Ministry of Electronics and Information Technology ಡೀಪ್‌ಫೇಕ್ ಮತ್ತು ಕೃತಕ ಬುದ್ಧಿಮತ್ತೆ ಆಧಾರಿತ ತಪ್ಪುಮಾಹಿತಿಗಳ ಪ್ರಸರಣ ಕುರಿತು ಸರ್ಕಾರಕಳವಳ ವ್ಯಕ್ತಪಡಿಸಿದೆ.
ಐ.ಟಿ ನಿಯಮಗಳಿಗೆ ಬದ್ಧರಾಗಿರಬೇಕು ಎಂದು ಸಾಮಾಜಿಕ ಮಾಧ್ಯಮಗಳಿಗೆ ಸೂಚನೆ ನೀಡಿದೆ.
ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಪ್ರಸ್ತುತ ಚಾಲ್ತಿಯಲ್ಲಿರುವ ಐಟಿ ನಿಯಮಗಳಿಗೆ ಬದ್ಧರಾಗಿರಬೇಕು ಇಂದು ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಸೂಚನೆ ನೀಡಿದೆ.
Ministry of Electronics and Information Technology ಕೃತಕ ಬುದ್ಧಿಮತ್ತೆ ಮತ್ತು ಡೀಪ್ ಫೇಕ್ ತಂತ್ರಜ್ಞಾನದ ದುರ್ಬಳಕೆ ತಡೆಯುವುದರ ಕುರಿತಂತೆ ಈ ಮಾರ್ಗದರ್ಶಿ ಸೂಚನೆಗಳಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ತನ್ನ ಬಳಕೆದಾರರಿಗೆ ನಿರ್ದಿಷ್ಟ ಮಾಹಿತಿಯು ಐ ಟಿ ನಿಯಮಗಳ ಅನುಸಾರ ನಿಷೇಧಿಸಿರುವ ಅಡಕಗಳನ್ನು ಒಳಗೊಂಡಿದೆ ಎಂದು ತಿಳಿಸಿದೆ.
ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಇತ್ತೀಚೆಗೆ ಆಧುನಿಕ ಪ್ರತಿನಿಧಿಗಳ ಜೊತೆಗೆ ಚರ್ಚಿಸಿದ್ದರು. ಅದರ ಹಿಂದೆ ಈ ನಿಯಮಗಳನ್ನು ಹೊರಡಿಸಲಾಗಿದೆ.
ನಿಯಮ ಉಲ್ಲಂಘನೆ ಸಂದರ್ಭದಲ್ಲಿ ಐಪಿಸಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ಅನ್ವಯ ವಿಧಿಸಬಹುದಾದ ಶಿಕ್ಷೆ ದಂಡ ಕುರಿತಂತೆಯೂ ಸಾಮಾಜಿಕ ಮಾಧ್ಯಮಗಳು ಬಳಕೆದಾರರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.