Thursday, March 19, 2026
Thursday, March 19, 2026

Death News ಮನೆಯಲ್ಲಿಯೇ ನೇಣು ಬಿಗಿದುಕೊಂಡು ಗೃಹಿಣಿ ಸಾವು

Date:

Death News ರಿಪ್ಪನ್‌ಪೇಟೆಯ ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದಾರೆ.
ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕೊಳವಳ್ಳಿ ಮೂಲದ ಕವನ ಪಟ್ಟಣದ ಖಾಸಗಿ ಶಾಪಿಂಗ್ ಮಾಲ್ ನಲ್ಲಿ ಕೆಲಸ ನಿರ್ವಹಿಸುತಿದ್ದರು.

ಕಳೆದ ಆರು ವರ್ಷಗಳ ಹಿಂದೆ ಶಿಕಾರಿಪುರದ ರುದ್ರೇಶ್ ಎಂಬುವವರನ್ನು ವಿವಾಹವಾಗಿದ್ದ ಕವನ ರವರಿಗೆ ಐದು ವರ್ಷದ ಮಗನಿದ್ದು ತಾಯಿ ಮನೆಯಲ್ಲಿ ಬಿಟ್ಟಿದ್ದಾರೆ.

ಮಂಗಳವಾರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ
ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಕೊಂಡಿದ್ದಾರೆ. ನಿನ್ನೆಯಿಂದ ಫೋನ್ ಕರೆ ಸ್ವೀಕರಿಸದ ಹಿನ್ನಲೆಯಲ್ಲಿ ಅವರ ಸ್ನೇಹಿತೆಯರು ಇಂದು ಮನೆಯ ಬಳಿ ನೋಡಲು ಹೋದಾಗ ನೇಣು ಬಿಗಿದುಕೊಂಡಿರುವ ವಿಚಾರ ಗೊತ್ತಾಗಿದೆ.ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

Death News ಘಟನಾ ಸ್ಥಳಕ್ಕೆ ಪಿಎಸ್‌ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ತೆರಳಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...