Tuesday, December 16, 2025
Tuesday, December 16, 2025

CM Siddharamaih ಬೆಂಗಳೂರಿನಲ್ಲಿ 100 ವಿದ್ಯುತ್ಚಾಲಿತ ಬಸ್ ಜನಸೇವೆಗೆ ಬಿಡುಗಡೆ ಮಾಡಿದ ಮುಖ್ಯಮಂತ್ರಿಗಳು

Date:

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ 100 ವಿದ್ಯುತ್ ಚಾಲಿತ ಬಸ್ ಗಳನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದರು.

ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ.
ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್ ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ ಜನ ಬಿಎಂಟಿಸಿ ಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದರಲ್ಲಿ ಎಲ್ಲ ಜಾತಿ, ಎಲ್ಲ ಧರ್ಮದ, ಎಲ್ಲ ಅಂತಸ್ತಿನ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ.
ಉಚಿತ ಬಸ್ ಪ್ರಯಾಣವನ್ನು ಬಿಜೆಪಿಯವರು ಟೀಕಿಸುತ್ತಿದ್ದಾರೆ. ಆದರೆ ಬಿಜೆಪಿ ಯವರು ತಾವು ಅಧಿಕಾರದಲ್ಲಿದ್ದಾಗ ಈ ಜನೋಪಯೋಗಿ ಯೋಜನೆಯನ್ನು ಏಕೆ ಜಾರಿಗೆ ತರಲಿಲ್ಲ?

ನಮ್ಮ ಗ್ಯಾರಂಟಿಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿ ರಾಜ್ಯದ ಆರ್ಥಿಕ ಚಟುವಟಿಕೆ ಹೆಚ್ಚಾಗಿದೆ. ಇದರಿಂದ ರಾಜ್ಯದ ಆರ್ಥಿಕ ಬೆಳವಣಿಗೆ ಆಗುತ್ತಿದೆ. ಕಾರ್ಮಿಕ ಮತ್ತು ರೈತ ಮಹಿಳೆಯರು, ದುಡಿಯುವ ವರ್ಗಗಳ ಮಹಿಳೆಯರಿಗೆ ಇದರಿಂದ ಸಾಕಷ್ಟು ಹಣ ಉಳಿತಾಯವಾಗಿದೆ. ಆ ಹಣವನ್ನು ತಮ್ಮ ಕುಟುಂಬದ ಇತರೆ ಅಗತ್ಯಗಳಿಗೆ ಬಳಸುತ್ತಿದ್ದಾರೆ. ಹೀಗಾಗಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಶಕ್ತಿಯೂ ಹೆಚ್ಚುತ್ತಿದೆ.

CM Siddharamaih ರಾಜ್ಯದ 4 ಕೋಟಿ 30 ಲಕ್ಷ ಮಂದಿ ನೇರವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಆ ಮೂಲಕ ಬಡವರು ಮತ್ತು ದುಡಿಯುವ ವರ್ಗಗಳನ್ನು ಆರ್ಥಿಕ ಪ್ರಗತಿಯ ಮುಖ್ಯವಾಹಿನಿಗೆ ತರಲಾಗುತ್ತಿದೆ.

ಶಕ್ತಿ ಮೂಲಕ ನಾಡಿನ ಸಮಸ್ತ ಮಹಿಳೆಯರಿಗೆ ಮತ್ತು ಬಡ, ಶ್ರಮಿಕ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಸ್ವಾತಂತ್ರ್ಯ ಲಭಿಸಿದೆ. ಇದನ್ನು ಸಾಧಿಸಲು ಕಾಂಗ್ರೆಸ್ ಸರ್ಕಾರವೇ ಬರಬೇಕಾಯಿತು. ಹಿಂದಿದ್ದ ಬಿಜೆಪಿ ಸರ್ಕಾರಗಳು ಇದನ್ನು ಸಾಧಿಸಲಿಲ್ಲ. ಬದಲಿಗೆ ಟೀಕಿಸುತ್ತಾ ಕುಳಿತಿವೆ ಎಂದು ಸಿದ್ಧರಾಮಯ್ಯ ವಿಪಕ್ಷಗಳ ವಿರುದ್ಧ ಕಟಕಿಯಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...