Dharmasthala Trust ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವ ಸಲುವಾಗಿ ಧರ್ಮಸ್ಥಳ ಟ್ರಸ್ಟ್ ಹಲವಾರು ಯೋಜನೆಗಳ ಮೂಲಕ ದುಡಿಯುವ ಕೈಗಳಿಗೆ ಕೆಲಸ ನೀಡಿ ಆರ್ಥಿಕವಾಗಿ ಸದೃಢ ಗೊಳಿಸಲು ಮುಂದಾಗಿರುವುದು ಸ್ಪೂರ್ತಿದಾಯಕ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ ಹೇಳಿದರು.
ಚಿಕ್ಕಮಗಳೂರು ತಾಲ್ಲೂಕಿನ ಬೀಕನಹಳ್ಳಿ ಸಮೀಪ ವಿದ್ಯಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಬುಧವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ಹಲವಾರು ಕುಟುಂಬಗಳಿಗೆ ಧರ್ಮಾಧಿಕಾರಿ ವೀರೇಂದ್ರಹೆಗ್ಡೆಯವರ ಗ್ರಾಮಾಭಿವೃದ್ದಿ ಯೋಜನೆ ಬಹುತೇಕ ಬದುಕನ್ನು ಹಸನುಗೊಳಿಸಿದೆ. ಸಂಸಾರದ ಜೊತೆಗೆ ಸಂಘದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಮಹಿಳೆ ಇಂದು ಅನೇಕ ಕ್ಷೇತ್ರಗಳಲ್ಲಿ ಸಾಧನೆಗೈದಿರುವುದು ನಮ್ಮೆಲ್ಲರಿಗೂ ಖುಷಿಯ ವಿಚಾರ ಎಂದರು.
ಕುವೆoಪುರ ಸಾಲಿನಂತೆ ಸರ್ವ ಜನಾಂಗದ ಶಾಂತಿಯ ತೋಟವೆಂಬುoದು ನೈಜವಾಗಿ ಧರ್ಮಸ್ಥಳ ಟ್ರಸ್ಟ್ ನಲ್ಲಿ ವ್ಯಕ್ತವಾಗುತ್ತಿದೆ. ಆ ನಿಟ್ಟಿನಲ್ಲಿ ಮಹಿಳೆಯರು ಇತರರೊಂದಿಗೆ ಸಂಘದ ಕಾರ್ಯಚಟುವಟಿಕೆಯನ್ನು ಹಂಚಿ ಕೊಂಡು ಎಲ್ಲರನ್ನೂ ಒಗ್ಗೂಡಿಸಿ ಕೆಲಸ ಕೈಗೊಳ್ಳಲಿ ಎಂದು ಕಿವಿಮಾತು ಹೇಳಿದರು.
ಇಂದು ಹಲವಾರು ಹಿರಿಯರು ತಳಹದಿಯಿಂದಲೇ ಸಮಾಜವನ್ನು ಕಟ್ಟಿರುವುದು ಎಂದಿಗೂ ಮರೆಯಬಾ ರದು. ಹಾಗಾಗಿ ಗುರು-ಹಿರಿಯರನ್ನು ಗೌರವಿಸುವ ಗುಣ ಬೆಳೆಸಿಕೊಂಡು ಮುನ್ನೆಡೆದರೆ ದಿನನಿತ್ಯದ ಕಾರ್ಯಚಟು ವಟಿಕೆಗಳಲ್ಲಿ ಯಶಸ್ಸು ಲಭಿಸಲು ಸಾಧ್ಯ ಎಂದ ಅವರು ಮಕ್ಕಳಿಗೂ ಇಂತಹ ಸಂಸ್ಕಾರವನ್ನು ಕಲಿಸಿ ಮುನ್ನಡೆಸ ಬೇಕು ಎಂದು ಸಲಹೆ ಮಾಡಿದರು.
ಸಮಾಜದ ಆರೋಗ್ಯದಲ್ಲಿ ಮಹಿಳೆಯರ ಪಾತ್ರ ಬಗ್ಗೆ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆಯ ಡಾ. ಸಹನಾ ಒಬ್ಬ ಮಹಿಳೆ ತನ್ನ ಕುಟುಂಬದಲ್ಲಿ ತಾಯಿ, ಮಗಳು, ಸೊಸೆ ಎಂಬ ಅತ್ಯಂತ ಪ್ರಮುಖ ಪಾತ್ರ ನಿರ್ವಹಿಸುತ್ತಾಳೆ. ಹಾಗೆಯೇ ಸಾಮಾಜಿಕ ವ್ಯವಹಾರಗಳ ಮೂ ಲಕ ಅರ್ಥಿಕ ಭದ್ರತೆಯನ್ನು ನೀಡಿ ಸಮಾಜದ ಅಭಿವೃದ್ಧಿಯ ಶಿಲ್ಪಿಯಾಗಿ ಮುಂದುವರಿಯುತ್ತಿದ್ದಾರೆ ಎಂದರು.
Dharmasthala Trust ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಟ್ರಸ್ಟ್ ನಿರ್ದೇಶಕ ಪ್ರಕಾಶ್‌ರಾವ್ ಎಲ್ಲಿ ಮಹಿಳೆಯನ್ನು ಪೂಜಿಸುತ್ತಾರೋ ಅಲ್ಲಿ ದೇವರು ನೆಲೆಸಿರುತ್ತಾರೆ ಎನ್ನುವ ಭಾವನೆ ಗ್ರಂಥಗಳಲ್ಲಿ ಅಡಕವಾಗಿದೆ. ಪ್ರತಿ ಮಗುವಿಗೆ ಮನೆಯೇ ಮೊದಲ ಪಾಠ ಶಾಲೆ. ಹಾಗೆಯೇ ತಾಯಿಯೇ ಮೊದಲ ಗುರು. ಮಹಿಳೆಯು ಒಂದು ಸಮುದಾಯದ ಹಾಗೂ ದೇಶದ ಅಭಿವೃದ್ದಿಗೆ ಕಾರಣಕರ್ತಳಾಗುತ್ತಾಳೆ. ಅವರಿಗೆ ಸಿಗಬೇಕಾದ ಸ್ಥಾನಮಾನ, ಗೌರ ವ ಕೊಡುವುದು ಎಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಚೌಡೇಶ್ವರಿ ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷೆ ಹೇಮಾವತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಟ್ರಸ್ಟ್ನ ಪ್ರಾದೇಶಿಕ ನಿರ್ದೇಶಕಿ ಬಿ.ಗೀತಾ, ಯೋಜನಾಧಿಕಾರಿ ರಮೇಶ್ ನಾಯ್ಕ್, ಪ್ರಾದೇಶಿಕ ಸಮನ್ವಯಾಧಿಕಾರಿ ರತ್ನ, ವಲಯ ಮೇಲ್ವಿಚಾರಕ ಚಂದನ್, ಸೇವಾ ಪ್ರತಿನಿಧಿಗಳು ಸೇರಿದಂತೆ ಮತ್ತಿತರರು ಉಪಸ್ಥಿ ತರಿದ್ದರು.
Dharmasthala Trust ದುಡಿಯುವ ಕೈಗಳಿಗೆ ಧರ್ಮಸ್ಥಳ ಟ್ರಸ್ಟ್ ಆಧಾರ ಸ್ಥಂಭ -ಭೋಜೇಗೌಡ
Date: