Siddaramaiah ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದೆ. ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ.
ಬರದಿಂದ ಸಂಕಷ್ಟದಲ್ಲಿರು ಕರ್ನಾಟಕದ ರೈತರ ಹಿತರಕ್ಷಣೆಯ ದೃಷ್ಟಿಯಿಂದ ಆದಷ್ಟು ಬೇಗ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದ್ದೇನೆ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಂತರ ಮುಖ್ಯಮಂತ್ರಿಗಳು , ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಪ್ರಧಾನಿ ಅವರಿಗೆ ಮನವಿ ಮಾಡಿದರು.
ಇದರಲ್ಲಿ 4,663 ಕೋಟಿ ರೂ. ಇನ್‌ಪುಟ್ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಮನವಿ ಮಾಡಿದರು.
Siddaramaiah ಸಂಗಡ ಕಂದಾಯ ಸಚಿವ ಕೃಷ್ಣಭೈರೇಗೌಡರು ಪ್ರಧಾನಿ ಅವರಿಗೆ ಬರ ಪರಿಸ್ಥಿತಿ ಮನವರಿಕೆಮಾಡುವಲ್ಲಿ ಮುಖ್ಯಮಂತ್ರಿಗಳಿಗೆ ಸಹಕರಿಸಿದರು.