Sunday, November 24, 2024
Sunday, November 24, 2024

New Bright Future International School ವಿದ್ಯಾರ್ಥಿ ದೆಸೆಯಲ್ಲಿ‌ ಕ್ರೀಡಾಸಕ್ತಿ ಮೈಗೂಡಿಸಿಕೊಳ್ಳಬೇಕು-ಯಶೋಧಾ ಚಂಗಪ್ಪ

Date:

New Bright Future International School ವಿದ್ಯಾರ್ಥಿದೆಸೆಯಲ್ಲೇ ಮಕ್ಕಳು ಕ್ರೀಡಾಸಕ್ತಿಯನ್ನು ಮೈಗೂಡಿಸಿಕೊಂಡರೆ ರಾಜ್ಯ ಹಾಗೂ ರಾಷ್ಟ್ಟಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ದೇಶದ ಕೀರ್ತಿಯನ್ನು ಗಗನದೆತ್ತರಕ್ಕೆ ಕೊಂಡೊಯ್ಯ ಬಹುದು ಎಂದು ನ್ಯಾಷನಲ್ ಕ್ರೀಡಾಪಟು ಯಶೋಧ ಚಂಗಪ್ಪ ಹೇಳಿದರು.

ಚಿಕ್ಕಮಗಳೂರು ನಗರದ ಕೋಟೆ ಸಮೀಪದ ನ್ಯೂ ಬ್ರೈಟ್ ಪ್ಯೂಚರ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾದಿನ ಕಾರ್ಯಕ್ರಮದಲ್ಲಿ ಶುಕ್ರವಾರ ಪಾಲ್ಗೊಂಡು ಅವರು ಮಾತನಾಡಿದರು.

ಕ್ರೀಡಾಸಕ್ತಿಯಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢವಾಗಲು ಸಾಧ್ಯ. ಆ ನಿಟ್ಟಿನಲ್ಲಿ ಪ್ರತಿ ಮಕ್ಕಳು ದಿನ ನಿತ್ಯದ ಕೆಲವು ಸಮಯಗಳನ್ನು ಕ್ರೀಡಾಚಟುವಟಿಕೆಗಳಿಗೆ ಮೀಸಲಿಡಬೇಕು. ಜೊತೆಗೆ ಉತ್ತಮವಾಗಿ ಅಭ್ಯಾಸಿಸಿದರೆ ಉನ್ನತ ಸಾಧನೆಗೈದು ಜಿಲ್ಲೆಯನ್ನು ಹೆಸರನ್ನು ಉಳಿಸಲು ಸಾಧ್ಯ ಎಂದು ಕಿವಿಮಾತು ಹೇಳಿದರು.

ಶತತ ಪ್ರಯತ್ನದಿಂದ ಕ್ರೀಡಾಲೋಕದಲ್ಲಿ ಪಾಲ್ಗೊಂಡರೆ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಸ್ಪರ್ಧಿಸಲು ಅವ ಕಾಶ ಲಭಿಸಲಿದ್ದು ಇಂತಹ ಅವಕಾಶಗಳಿಂದ ಮಕ್ಕಳು ವಂಚಿತರಾಗದೇ ಸದ್ಬಳಕೆ ಮಾಡಿಕೊಂಡು ಕ್ರೀಡಾ ಜಗತ್ತಿನಲ್ಲಿ ಮರೆಯಲಾಗದ ಅನುಭವ ಹಾಗೂ ಯಶಸ್ಸು ಗಳಿಸಬಹುದು ಎಂದು ತಿಳಿಸಿದರು.

New Bright Future International School ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಪರಮೇಶ್ವರಪ್ಪ ಮಾತನಾಡಿ ಪಠ್ಯದ ಜೊತೆಗೆ ಕ್ರೀಡಾಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಇದರಿಂದ ಮಾನಸಿಕವಾಗಿ ಸದೃಢರಾಗಲು ಸಾಧ್ಯ ಎಂದ ಅವರು ವಿದ್ಯೆ ಸಮಾಜದಲ್ಲಿ ಹೇಗೆ ವ್ಯವಹರಿಸುವುದನ್ನು ತಿಳಿಸಿದರು.

