Thursday, March 19, 2026
Thursday, March 19, 2026

Pariniti Kalakendra ನೃತ್ಯೋತ್ಸವಗಳಿಂದ ನಿರಂತರ ಪ್ರೋತ್ಸಾಹ ಸಿಗುತ್ತಿದೆ ಪ್ರತಿಯೊಬ್ಬ ಕಲಾವಿದರೂ ಇದರ ಲಾಭ ಪಡೆದುಕೊಳ್ಳಬೇಕು- ನೃತ್ಯಗುರು ಮಿನಾಲ್ ಪ್ರಭು

Date:

Pariniti Kalakendra ನೃತ್ಯ ಉತ್ಸವಗಳಿಂದ ಕಲಾವಿದರಿಗೆ ನಿರಂತರವಾಗಿ ಪ್ರೋತ್ಸಾಹ ಸಿಗುತ್ತಿದ್ದು, ಪ್ರತಿಯೊಬ್ಬ ಕಲಾವಿದರು ಉತ್ಸವ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗುರು ಕರ್ನಾಟಕ ಕಲಾಶ್ರೀ ಪುರಸ್ಕೃತ ನೃತ್ಯ ಗುರು ಮಿನಾಲ್ ಪ್ರಭು ಅಭಿಪ್ರಾಯಪಟ್ಟರು.

ಪರಿಣಿತಿ ಕಲಾಕೇಂದ್ರದ ವತಿಯಿಂದ ಸಾಗರದ ಗಾಂಧಿ ಮೈದಾನದಲ್ಲಿ ಆಯೋಜಿಸಿದ್ದ “9ನೇ ವರ್ಷದ ಪರಿಣಿತಿ ರಾಷ್ಟ್ರೀಯ ನೃತ್ಯ, ಯೋಗ ಹಾಗೂ ಸಂಗೀತೋತ್ಸವ” ಕಾರ್ಯಕ್ರಮದಲ್ಲಿ ಮಾತನಾಡಿದರು.

ದಶಕಗಳ ಹಿಂದೆ ನೃತ್ಯ ಕಲಿಕೆಗೆ, ಕಾರ್ಯಕ್ರಮಗಳಿಗೆ ಸೂಕ್ತ ಪ್ರೋತ್ಸಾಹ ಸಿಗುತ್ತಿರಲಿಲ್ಲ. ಆದರೆ ಇಂದಿನ ಕಾಲದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಯಕ್ರಮಗಳಿಗೆ ಸಹಕಾರ ನೀಡುವ ಮೂಲಕ ಕಲಾವಿದರಿಗೆ ಸೂಕ್ತ ಪ್ರೋತ್ಸಾಹ ಸಿಗುತ್ತಿದೆ ಎಂದು ತಿಳಿಸಿದರು.
ಪರಿಣಿತಿ ಕಲಾಕೇಂದ್ರದ ಕಾರ್ಯದರ್ಶಿ ವಿದ್ವಾನ್ ಎಂ.ಗೋಪಾಲ್ ಮಾತನಾಡಿ, 15 ವರ್ಷಗಳಿಂದ ಸಾಗರದಲ್ಲಿ ಪರಿಣಿತಿ ಕಲಾಕೇಂದ್ರವು ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದ್ದು, 9 ವರ್ಷಗಳಿಂದ ರಾಷ್ಟ್ರೀಯ ನೃತ್ಯ ಉತ್ಸವ ನಡೆಸಲಾಗುತ್ತಿದೆ. ಸಾಗರದ ಜನತೆಯ ಎಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದರು.

ಪರಿಣಿತಿ ಕಲಾಕೇಂದ್ರದಲ್ಲಿ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡುತ್ತಿರುವುದು, ವಿವಿಧ ರಾಜ್ಯಗಳಲ್ಲಿ ನಡೆಯುವ ರಾಷ್ಟ್ರೀಯ ಉತ್ಸವಗಳಲ್ಲಿ ಪಾಲ್ಗೊಳ್ಳುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚೆಚ್ಚು ವೇದಿಕೆ ಕಲ್ಪಿಸುವ ಉದ್ದೇಶದಿಂದ ಕಾರ್ಯಕ್ರಮ ರೂಪಿಸಲಾಗುವುದು ಎಂದು ಹೇಳಿದರು.

ಪರಿಣಿತಿ ಕಲಾಕೇಂದ್ರದ ಗೌರವಾಧ್ಯಕ್ಷೆ ವೀಣಾ ಬೆಳೆಯೂರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಿಂದ ಆಯೋಜಿಸಿರುವ ಪರಿಣಿತಿ ನೃತ್ಯ, ಯೋಗ ಹಾಗೂ ಸಂಗೀತೋತ್ಸವದಲ್ಲಿ ಪಶ್ಚಿಮ ಬಂಗಾಳ, ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿದ ಹೆಸರಾಂತ ಕಲಾವಿದರು ಪ್ರದರ್ಶನ ನೀಡುತ್ತಿದ್ದಾರೆ ಎಂದು ತಿಳಿಸಿದರು.

Pariniti Kalakendra ನೃತ್ಯ ಸಂಗೀತೋತ್ಸವದಲ್ಲಿ ವಿವಿಧ ರಾಜ್ಯಗಳ ಕಲಾವಿದರು ಪ್ರದರ್ಶನ ನೀಡುವುದರಿಂದ ವೈವಿಧ್ಯ ಕಲಾ ಪ್ರಕಾರಗಳ ಪರಿಚಯ ಸ್ಥಳೀಯ ಕಲಿಕಾರ್ಥಿಗಳಿಗೆ ಆಗುತ್ತದೆ. ಸ್ಥಳೀಯ ಪ್ರತಿಭೆಗಳಿಗೂ ರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಪ್ರದರ್ಶನ ನೀಡಲು ಅವಕಾಶ ಸಿಗುತ್ತದೆ ಎಂದರು.

ಬೆಂಗಳೂರಿನ ಮುದ್ರಿಕಾ ಫೌಂಡೇಶನ್ ಗುರು ಕರ್ನಾಟಕ ಕಲಾಶ್ರೀ ಮಿನಾಲ್ ಪಭು ತಂಡದಿಂದ ಭರತನಾಟ್ಯ, ಕಾಸರಗೋಡಿನ ಗೋಪಾಲ ಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ಕೆ.ವಿ.ರಮೇಶ್ ಅವರಿಂದ ಬೊಂಬೆಯಾಟ, ವಿದೂಷಿ ಅದಿತಿ ಪ್ರಹ್ಲಾದ್ ಬೆಂಗಳೂರು ತಂಡದಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, ಕೇರಳದ ಪ್ರಸಿದ್ಧ ಗುರು ಕಲಾನಿಲಯಮ್ ವಾಸುದೇವನ್ ತಂಡದಿಂದ ಕಥಕ್ ನೃತ್ಯ ಕಾರ್ಯಕ್ರಮ ನಡೆಯಿತು.

ಉದ್ಯಮಿ ಎಸ್.ಡಿ.ವೀರಪ್ಪ, ಉದ್ಯಮಿ ಟಿ.ವಿ.ಪಾಂಡುರಂಗ, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಮಾಜಿ ಸದಸ್ಯ ಕೆ.ಸಿದ್ದಪ್ಪ, ಪರಿಣಿತಿ ಕಲಾಕೇಂದ್ರ ಸಾಗರ ಅಧ್ಯಕ್ಷ ಸೋಮಶೇಖರ್, ಕಲಾಪೋಷಕ ಸುಬ್ಬರಾಯರು, ಮೈತ್ರಿ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...