Saturday, September 28, 2024
Saturday, September 28, 2024

Vishwakarma Mahasabha Shivamogga ಜಿಲ್ಲಾಡಳಿತದ ವತಿಯಿಂದ ವಿಶ್ವಕರ್ಮ ಜಕಣಾಚಾರಿ ಸಂಸ್ಮರಣಾ ದಿನಕ್ಕೆ ಸಿದ್ಧತೆ

Date:

Vishwakarma Mahasabha Shivamogga ಶಿವಮೊಗ್ಗ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಮಹಾಸಭಾ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ದಿ: 01/01/2024 ರಂದು ಬೆಳಿಗ್ಗೆ 11.00ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಎಸ್.ಎನ್.ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ. ಸುಧಾಕರ್ ಸೇರಿದಂತೆ ಜಿಲ್ಲೆಯ ಸಂಸದರು, ಎಲ್ಲಾ ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರುಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿವರ್ಗದವರು, ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Vishwakarma Mahasabha Shivamogga ಕಾರ್ಯಕ್ರಮದಲ್ಲಿ ಶೃಂಗೇರಿಯ ಕನ್ನಡ ಪ್ರಧ್ಯಾಪಕ ಡಾ. ಕೆ.ಎಸ್.ವೆಂಕಪ್ಪ ಆಚಾರ್ಯರವರಿಂದ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್., ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್, ಜಿ.ಪಂ. ಸಿಇಓ ಲೋಖಂಡೆ ಸ್ನೇಹಲ್ ಸುಧಾಕರ್, ಮಹಾನಗರ ಪಾಲಿಕೆ ಆಯಕ್ತ ಕೆ. ಮಾಯಾಣ್ಣ ಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹೆಚ್. ಇವರುಗಳು ಉಪಸ್ಥಿತರಿರುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikaripura News ಅಹಿಂದ ಸಂಘಟನೆ ಕರೆ ನೀಡಿದ್ದ ಶಿಕಾರಿಪುರ ಬಂದ್ ಯಶಸ್ವಿ

Shikaripura News ನಾಡಿನ ಅಹಿಂದ ವರ್ಗಕ್ಕೆ ಸೇರಿದ ಜನರ ಹಿತ ಕಾಯುವ...

New Delhi News ಅಪಹರಣಕ್ಕೊಳಗಾಗಿದ್ದ ಬಾಲಕನೇ ಇಂದು ವಕೀಲನಾಗಿ ಅದೇ ಕಿಡ್ನಾಪರ್ಸ್ ಗೆ ಶಿಕ್ಷೆ ಕೊಡಿಸಿದ

New Delhi News ಈ ಹಿಂದೆ 7 ವರ್ಷದವನಾಗಿದ್ದಾಗ ಅಪಹರಣಕ್ಕೊಳಗಾಗಿದ್ದ ಬಾಲಕ...

Kasturi Rangan Comittee Report ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

Kasturi Rangan Comittee Report ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು...

Hosanagara News ಇಸ್ಪೀಟ್ ಅಡ್ಡೆಗೆ ಪೊಲೀಸರ ದಾಳಿ – 11 ಜನರ ಬಂಧನ 17,640 ರೂಪಾಯಿ ವಶ

Hosanagara News ಹೊಸನಗರ ತಾಲ್ಲೂಕು ಮಾರುತೀಪುರ ಗ್ರಾಮ ಪಂಚಾಯಿತಿಯ ಹಳೆಬಾಣಿಗ ರಸ್ತೆಯ...