಸಾರ್ವಜನಿಕ ವಾಗಿ ಏಕಬಳಕೆ ಪ್ಲಾಸ್ಟಿಕ್ ಕಡ್ಡಾಯವಾಗಿ ನಿಷೇಧಿಸಬೇಕು-ನ್ಯಾ.ಸುಭಾಷ್.ಬಿ.ಅಡಿ

Date:

District Commissioner Office Shimoga ಮಲೆನಾಡಿನ ಹೆಬ್ಬಾಗಿಲೆನಿಸಿರುವ ಶಿವಮೊಗ್ಗ ಜಿಲ್ಲೆ ಸ್ವಚ್ಚ, ಸುಂದರ ಹಾಗೂ ಸದಾ ಹಸಿರಾಗಿರುವಂತೆ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಾರ್ವಜನಿಕರು ಸಹ ಸಹಕರಿಸುವಂತೆ ಹಾಗೂ ಇರುವ ವ್ಯವಸ್ಥೆಯನ್ನು ಅದು ಇರುವಂತೆಯೇ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡುವ ಅಗತ್ಯವಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಅಧ್ಯಕ್ಷ ಗೌ.ನ್ಯಾ.ಸುಭಾಷ್ ಬಿ.ಅಡಿ ಅವರು ಹೇಳಿದರು.

ಅವರು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಸ್ವಚ್ಚತೆ, ತ್ಯಾಜ್ಯ ನಿರ್ವಹಣೆ ಹಾಗೂ ಪರಿಸರಕ್ಕೆ ಸಂಬoಧಿಸಿದoತೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಸಂಬoಧಿಸಿದ ಇಲಾಖೆಗಳ ಅಧಿಕಾರಿಗಳ ಉಪಸ್ಥಿತಿಯಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳು, ಜನಸಂದಣಿ ಇರುವ ಬಸ್‌ನಿಲ್ದಾಣ, ರೈಲ್ವೇಸ್ಟೇಷನ್‌ಗಳು ಸೇರಿದಂತೆ ಎಲ್ಲೆಡೆಯಲ್ಲಿಯೂ ಏಕಬಳಕೆಯ ಪ್ಲಾಸ್ಟಿಕ್‌ನ್ನು ಕಡ್ಡಾಯವಾಗಿ ನಿಷೇಧಿಸಬೇಕು. ನಿರ್ಬಂಧವನ್ನು ನಿರ್ಲಕ್ಷಿಸುವ ವ್ಯಕ್ತಿ ಅಥವಾ ಅಂಗಡಿ ಮುಂಗಟ್ಟುಗಳ ವಿರುದ್ಧ ನಿಯಮಾನುಸಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅದಕ್ಕೆ ಪರ್ಯಾಯವಾಗಿ ಸ್ಥಳೀಯ ಸಂಘಟನೆಗಳು ಹಾಗೂ ದಾನಿಗಳ ಸಹಕಾರದೊಂದಿಗೆ ಬಟ್ಟೆಯ ಬ್ಯಾಗುಗಳನ್ನು ಬಳಸಲು ಜನರಿಗೆ ಪ್ರೇರಣೆ ನೀಡುವಂತೆ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.

ಪುನರ್‌ಬಳಕೆಗೆ ಯೋಗ್ಯವಲ್ಲದ ಪ್ಲಾಸ್ಟಿಕ್‌ನ್ನು ಸಂಗ್ರಹಿಸಿ, ರಸ್ತೆಗಳ ನಿರ್ಮಾಣ ಕಾರ್ಯದಲ್ಲಿ ಶೇ.8ರಷ್ಟು ಬಳಸಲು ಗುತ್ತಿಗೆದಾರರಿಗೆ ಸೂಚಿಸಬೇಕು. ಇದು ಹೆಚ್ಚು ಬಾಳಿಕೆಯುಳ್ಳದ್ದು, ಹಾಗೂ ಕಡಿಮೆ ವೆಚ್ಚದಾಯಕವೂ ಆಗಿರುವುದನ್ನು ಗಮನಿಸಬೇಕೆಂದವರು ನುಡಿದರು.

District Commissioner Office Shimoga ನಗರದ ಸೌಂದರ್ಯವನ್ನು ಹಾಳುಮಾಡುತ್ತಿರುವ ಬಿತ್ತಿಫಲಕಗಳು, ಪೋಸ್ಟರ್‌ಗಳು, ಬಂಟಿoಗ್ಸ್ಗಳನ್ನು ನಿಷೇಧಿಸಬೇಕು. ಇಲ್ಲಿನ ಪರಿಸರ ಹಾಳಾಗದಂತೆ ಅದನ್ನು ರಕ್ಷಿಸಿಕೊಳ್ಳುವ ಹೊಣೆಗಾರಿಕೆ ಪ್ರತಿಯೊಬ್ಬರದ್ದಾಗಿದೆ. ನಗರದ ಪುಟ್‌ಪಾತ್‌ಗಳನ್ನು ಅಲ್ಲಿನ ತ್ಯಾಜ್ಯವನ್ನು ಸ್ವಚ್ಚವಾಗಿರಿಸಿ, ಜನಸಂಚಾರಕ್ಕೆ ಮುಕ್ತವಾಗಿರಿಸಬೇಕು. ಅಲ್ಲದೆ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವೂ ಆಗಬೇಕಾಗಿದೆ ಎಂದರು.

ಎಲ್ಲಕ್ಕೂ ಮೊದಲು ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳು, ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್‌ಗಳ ಬಳಕೆಯನ್ನು ನಿಷೇಧಿಸಬೇಕು. ಅಲ್ಲದೇ ಕಚೇರಿ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ತ್ಯಾಜ್ಯವನ್ನು ಸರಿಯಾದ ಕ್ರಮದಲ್ಲಿ ಬೇರ್ಪಡಿಸಿ, ವಿಲೇಮಾಡುವಂತೆ ಸಲಹೆ ನೀಡಿದ ಅವರು, ಎಲ್ಲೆಂದರಲ್ಲಿ ಪೋಸ್ಟರ್‌ಗಳನ್ನು ಹಾಕುವ ಬದಲಾಗಿ ಎಲ್.ಇ.ಡಿ.ಪರದೆಗಳು, ಸಾಮಾಜಿಕ ಜಾಲತಾಣಗಳನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುವಂತೆ ಅವರು ಸಲಹೆ ನೀಡಿದರು.

ನಗರ ಪ್ರದೇಶಗಳಲ್ಲಿ ವಿವಿಧ ಸಂಘ-ಸoಸ್ಥೆಗಳು ಆಯೋಜಿಸುವ ಕಾರ್ಯಕ್ರಮ, ರಾಜಕೀಯ ಪಕ್ಷಗಳ ಕಾರ್ಯಕ್ರಮಗಳು, ಸಭಾಂಗಣಗಳ ಕಾರ್ಯಕ್ರಮಗಳು ನಡೆಯಲು ಅನುಮತಿ ಪಡೆಯಬೇಕು. ನಂತರ ಉತ್ಪತ್ತಿಯಾಗುವ ತ್ಯಾಜ್ಯದ ಸಮರ್ಪಕ ವಿಲೇವಾರಿಗೂ ಸ್ಥಳೀಯ ಸಂಸ್ಥೆಗಳು ಶುಲ್ಕ ನಿಗಧಿಪಡಿಸಬೇಕೆಂದವರು ನುಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಅರಣ್ಯಾಧಿಕಾರಿ ಶಿವಶಂಕರ್, ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ನಗರ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಮನೋಹರ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...