Govind Karjol ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳರವರ ಮೇಲೆ ಹಲ್ಲೆಗೆ ಯತ್ನಿಸಿ ಶಾಂತಿ ಕದಡಲು ಪ್ರಯತ್ನಿಸಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಜಿಲ್ಲಾ ಬಿಜೆಪಿ ಮುಖಂಡರು ಪೊಲೀಸ್ ವರಿಷ್ಟಾಧಿಕಾರಿಯನ್ನು ಒತ್ತಾಯಿಸಿದರು.
ಈ ಸಂಬಂಧ ಜಿಲ್ಲಾ ಸಹಾಯಕ ಪೊಲೀಸ್ ನಿರೀಕ್ಷಕ ಕಿಣಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಮುಖಂ ಡರುಗಳು ಚಿತ್ರದುರ್ಗಾದಲ್ಲಿ ಕೆಲವು ಕಾಂಗ್ರೆಸ್ ಮುಖಂಡರುಗಳು ಗೋವಿಂದ ಕಾರಜೋಳ ಅವರು ಪತ್ರಿಕಾಗೋಷ್ಠಿ ನಡೆಸುವ ಸಂದರ್ಭದಲ್ಲಿ ಅಡ್ಡಿಪಡಿಸಿ ಬೆದರಿಕೆ ಹಾಕಿ ಹಲ್ಲೆಗೂ ಯತ್ನ ನಡೆಸಿದ್ದಾರೆ ಎಂದು ಆರೋಪಿಸಿದರು.
Govind Karjol ಭಾರತ ದೇಶದಲ್ಲಿ ವಾಕ್‌ಸ್ವಾತಂತ್ರ್ಯವನ್ನು ನಿಗ್ರಹಿಸಲು ಕಾಂಗ್ರೆಸ್ ಮುಖಂಡರುಗಳ ನಡೆ ಸಂವಿಧಾನ ವಿರೋಧಿಯಾಗಿದೆ. ಕೂಡಲೇ ಸಾರ್ವಜನಿಕ ಶಾಂತಿ ಕದಡುವವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ಕೇಶವ, ಎಸ್.ಡಿ.ಎಂ. ಮಂಜು, ಶಿವಪ್ರಸಾದ್, ನರಸಿಂಹ ಮೂರ್ತಿ ಹಾಜರಿದ್ದರು.