COVID-19 News ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಸ್ಥಿತಿಗತಿಯ ಕುರಿತು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.
ಸಭೆಯ ಮುಖ್ಯಾಂಶಗಳು:
ಕೋವಿಡ್- 19 ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಅದರಲ್ಲೂ JN.1 ಎಂಬ ಹೊಸ ತಳಿಯ ವೈರಸ್ ಪತ್ತೆಯಾಗಿದೆ.
ಕಳೆದ ಒಂದು ವಾರದ ಅವಧಿಯಲ್ಲಿ ಜಾಗತಿಕವಾಗಿ 51,214 ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ ಪ್ರತಿದಿನ ಸರಾಸರಿ 310 ಪ್ರಕರಣಗಳು ವರದಿಯಾಗುತ್ತಿವೆ.
COVID-19 News ಕರ್ನಾಟಕದಲ್ಲಿ ಪ್ರಸ್ತುತ 92 Active COVID Cases ವರದಿಯಾಗಿವೆ. ಕೇರಳದಲ್ಲಿ 2,041, ತಮಿಳು ನಾಡಿನಲ್ಲಿ 77, ಮಹಾರಾಷ್ಟ್ರದಲ್ಲಿ 35, ಗೋವಾದಲ್ಲಿ 23 ಹಾಗೂ ಗುಜರಾತಿನಲ್ಲಿ 12 Active cases ಇವೆ.
ರಾಜ್ಯದಲ್ಲಿರುವ ಒಟ್ಟು 92 Active COVID Case ಗಳಲ್ಲಿ 80 ಬೆಂಗಳೂರು ನಗರದಲ್ಲಿ ಇದೆ. ಉಳಿದಂತೆ ಮೈಸೂರಿನಲ್ಲಿ 5, ಬಳ್ಳಾರಿಯಲ್ಲಿ 3, ರಾಮನಗರ ಹಾಗೂ ಮಂಡ್ಯದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಇವರಲ್ಲಿ 72 ಜನ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ. 20 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಳು ಜನರು ಐಸಿಯುನಲ್ಲಿದ್ದು, ಇವರೆಲ್ಲರೂ ಇತರ ಸಮಸ್ಯೆಗಳಿಂದಲೂ ಬಳಲುತ್ತಿದ್ದಾರೆ.