Karnataka Janapada Parishath ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು, ತಾಲ್ಲೂಕು, ಶಿವಮೊಗ್ಗ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಡಾ. ಎಸ್.ಪಿ. ಪದ್ಮಪ್ರಸಾದ್ ಅವರು ಬರೆದ ನಮ್ಮೂರು ಹೊಸನಗರ ಪುಸ್ತಕ ಪರಿಚಯ ಮತ್ತು ಹೊಸನಗರ ಜಾನಪದ ಒಳನೋಟ ವಿಚಾರ ಸಂಕಿರಣ ನಡೆಯಿತು.
ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ದೀಪಬೆಳಗಿಸಿ ಉದ್ಘಾಟಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷರಾದ ಡಿ. ಮಂಜುನಾಥ ಪ್ರಾಸ್ತಾವಿಕ ಮಾತನಾಡಿದರು. ಹಿರಿಯ ಸಾಹಿತಿಗಳಾದ ಡಾ. ಪದ್ಮಪ್ರಸಾದ್ ಅವರನ್ನು ಅಭಿನಂದಿಸಲಾಯಿತು. ಸೋಲಿಲ್ಲದ ಸರದಾರ ಪ್ರಶಸ್ತಿಗೆ ಆಯ್ಕೆಯಾದ ಕಲಗೋಡು ರತ್ನಾಕರ ಅವರನ್ನು ಸನ್ಮಾನಿಸಲಾಯಿತು. ಆಂಜನೇಯ ಜೋಗಿ ಅವರ ಜನಪದ ಹಾಡು ಆಕರ್ಷಣೆಯಾಗಿತ್ತು.
Karnataka Janapada Parishath ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಹಾಲಗದ್ದೆ ಉಮೇಶ್, ಕಜಾಪ ತಾಲ್ಲೂಕು ಅಧ್ಯಕ್ಷರಾದ ಎಂ. ಎಂ. ಪರಮೇಶ್, ಕಸಾಪ ತಾಲ್ಲೂಕು ಅಧ್ಯಕ್ಷರಾದ ತ. ಮ. ನರಸಿಂಹ, ಕಸಾಪ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುನಾಥ ಕಾಮತ್, ಕಜಾಪ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ವಿಜೇಂದ್ರ ಶೇಟ್, ಕಾಲೇಜು ಪ್ರಿನ್ಸಿಪಾಲರಾದ ಡಾ. ಉಮೇಶ್ ಅವರು ಉಪಸ್ಥಿತರಿದ್ದರು. ಡಾ. ಶ್ರೀಪತಿ ಹಳಗುಂದ, ವಿದ್ಯಾರ್ಥಿಗಳು ಭಾಗವಹಿಸಿದ್ದರು.