Sunday, December 7, 2025
Sunday, December 7, 2025

DC Shivamogga ಜಿಲ್ಲೆಯಲ್ಲಿ ಕುಡಿಯುವ ನೀರು & ಜಾನುವಾರುಗಳಿಗೆಮೇವಿನ ಕೊರತೆಯಾಗದಂತೆ ಎಚ್ಚರಿಕೆವಹಿಸಿ – ಡಾ.ಸೆಲ್ವಮಣಿ

Date:

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಎಚ್ಚರಿಕೆ ವಹಿಸಿ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸೂಚನೆ ನೀಡಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಬರ ನಿರ್ವಹಣೆ ಕುರಿತು ಏರ್ಪಡಿಸಲಾಗಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರಿನಲ್ಲಿ -28 ಮಳೆ ಕೊರತೆಯಾಗಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಕೊರತೆಯಾಗಬಹುದಾದ ಗ್ರಾಮಗಳಿಗೆ ನೀರನ್ನು ಪೂರೈಸಲು ತಹಶೀಲ್ದಾರರು, ಇಓ ಗಳು ಈಗಿನಿಂದಲೇ ಖಾಸಗಿ ಬೋರ್‍ವೆಲ್‍ಗಳನ್ನು ಗುರುತಿಸಿಟ್ಟುಕೊಳ್ಳಬೇಕು. ತಾಲ್ಲೂಕುಗಳಲ್ಲಿ ಇಓ ಮತ್ತು ತಹಶೀಲ್ದಾರರು, ಹಾಗೂ ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು ನೀರಿನ ಸಮಸ್ಯೆಯಾಗಬಹುದಾದ ಗ್ರಾಮ, ಪ್ರದೇಶಗಳನ್ನು ಮತ್ತೊಮ್ಮೆ ಪರಿಶೀಲಸಿ ಕ್ರಮ ಕೈಗೊಳ್ಳಬೇಕೆಂದರು.

ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೆರೆಗಳನ್ನು ಸಂರಕ್ಷಿಸುವ ಕೆಲಸವಾಗಬೇಕು. ನೀರು ವ್ಯರ್ಥವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

DC Shivamogga ಜಾನುವಾರುಗಳ ಮೇವಿಗೆ ಸದ್ಯಕ್ಕೆ ಕೊರತೆ ಇಲ್ಲ. 23 ವಾರಗಳಿಗೆ ಆಗುವಷ್ಟು ಮೇವಿನ ದಾಸ್ತಾನು ಇದೆ. ಆದರೆ ಶಿಕಾರಿಪುರ ಮತ್ತು ಸೊರಬ ತಾಲ್ಲೂಕಿನಲ್ಲಿ 13 ವಾರಗಳಿಗೆ ಆಗುವಷ್ಟು ಮಾತ್ರ ಇದ್ದು, ಒಟ್ಟಾರೆ ಹೆಚ್ಚುವರಿ ಅಗತ್ಯವಿರುವ 37 ಸಾವಿರ ಮೇವಿನ ಕಿಟ್ ತರಿಸಲು ಕ್ರಮ ವಹಿಸಲಾಗುವುದು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಎಸಿ ಸತ್ಯನಾರಾಯಣ್, ಜಿ.ಪಂ ಉಪ ಕಾರ್ಯದರ್ಶಿ ಸುಜಾತ, ಕೃಷಿ ಜಂಟಿ ನಿರ್ದೇಶಕಿ ಪೂರ್ಣಿಮಾ, ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ಇತರೆ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...