Tuesday, February 3, 2026
Tuesday, February 3, 2026

CM Siddharamaih ಮಕ್ಕಳಿಂದ ಶೌಚಾಲಯ ಸ್ವಚ್ಛತಾಕೆಲಸ ಹೀನಕೃತ್ಯ- ಸಿದ್ಧರಾಮಯ್ಯ

Date:

CM Siddharamaih ಶಾಲೆಯ ಶೌಚಾಲಯಗಳನ್ನು ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವುದು ಅತ್ಯಂತ ಹೀನ ಕೃತ್ಯ. ಇತ್ತೀಚೆಗೆ ಇಂತಹ ಪ್ರಕರಣಗಳು ವರದಿಯಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಈಗಾಗಲೇ ವರದಿಯಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಪ್ಪಿತಸ್ಥ ಶಿಕ್ಷಕರ ವಿರುದ್ಧ ಸೂಕ್ತ ಕ್ರಮಕೈಗೊಂಡಿದ್ದಾರೆ. ಇಂತಹ ಕೃತ್ಯಗಳು ಬೇರೆ ಶಾಲೆಗಳಲ್ಲಿ ನಡೆಯುತ್ತಿದ್ದರೆ ಅವುಗಳನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದೇನೆ. ಶಾಲೆ-ಕಾಲೇಜುಗಳ ಹಾಸ್ಟೆಲ್‌ಗಳಲ್ಲಿಯೂ ಈ ಬಗ್ಗೆ ನಿಗಾವಹಿಸುವಂತೆ ಸಮಾಜ ಕಲ್ಯಾಣ ಸಚಿವರಿಗೂ ತಿಳಿಸಿದ್ದೇನೆ ಎಂದಿದ್ದಾರೆ.

CM Siddharamaih ಪ್ರತಿಯೊಂದು ಶಾಲೆಯಲ್ಲಿಯೂ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಇರಬೇಕು ಮತ್ತು ಅವುಗಳನ್ನು ಪ್ರತಿದಿನ ಶುಚಿಗೊಳಿಸಲು ಸಿಬ್ಬಂದಿಯನ್ನು ನೇಮಕ ಮಾಡಬೇಕು. ಈ ಬಗ್ಗೆ ಒಂದು ಸಮೀಕ್ಷೆ ನಡೆಸಿ ಜಿಲ್ಲಾ ಶಿಕ್ಷಣಾಧಿಕಾರಿಗಳಿಂದ ವರದಿ ತರಿಸುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ತಿಳಿಸಿದ್ದೇನೆ ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...