Saturday, June 20, 2026
Saturday, June 20, 2026

Karnataka Janapada Parishath ಹೊಸನಗರದಲ್ಲಿ ಪುಸ್ತಕ ಬಿಡುಗಡೆ & ಜಾನಪದ ಒಳನೋಟ ವಿಚಾರ ಸಂಕಿರಣ

Date:

Karnataka Janapada Parishath ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು, ತಾಲ್ಲೂಕು, ಶಿವಮೊಗ್ಗ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಡಾ. ಎಸ್.ಪಿ. ಪದ್ಮಪ್ರಸಾದ್ ಅವರು ಬರೆದ ನಮ್ಮೂರು ಹೊಸನಗರ ಪುಸ್ತಕ ಪರಿಚಯ ಮತ್ತು ಹೊಸನಗರ ಜಾನಪದ ಒಳನೋಟ ವಿಚಾರ ಸಂಕಿರಣ ನಡೆಯಿತು.

ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ದೀಪಬೆಳಗಿಸಿ ಉದ್ಘಾಟಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷರಾದ ಡಿ. ಮಂಜುನಾಥ ಪ್ರಾಸ್ತಾವಿಕ ಮಾತನಾಡಿದರು. ಹಿರಿಯ ಸಾಹಿತಿಗಳಾದ ಡಾ. ಪದ್ಮಪ್ರಸಾದ್ ಅವರನ್ನು ಅಭಿನಂದಿಸಲಾಯಿತು. ಸೋಲಿಲ್ಲದ ಸರದಾರ ಪ್ರಶಸ್ತಿಗೆ ಆಯ್ಕೆಯಾದ ಕಲಗೋಡು ರತ್ನಾಕರ ಅವರನ್ನು ಸನ್ಮಾನಿಸಲಾಯಿತು. ಆಂಜನೇಯ ಜೋಗಿ ಅವರ ಜನಪದ ಹಾಡು ಆಕರ್ಷಣೆಯಾಗಿತ್ತು.

Karnataka Janapada Parishath ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಹಾಲಗದ್ದೆ ಉಮೇಶ್, ಕಜಾಪ ತಾಲ್ಲೂಕು ಅಧ್ಯಕ್ಷರಾದ ಎಂ. ಎಂ. ಪರಮೇಶ್, ಕಸಾಪ ತಾಲ್ಲೂಕು ಅಧ್ಯಕ್ಷರಾದ ತ. ಮ. ನರಸಿಂಹ, ಕಸಾಪ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುನಾಥ ಕಾಮತ್, ಕಜಾಪ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ‌ವಿಜೇಂದ್ರ ಶೇಟ್, ಕಾಲೇಜು ಪ್ರಿನ್ಸಿಪಾಲರಾದ ಡಾ. ಉಮೇಶ್ ಅವರು ಉಪಸ್ಥಿತರಿದ್ದರು. ಡಾ. ಶ್ರೀಪತಿ ಹಳಗುಂದ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...