Friday, December 5, 2025
Friday, December 5, 2025

B. Y. Vijayendra ಪ್ರಧಾನಿ ಮೋದಿ ಭೇಟಿ ಮಾಡಿದ ಬಿ.ವೈ.ವಿಜಯೇಂದ್ರ,ಭಾವ ಪರವಶ

Date:

B. Y. Vijayendra ಬಿ.ವೈ. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ನೆಚ್ಚಿನ ಪ್ರಧಾನಿ ಶ್ರೀ. ನರೇಂದ್ರ ಮೋದಿ ಅವರನ್ನು ಇಂದು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭ ಸಂತ ತೇಜಸ್ಸಿನ ಭಾರತಾಂಬೆಯ ಮಹಾನ್ ಸುಪುತ್ರನ ದರ್ಶನ ಪಡೆದ ಅನುಭವವಾಯಿತು ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ರಾಷ್ಟ್ರ ಭಕ್ತಿ, ಸಂಘ ನಿಷ್ಠೆ, ಸಮರ್ಪಣೆ, ಶಿಸ್ತು, ಬದ್ಧತೆ, ಕ್ರಿಯಾಶೀಲತೆ, ಸಾಧಿಸುವ ಛಲದ ಗುರಿ ಇವೆಲ್ಲಕ್ಕೂ ಭಾರತದ ಇತಿಹಾಸದಲ್ಲಿ ಉದಾಹರಿಸಬಲ್ಲ ಏಕೈಕ ವ್ಯಕ್ತಿತ್ವ ಮಾನ್ಯ ಮೋದಿ ಜೀ ಅವರದು, ಅವರ ಸ್ವಾವಲಂಬಿ ಹಾಗೂ ಬಲಿಷ್ಠ ಭಾರತ ಕಟ್ಟುವ ಮಹಾನ್ ಸಂಕಲ್ಪ ಪರಿಪೂರ್ಣವಾಗಿ ಈಡೇರಿದರೆ ವಿಶ್ವಮಟ್ಟದಲ್ಲಿ ನಮ್ಮ ಭವ್ಯ ಭಾರತ ಅಗ್ರಸ್ಥಾನದಲ್ಲಿ ನಿಲ್ಲಲಿದೆ. ಈ ನಿಟ್ಟಿನಲ್ಲಿ ಅವರೊಂದಿಗೆ ಹೆಗಲು ಕೊಡುವ ಪುಣ್ಯದ ಕಾರ್ಯದಲ್ಲಿ ಸಮರ್ಪಿಸಿಕೊಳ್ಳಲು ‘ಬಿಜೆಪಿ-ಕರ್ನಾಟಕ’ದ ರಥ ಮುನ್ನಡೆಸುವ ಜವಾಬ್ದಾರಿ ವಹಿಸಿಕೊಟ್ಟಿರುವುದು
ನನ್ನ ಸೌಭಾಗ್ಯ ಎಂಬುದು ನನ್ನ ವಿನಮ್ರ ಭಾವವಾಗಿದೆ.
2024 ರ ಮಹಾ ಚುನಾವಣೆಯಲ್ಲಿ
B. Y. Vijayendra ಕರ್ನಾಟಕದಲ್ಲಿ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಮೋದಿ ಜೀ ಅವರ ಮಡಿಲಿಗೆ ಸಮರ್ಪಿಸಬೇಕೆಂಬ ನನ್ನ ಹೆಗ್ಗುರಿಯ ಹೆಜ್ಜೆಗೆ ಇಂದಿನ ಭೇಟಿಯ ಅವರ ಪ್ರೇರಣೆಯ ಮಾತುಗಳು ನನ್ನಲ್ಲಿ ಅದಮ್ಯ ಆತ್ಮ ವಿಶ್ವಾಸ ಮೂಡಿಸಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...