Bhadravati Corporation ಭದ್ರಾವತಿ ನಗರಸಭಾ ವ್ಯಾಪ್ತಿಯ ವಾರ್ಡ್ ನಂ.06 ರ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ವೃತ್ತದ ಬಳಿಯಿಂದ ರಂಗಪ್ಪ ವೃತ್ತದವರೆಗಿನ ರಸ್ತೆಗೆ ‘ಪುನೀತ್ ರಾಜ್‍ಕುಮಾರ್ ರಸ್ತೆ’ ಎಂದು ನಾಮಕರಣ ಮಾಡಲು ನ.25 ರಂದು ನಡೆದ ಕೌನ್ಸಿಲ್ ಸಾಮಾನ್ಯ ಸಭೆಯಲ್ಲಿ ನಡವಳಿಕೆ ರೀತ್ಯಾ ಸರ್ವಾನುಮತದಿಂದ ತೀರ್ಮಾನಿಸಲಾಗಿದೆ.
Bhadravati Corporation ಸಾರ್ವಜನಿಕರು ನಾಮಕರಣ ಮಾಡುವ ಬಗ್ಗೆ ತಮ್ಮ ಸಲಹೆ ಸೂಚನೆ ಅಥವಾ ತಕರಾರು/ಆಕ್ಷೇಪಣೆಗಳಿದ್ದಲ್ಲಿ ಜ.16 ರೊಳಗೆ ಭದ್ರಾವತಿ ನಗರಸಭೆ, ಪೌರಾಯುಕ್ತರು ಇವರಿಗೆ ಲಿಖಿತವಾಗಿ ಸಲ್ಲಿಸಬಹುದೆಂದು ಭದ್ರಾವತಿ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ
