Thursday, December 18, 2025
Thursday, December 18, 2025

Siddaramaiah ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

Siddaramaiah ವಿಧಾನಮಂಡಲದಲ್ಲಿ ಇಂದು ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಸಂಬಂಧಿಸಿದಂತೆ ಸದನದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಉತ್ತರಿಸಿದರು.

ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು ಹಾಗೂ ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ.
ಪ್ರತ್ಯೇಕ ಕರ್ನಾಟಕಕ್ಕೆ ಒತ್ತಾಯ ಮಾಡುವುದು ಏಕೀಕರಣಕ್ಕೆ ಹೋರಾಡಿ, ಪ್ರಾಣ ತ್ಯಾಗ ಮಾಡಿದವರಿಗೆ ನಾವು ಮಾಡುವ ಅವಮಾನವಾಗಿದೆ.

ಏಕೀಕರಣಕ್ಕಾಗಿ ಬಹಳ ಜನ ಗಣ್ಯರು ಹೋರಾಡಿದರು. ಭಾಷಾವಾರು ಪ್ರಾಂತ್ರ್ಯ ರಚನೆಯಾಗುವಾಗಲು ಹೋರಾಟ ಮಾಡಿದವರಿದ್ದಾರೆ. ಹೈದರಾಬಾದ್ ಕರ್ನಾಟಕಕ್ಕೆ 371 ಗೆ ತಿದ್ದುಪಡಿ ಆಗಿ 371 ಜೆ ಪರಿಚ್ಛೇದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್, ವೈಜನಾಥ್ ಪಾಟೀಲ್ ಮುಂತಾದವರು ಹೋರಾಡಿದರು. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 2014 ಮತ್ತು 2017 ರಲ್ಲಿ ಉತ್ತರ ಕರ್ನಾಟಕದದ ಬಗ್ಗೆ ಚರ್ಚೆಯಾಗಿತ್ತು. ಒಮ್ಮೆ ಈ ಬಗ್ಗೆ ಎರಡು ಗಂಟೆಗಳಿಗೂ ಹೆಚ್ಚು ಕಾಲ ಉತ್ತರ ನೀಡಿದ್ದೆ.

Siddaramaiah ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನ ಪೂರ್ತಿ ಖರ್ಚಾಗಿ ಅಭಿವೃದ್ಧಿಯಾಗಬೇಕು. ಕಿತ್ತೂರು ಕರ್ನಾಟಕದ 5 ತಾಲ್ಲೂಕುಗಳು ಸೇರಿದಂತೆ ಹಿಂದುಳಿದ, ಅತೀ ಹಿಂದುಳಿದ ತಾಲ್ಲೂಕುಗಳಿಗೂ ಅನುದಾನ ಕೊಡಲಾಗುವುದು. ಕಲ್ಯಾಣ ಕರ್ನಾಟಕಕ್ಕೆ 2013-14 ರಿಂದ ಈವರೆಗೆ 14,877.36 ಕೋಟಿ ರೂ.ಗಳು ಮೀಸಲಿಡಲಾಗಿದೆ. ಬಿಡುಗಡೆಯಾಗಿದ್ದು 10,280 ಕೋಟಿ ರೂ. ಹಾಗೂ 8,330 ಕೋಟಿ ರೂ. ವೆಚ್ಚವಾಗಿದೆ. ಮುಂದಿನ ವರ್ಷದಿಂದ 5,000 ಕೋಟಿ ರೂ.ಗಳನ್ನು ಕಲ್ಯಾಣ ಕರ್ನಾಟಕಕ್ಕೆ ನೀಡಲಾಗುವುದು . ಮುಂಬೈ ಕರ್ನಾಟಕದ ಹಿಂದುಳಿದ ತಾಲ್ಲೂಕುಗಳಿಗೂ ಅನುದಾನ ನೀಡಲಾಗುವುದು ಎಂದು ಮುಖ್ಯ ಮಂತ್ರಿ ಗಳು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...