Thursday, April 17, 2025
Thursday, April 17, 2025

Visvesvaraya Jal Nigam ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯಲ್ಲಿ ನೀರು ಬಿಡುಗಡೆ, ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ಮಾಹಿತಿ

Date:

Visvesvaraya Jala Nigam ವಿಶ್ವೇಶ್ವರಯ್ಯ ಜಲ ನಿಗಮದ ಅಡಿಯಲ್ಲಿ ಬರುವ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯು ಭದ್ರಾ ಜಲಾಶಯದಿಂದ ಪ್ರಾರಂಭವಾಗಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಲಿಂಗದಹಳ್ಳಿ ತರೀಕೆರೆ ಕಸಬಾ ಅಮೃತಾಪುರ ಅಜ್ಜಂಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹಾದು ಹೋಗಿದ್ದು ಸರ್ಕಾರದ ನಿರ್ದೇಶನದಂತೆ ಡಿ. 29 ರಂದು ಶಾಂತಿಪುರ ಪಂಪ್‍ಹೌಸ್-1, ಜಂಭದಹಳ್ಳ ಅಕ್ಬೆಡಕ್ಸ್ ತರೀಕೆರೆ ರೈಲು ಸೇತುವೆ ಬೆಟ್ಟತಾವರೆಕೆರೆ ಪಂಪ್‍ಹೌಸ್-2 ಅಜ್ಜಂಪುರ ಸುರಂಗದ ಮೂಲಕ ಹೆಬ್ಬೂರು ಗ್ರಾಮದ ಹತ್ತಿರದ ವೈ-ಜಂಕ್ಷನ್ ಮುಖಾಂತರ ನೀರನ್ನು ಹರಿಸಲಾಗುವುದು.

ಈ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರು ಕಾಲುವೆ ಹಾಗೂ ಹಳ್ಳದ ಪಾತ್ರಗಳಲ್ಲಿ ತಿರುಗಾಡುವುದು ಜನ ಜಾನುವಾರುಗಳನ್ನು ಕಾಲುವೆ ಒಳಗಡೆ ಬಿಡುವುದು ಹಾಗೂ ಇತರೆ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.

Visvesvaraya Jala Nigam ಈ ಸೂಚನೆಗಳನ್ನು ಉಲ್ಲಂಘಿಸುವುದು ನಿಗಮದ ಆಸ್ತಿಯಾದ ನೀರಾವರಿ ಕಾಲುವೆ ಕಟ್ಟಡಗಳನ್ನು ಜಖಂಗೊಳಿಸುವುದು, ಅನಧಿಕೃತವಾಗಿ ಪಂಪ್‍ಸೆಟ್‍ಗಳನ್ನು ಅಳವಡಿಸಿ ನೀರನ್ನು ಎತ್ತುವುದು ನೀರಾವರಿ ಕಾಯ್ದೆಯ ವಿವಿಧ ನಿಯಮಗಳ ಪ್ರಕಾರ ಕಾನೂರು ಬಾಹಿರವಾಗಿದ್ದು, ಇದನ್ನು ಉಲ್ಲಂಘಿಸುವವರನ್ನು ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ವಿಜನಿನಿಯ ಸೂಪರಿಂಟೆಂಡಿಂಗ್ ಇಂಜಿನಿಯರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....