ಕ್ರೀಡೆ ಇಡೀ ಜೀವನವನ್ನು ಆರೋಗ್ಯದಿರಲು ಸೂಚಿಸುತ್ತದೆ ಎಂಬುದನ್ನು ಮನಗಾಣಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಪ್ರಾಂಶುಪಾಲೆ ಚಂದ್ರಪ್ರಭ ಮಕ್ಕಳಿಗೆ ಪಠ್ಯದ ಜೊತೆಗೆ ಕ್ರೀಡಾಚಟುವಟಿಕೆ ರೂಪಿಸಿ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಶಾಲೆ ಮಾಡುತ್ತಿದೆ. ಜೊತೆಗೆ ನ್ಯಾಷ ನಲ್ ಕ್ರೀಡಾಪಟುಗಳು ಕರೆಸಿ ತರಬೇತಿ ನೀಡಿ ಶೈಕ್ಷಣಿಕ ಬೆಳವಣಿಗೆಗೆ ಸಹಕರಿಸಲಾಗುತ್ತಿದೆ ಎಂದರು.

ಇದೇ ವೇಳೆ ನಗರ ಸಮೀಪದ ವಿದ್ಯಾರ್ಥಿ ಉತ್ಸವ ಎಂಬುವವರು ರನ್ನಿಂಗ್‌ರೇಸ್‌ನಲ್ಲಿ ರಾಷ್ಟ್ಪಮಟ್ಟಕ್ಕೆ ಆಯ್ಕೆ ಗೊಂಡ ಹಿನ್ನೆಲೆಯಲ್ಲಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನ್ಯಾಷನಲ್ ಕ್ರೀಡಾಪಟು ಛಾರ್ವಿ, ಶಾಲೆಯ ಕಾರ್ಯದರ್ಶಿ ಶ್ರೀನಿವಾಸ್, ಸಂಯೋಜಕ ಪ್ರದೀಪ್ ಮತ್ತಿತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Priyanka Gandhi ಕೇರಳ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಅತ್ಯಧಿಕ ಮತಗಳಿಂದ ಆಯ್ಕೆ

Priyanka Gandhi ಪ್ರಿಯಾಂಕಾ ಗಾಂಧಿ ವಾದ್ರಾ 4,10,931 ಮತಗಳ ಅಂತರದಿಂದ ಗೆದ್ದಿದ್ದಾರೆ,...

SP Mithun Kumar ಮದ್ಯವರ್ಜನ ಶಿಬಿರ ಚಾಲನೆ, ಸಮಾಜಕ್ಕೆ ಹೆಚ್ಚು ಉಪಯುಕ್ತ- ಎಸ್.ಪಿ .ಮಿಥುನ್ ಕುಮಾರ್

SP Mithun Kumar ಶಿವಮೊಗ್ಗ,ನ.22 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...

Kuvempu Birthday ಕುವೆಂಪು ಜನ್ಮದಿನದ ವಿಶೇಷ ಷಿಕಾರಿಪುರದಲ್ಲಿ ನಾಟಕ ಸ್ಪರ್ಧೆ

Kuvempu Birthday ಸಹ್ಯಾದ್ರಿ ರಂಗತರಂಗ ನಾಟಕ ಸ್ಪರ್ಧೆ ಶಿವಮೊಗ್ಗ ನಗರದ ಸಹಾದ್ರಿ...

Dargah Shah Aleem Deewan ಶಿವಮೊಗ್ಗದ ದಿವಾನ್ ಭಾಬಾ ದರ್ಗಾದಲ್ಲಿ ನ.24 ರಿಂದ 26 ವರೆಗೆ ಉರುಸ್

Dargah Shah Aleem Deewan ಶಿವಮೊಗ್ಗದ ಹಜ್ರತ್ ಸೈಯದ್ ಶಾ ಅಲೀಮ್...