Thursday, March 19, 2026
Thursday, March 19, 2026

Department of Kannada and Culture ಕುಪ್ಪಳಿಯಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನೋತ್ಸವ

Date:

Department of Kannada and Culture ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ-ಕುಪ್ಪಳಿ ಮತ್ತು ಜಿಲ್ಲಾಡಳಿತ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 29ರಂದು ಬೆಳಿಗ್ಗೆ 10:00ಕ್ಕೆ ಕುಪ್ಪಳಿಯ ಹೇಮಾಂಗಣದಲ್ಲಿ ಕುವೆಂಪು ಅವರ 119ನೇ ಜನ್ಮದಿನೋತ್ಸವ, ಕುವೆಂಪು ರಾಷ್ಟ್ರೀಯ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಅಂದು ಬೆಳಿಗ್ಗೆ 10:00ಕ್ಕೆ ಅತಿಥಿಗಳಿಂದ ಕವಿಶೈಲದಲ್ಲಿ ಕವಿನಮನ, ಬೆ. 11ರಿಂದ ಮಾಜಿ ಗೃಹಸಚಿವ, ಶಾಸಕ ಆರಗ ಜ್ಞಾನೇಂದ್ರರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಲಿರುವರು.

ಕಾರ್ಯಕ್ರಮದಲ್ಲಿ 2023ನೇ ಸಾಲಿನ ಕುವೆಂಪು ಪ್ರಶಸ್ತಿ ಪುರಸ್ಕೃತ ಖ್ಯಾತ ಬಂಗಾಳಿ ಸಾಹಿತಿ ಶ್ರೀ ಶೀರ್ಷೇಂಧು ಮುಖ್ಯೋಪಾಧ್ಯಾಯರವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಡಾ. ಬಿ.ಎಲ್.ಶಂಕರ್‌ರವರು ಪ್ರಧಾನ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸ್ಥಾಪಕ ನಿರ್ದೇಶಕರು ಮತ್ತು ಪ್ರೋಫೆಸರ್, ನೆಫ್ರೋ ಯುರೋಲಜಿ ಸಂಸ್ಥೆಯ ಡಾ. ಜಿ.ಕೆ. ವೆಂಕಟೇಶ್ ಭಾಗವಹಿಸಲಿದ್ದಾರೆ.

Department of Kannada and Culture ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ. ಸುಧಾಕರ್ ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರುಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿರುವರು.

ಅಂದು ಸಂಜೆ 7:00ಕ್ಕೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಶಿವಮೊಗ್ಗದ ನಮ್ ಟೀಮ್ ತಂಡದವರಿಂದ ವಾಲ್ಮೀಕಿಯ ಭಾಗ್ಯ ನಾಟಕ ಏರ್ಪಡಿಸಲಾಗಿದೆ.
ಇದೇ ಸಮಾರಂಭದಲ್ಲಿ ಕುವೆಂಪುರವರ ಮೊದಲ ಪುಸ್ತಕ ಹಾಗೂ ಶೀರ್ಷೇಂಧು ಮುಖ್ಯೋಪಾಧ್ಯಾಯರವರ ಸಾಮೀಪ್ಯ (ಬಂಗಾಳಿ) ಪುಸ್ತಕ ಬಿಡುಗಡೆಯಾಗಲಿದೆ.

ಡಿಸೆಂಬರ್ 29, 2023 ರಿಂದ ಜನವರಿ 01, 2024 ರವರೆಗೆ ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಕೇಂದ್ರ, ಕುಪ್ಪಳಿ, ಇವರ ಸಹಯೋಗದೊಂದಿಗೆ ಕುವೆಂಪು ಅವರ ವಿಚಾರ ಸಾಹಿತ್ಯ ಕುರಿತ ರಾಷ್ಟ್ರಮಟ್ಟದ ಕಾರ್ಯಾಗಾರ ನಡೆಯಲಿದೆ ಎಂದು ಶಿಬಿರದ ನಿರ್ದೇಶಕರಾದ
ಡಾ|| ಬಿ.ಎಂ. ಪುಟ್ಟಯ್ಯನವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...