Saturday, September 28, 2024
Saturday, September 28, 2024

DC Shivamogga ಕೋವಿಡ್ ಉಪತಳಿ ಸೋಂಕು ಹಿನ್ನೆಲೆ:ಎಲ್ಲರೂ ಕೋವಿಡ್ ನಿಬಂಧನೆ ಪಾಲಿಸಿ- ಡಾ.ಆರ್.ಸೆಲ್ವಮಣಿ

Date:

DC Shivamogga ನೆರೆಯ ರಾಜ್ಯಗಳಲ್ಲಿ ಕೋವಿಡ್ ಉಪತಳಿ ವರದಿಯಾದ ಹಿನ್ನೆಲೆ ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಹಾಗೂ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೋವಿಡ್ -19 ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಅಗತ್ಯ ಸಿದ್ದತೆ ಮಾಡಿಕೊಳ್ಳುವ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್ ಹೊಸ ರೂಪಾಂತರಿ ತಳಿಯ ಬಗ್ಗೆ ಜನರಲ್ಲಿ ಹೆಚ್ಚಿನ ಆತಂಕ ಬೇಡ. ರಾಜ್ಯ ಸರ್ಕಾರ ನೀಡಿರುವ ಮಾರ್ಗಸೂಚಿ ಮತ್ತು ಸಲಹಾತ್ಮಕ ಕ್ರಮಗಳನ್ನು ಪಾಲಿಸಬೇಕು.60 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು, ಮಕ್ಕಳು, ಇತರೆ ತೀವ್ರತರ ಖಾಯಿಲೆಯಿಂದ ಬಳಲುವವರು ಹೊರಾಂಗಣ ಪ್ರದೇಶಕ್ಕೆ ಹೋದಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ವಚ್ಚತೆ ಕಡೆ ಗಮನ ಹರಿಸಬೇಕು.

ಎಲ್ಲ ಆಸ್ಪತ್ರೆಗಳಲ್ಲಿ ಬೆಡ್‍ಗಳು, ಆಕ್ಸಿಜನ್ ಬೆಡ್‍ಗಳು, ಐಸಿಯು, ವೆಂಟಿಲೇಟರ್, ಆಕ್ಸಿಜನ್, ಆಂಬುಲೆನ್ಸ್, ಪ್ರಯೋಗಾಲಯ, ಅಗತ್ಯ ಔಷಧಿ ಇತರೆ ಎಲ್ಲ ವ್ಯವಸ್ಥೆ ಸಿದ್ದವಿರುವಂತೆ ನೋಡಿಕೊಳ್ಳಬೇಕು. ಅಗತ್ಯ ಸಂಖ್ಯೆಯ ಪರೀಕ್ಷೆಗಳನ್ನು ನಡೆಸಲು ಪ್ರಯೋಗಾಲಯ ಹಾಗೂ ಆರ್‍ಟಿಪಿಸಿಆರ್ ಕಿಟ್‍ಗಳನ್ನು ಸಿದ್ದಪಡಿಸಿಕೊಳ್ಳಬೇಕು. ಪಿಹೆಚ್‍ಸಿ ಯಿಂದ ಹಿಡಿದು ಎಲ್ಲ ಆಸ್ಪತ್ರೆಗಳಲ್ಲಿ ಎಸ್‍ಎಆರ್‍ಐ ಮತ್ತು ಐಎಲ್‍ಐ ಲಕ್ಷಣಗಳುಳ್ಳ ಪ್ರಕರಣಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಹೊರ ರಾಜ್ಯ ಮತ್ತು ದೇಶಗಳಿಗೆ ಪ್ರಯಾಣ ಮಾಡುವವರು ಅಲ್ಲಿನ ಪರಿಸ್ಥಿತಿ ಅರಿತು ಪ್ರಯಾಣ ಬೆಳೆಸಬೇಕು.

ತಾಲ್ಲೂಕು ಆಸ್ಪತ್ರೆಗಳಲ್ಲಿ ಬೆಡ್‍ಗಳು, ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್, ಆಂಬುಲೆನ್ಸ್, ಆಕ್ಸಿಜನ್ ಸಿಲಿಂಡರ್ ಕುರಿತು ಮಾಕ್‍ಡ್ರಿಲ್ ಮಾಡಬೇಕು. ಟಿಹೆಚ್‍ಓಗಳು, ಎಎಂಓ ಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ಹಾಗೂ ತಹಶೀಲ್ದಾರರು, ಎಸಿ ಗಳು ತಮ್ಮ ವ್ಯಾಪ್ತಿಯ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್ ಸಿದ್ದತೆಯ ಕುರಿತು ಪರಿಶೀಲಿಸಬೇಕೆಂದರು.

ಹಾಗೂ ಎಲ್ಲ ಆಸ್ಪತ್ರೆಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ, ಸ್ಯಾನಿಟೈಸರ್‍ನ್ನು ಇಡಲು ತಿಳಿಸಿ ಅವರು ಅಧಿಕಾರಿಗಳಿಗೆ ಕೋವಿಡ್ 19 ನಿರ್ವಹಣೆ ಕುರಿತು ಸೂಚನೆಗಳನ್ನು ನೀಡಿದರು.

