Thursday, March 19, 2026
Thursday, March 19, 2026

Shivamogga DC Dr. Selvamani R ಇವಿಎಂ & ವಿವಿಪ್ಯಾಟ್ ಬಗ್ಗೆ ಪೂರ್ಣ ಮಾಹಿತಿಯಿಂದ ಕಾರ್ಯ ನಿರ್ವಹಿಸಿ- ಡಾ.ಸೆಲ್ವಮಣಿ

Date:

Shivamogga DC Dr. Selvamani R ಇವಿಎಂ ಮತ್ತು ವಿವಿಪ್ಯಾಟ್ ಕುರಿತು ಸಮಗ್ರವಾಗಿ ತಿಳಿದುಕೊಂಡು ಅತಿ ಜಾಗೃತೆಯಿಂದ, ಸೂಕ್ಷ್ಮವಾಗಿ ನಿರ್ವಹಣೆ ಮಾಡಬೇಕೆಂದು ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸೂಚನೆ ನೀಡಿದರು.

ಶಿವಮೊಗ್ಗದ ಫ್ರೀಡಂ ಪಾರ್ಕ್ ಬಳಿಯ ಗಾಂಧಿ ಭವನದಲ್ಲಿ ಇಂದು ಅಧಿಕಾರಿಗಳಿಗೆ ಮೊಬೈಲ್ ಡೆಮಾನ್‍ಸ್ಟ್ರೇಷನ್ ವೆಹಿಕಲ್(ಎಂಡಿವಿ) ಮೂಲಕ ಆಯೋಜಿಸಲಾಗಿದ್ದ ಇವಿಎಂ ಮತ್ತು ವಿವಿಪ್ಯಾಟ್ ಪ್ರಾತ್ಯಕ್ಷಿಕೆ ಹಾಗೂ ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇಂದಿನ ಪ್ರಾತ್ಯಕ್ಷಿಕೆ ಮತ್ತು ಅರಿವು ಕಾರ್ಯಕ್ರಮದಲ್ಲಿ ಮಾಸ್ಟರ್ ತರಬೇತುದಾರರು ಸಮಗ್ರವಾಗಿ ಇವಿಎಂ ಮತ್ತು ವಿವಿಪ್ಯಾಟ್ ಕಾರ್ಯಚಟುವಟಿಕೆ ಹಾಗೂ ಬಳಕೆ ವಿಧಾನವನ್ನು ತಿಳಿಸಿಕೊಡುವರು. ಅದನ್ನು ಸಮರ್ಪಕವಾಗಿ ತಿಳಿದುಕೊಂಡು ಇಂದು ಪಾಲ್ಗೊಂಡಿರುವ 7 ತಂಡಗಳು ತಾವು ಸಹ ಪ್ರಾತ್ಯಕ್ಷಿಕೆ ನೀಡಬೇಕು ಎಂದರು.

ಇವಿಎಂ ಮಷೀನ್‍ಗಳು ಅತ್ಯಂತ ಸೂಕ್ಷ್ಮವಾಗಿದ್ದು ಅವುಗಳನ್ನು ಅತಿ ಎಚ್ಚರಿಕೆಯಿಂದ ನಿರ್ವಹಿಸಬೇಕು. ಚುನಾವಣಾ ಆಯೋಗ ಈ ವಿಷಯವಾಗಿ ಅತ್ಯಂತ ನಿರ್ದಿಷ್ಟವಾಗಿದ್ದು, ಯಾವುದೇ ತಪ್ಪುಗಳು ಜರುಗದಂತೆ ಜಾಗೃತೆ ವಹಿಸಬೇಕು. ಇವಿಎಂ ಗಳ ಸಾಗಾಣಿಕೆ, ಶೇಖರಣೆ ಮತ್ತು ಬಳಕೆ ಎಲ್ಲವೂ ಅತ್ಯಂತ ಜವಾಬ್ದಾರಿಯಿಂದ ಕೂಡಿದ್ದು ಎಚ್ಚರಿಕೆಯಿಂದ ನಿರ್ವಹಣೆ ಮಾಡಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳೇ ಜವಾಬ್ದಾರರಾಗುತ್ತಾರೆ. ಇವಿಎಂ ಮತ್ತು ವಿವಿಪ್ಯಾಟ್ ನಲ್ಲಿ ತಾಂತ್ರಿಕ ತೊಂದರೆಗಳು, ಇತರೆ ಸ್ಪಷ್ಟನೆಗಳು ಇದ್ದಲ್ಲಿ ಮಾಸ್ಟರ್ ಟ್ರೈನರ್ ಮತ್ತು ತಂತ್ರಜ್ಞರೊಂದಿಗೆ ಚರ್ಚಿಸಿ ಸರಿಪಡಿಸಿಕೊಳ್ಳುವಂತೆ ತಿಳಿಸಿದರು.

Shivamogga DC Dr. Selvamani R ಮಾಸ್ಟರ್ ಟ್ರೈನರ್ ರವಿಕುಮಾರ್ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಈ ವೇಳೆ ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ಮಾಸ್ಟರ್ ತರಬೇತುದಾರರು, ಅಧಿಕಾರಿ/ಸಿಬ್ಬಂದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...