Monday, April 21, 2025
Monday, April 21, 2025

Health Department Of karnataka ಕೋವಿಡ್ 19 ರಾಜ್ಯದಲ್ಲಿ ಮಾರ್ಗಸೂಚಿ ಬಿಡುಗಡೆ

Date:

Health Department Of karnataka COVID19 ಕೇರಳ ರಾಜ್ಯದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾರ್ವಜನಿಕರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಹೊರಡಿಸಿರುವ ಈ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕರ್ನಾಟಕ ಸರ್ಕಾರದಿಂದ ಆದೇಶಿಸಲಾಗಿದೆ.

ಪ್ರಸ್ತುತ, ದೇಶದ ಕೋವಿಡ್ – 19ನ ಅಂಕಿ-ಅಂಶಗಳು, ಕೇರಳ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್ 19 ನ ಉಪತಳಿ JN.1 ವರದಿಯಾಗಿರುವುದು, ಚಳಿಗಾಲದ ಹವಾಮಾನ, ಕ್ರಿಸ್ ಮಸ್ ಹಾಗೂ ಹೊಸವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ ಜನದಟ್ಟಣೆ, ಈ ಎಲ್ಲಾ ಅಂಶಗಳನ್ನು ಗಮನದಲ್ಲಿರಿಸಿಕೊಂಡು, ಕೋವಿಡ್ 19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಶಿಫಾರಸ್ಸು ಮಾಡಿರುವ ಈ ಕೆಳಗಿನ ಅಂಶಗಳನ್ನು ಸಾರ್ವಜನಿಕರು ಪಾಲಿಸುವಂತೆ ಸಲಹೆ ನೀಡಲಾಗಿದೆ.

Health Department Of karnataka ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು, ಹೆಚ್ಚಿನ ಗಾಳಿ-ಬೆಳಕು ಇಲ್ಲವ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ. ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ, ಕೋವಿಡ್ 19ನ ಮುಂಜಾಗ್ರತಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅಗತ್ಯ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ಈ ಎಲ್ಲಾ ಅಂಶಗಳನ್ನು ಲಭ್ಯ ಮಾಧ್ಯಮಗಳ ಮೂಲಕ ಪ್ರಚುರಪಡಿಸುವಂತೆ ಸೂಚಿಸಿದ್ದು ಸಾಗೂ ಸಾರ್ವಜನಿಕರಲ್ಲಿ ಇವುಗಳನ್ನು ವಾಲನೆಯನ್ನು ಖಚಿತಪಡಿಸಿಕೊಳ್ಳುವುದು . ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳ ಜವಾಬ್ದಾರಿಯಾಗಿರುತ್ತದೆ.

  1. ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ( ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ.
  2. ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ.
  3. ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ.
  4. ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು (vulnerable) ಅವಶ್ಯವಿದ್ದಲ್ಲಿ ಮಾತ್ರವೇ ಭೇಟಿ ಮಾಡುವುದು. ಆರೋಗ್ಯ ಸಮಸ್ಯೆಗಳನ್ನು ಹೂಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...