DC Shivamogga ಡಿಹೆಚ್‍ಓ ಡಾ.ರಾಜೇಶ್ ಸುರಗಿಹಳ್ಳಿ ಮಾತನಾಡಿ, ಕೋವಿಡ್ ಹೊಸ ರೂಪಾಂತರಿ ತಳಿಯ ತೀವ್ರತೆ ಬಗ್ಗೆ ದಾಖಲೆ ಇಲ್ಲ. ಆದ್ದರಿಂದ ಗಾಬರಿ ಮತ್ತು ಆತಂಕ ಪಡುವ ಅಗತ್ಯವಿಲ್ಲ. ನಮ್ಮ ಜಿಲ್ಲೆಯಲ್ಲಿ 130 ಕೋವಿಡ್ ಪರೀಕ್ಷೆ ಗುರಿ ನೀಡಲಾಗಿದೆ. ಡಿಸೆಂಬರ್ 1 ರಿಂದ 21 ರವರೆಗೆ ಒಟ್ಟು 554 ಕೋವಿಡ್ ಪರೀಕ್ಷೆ ಮಾಡಲಾಗಿದೆ.

ಮೆಗ್ಗಾನ್ ಆಸ್ಪತ್ರೆಯಲ್ಲಿ 950 ಆಕ್ಸಿಜನ್ ಬೆಡ್‍ಗಳಿವೆ. 100 ಕ್ಕೂ ಹೆಚ್ಚು ಐಸಿಯು ಬೆಡ್, 80 ವೆಂಟಿಲೇಟರ್, 1000 +350 ಲೀಟರ್ ಸಾಮಥ್ರ್ಯದ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಟ್ಯಾಂಕ್ ಇದೆ. ಎಲ್ಲಾ ತಾಲ್ಲೂಕುಗಳಲ್ಲೂ 6 ಕೆಎಲ್ ಸಾಮಥ್ರ್ಯದ ಆಕ್ಸಿಜನ್ ಟ್ಯಾಂಕ್‍ಗಳಿವೆ. ತಾಲ್ಲೂಕು ಆಸ್ಪತ್ರೆಗಳಲ್ಲಿ ಒಟ್ಟು 1560 ಬೆಡ್‍ಗಳಿದ್ದು, 250 ಐಸಿಯು ಬೆಡ್‍ಗಳು, 140 ವೆಂಟಿಲೇಟರ್ ಬೆಡ್, 40 ವೆಂಟಿಲೇಟರ್, 8 ಬಿಎಲ್‍ಎಸ್ ಆಂಬುಲೆನ್ಸ್, 4 ಎಎಲ್‍ಎಸ್ ಆಂಬುಲೆನ್ಸ್, 611 ಆಕ್ಸಿಜನ್ ಸಿಲಿಂಡರ್, 7 ಪಿಎಸ್‍ಎ ಪ್ಲಾಂಟ್‍ಗಳಿವೆ. ಜಿಲ್ಲೆಯ ನಾಲ್ಕು ಕಡೆ ಮ್ಯಾನಿಫೋಲ್ಡ್ ವ್ಯವಸ್ಥೆ ಇದೆ, ಪ್ರತಿ ತಾಲ್ಲೂಕಿನಲ್ಲಿ 50 ಜಂಬೊ ಸಿಲಿಂಡರ್, ಪ್ರತಿ ಪಿಹೆಚ್‍ಸಿಗಳಲ್ಲಿ 15 ರಿಂದ 20 ಆಕ್ಸಿಜನ್ ಕಾನ್ಸಂಟ್ರೇಟರ್ ಇವೆ. ನುರಿತ ಸಿಬ್ಬಂದಿಗಳು ಇದ್ದು, ಔಷಧಿ ಕೊರತೆ ಇಲ್ಲ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಎಸಿ ಸತ್ಯನಾರಾಯಣ್, ಜಿ.ಪಂ ಉಪ ಕಾರ್ಯದರ್ಶಿ ಸುಜಾತ, ತಹಶೀಲ್ದಾರರು, ಮೆಗ್ಗಾನ್ ಬೋಧನಾ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರು, ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ಹಾಗೂ ತಾಲ್ಲೂಕು ವೈದ್ಯಾಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikaripura News ಅಹಿಂದ ಸಂಘಟನೆ ಕರೆ ನೀಡಿದ್ದ ಶಿಕಾರಿಪುರ ಬಂದ್ ಯಶಸ್ವಿ

Shikaripura News ನಾಡಿನ ಅಹಿಂದ ವರ್ಗಕ್ಕೆ ಸೇರಿದ ಜನರ ಹಿತ ಕಾಯುವ...

New Delhi News ಅಪಹರಣಕ್ಕೊಳಗಾಗಿದ್ದ ಬಾಲಕನೇ ಇಂದು ವಕೀಲನಾಗಿ ಅದೇ ಕಿಡ್ನಾಪರ್ಸ್ ಗೆ ಶಿಕ್ಷೆ ಕೊಡಿಸಿದ

New Delhi News ಈ ಹಿಂದೆ 7 ವರ್ಷದವನಾಗಿದ್ದಾಗ ಅಪಹರಣಕ್ಕೊಳಗಾಗಿದ್ದ ಬಾಲಕ...

Kasturi Rangan Comittee Report ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

Kasturi Rangan Comittee Report ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು...

Hosanagara News ಇಸ್ಪೀಟ್ ಅಡ್ಡೆಗೆ ಪೊಲೀಸರ ದಾಳಿ – 11 ಜನರ ಬಂಧನ 17,640 ರೂಪಾಯಿ ವಶ

Hosanagara News ಹೊಸನಗರ ತಾಲ್ಲೂಕು ಮಾರುತೀಪುರ ಗ್ರಾಮ ಪಂಚಾಯಿತಿಯ ಹಳೆಬಾಣಿಗ ರಸ್ತೆಯ...