Wednesday, July 8, 2026
Wednesday, July 8, 2026

CM Siddharamaih ಗ್ರಾಮೀಣರ ಗುಳೆ ತಪ್ಪಿಸಿ ಉದ್ಯೋಗ ಸೃಷ್ಟಿಸಿ- ಸಿದ್ಧರಾಮಯ್ಯ

Date:

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಕೆಲವು ಸಲಹೆ ಸೂಚನೆಗಳನ್ನು ನೀಡಿದರು.

ಅಪ್ರಾಪ್ತ ಹೆಣ್ಣುಮಕ್ಕಳ ಮದುವೆ, ಭ್ರೂಣಹತ್ಯೆ ತಪ್ಪಿಸಬೇಕು. ಕೋಲಾರದಲ್ಲಿ ಈ ಪ್ರಮಾಣದಲ್ಲಿ ಹೆಚ್ಚಾಗಲು ಕಾರಣವೇನು? ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವುದು ಜಿಲ್ಲೆಯ ಅಧಿಕಾರಿಗಳ ಕರ್ತವ್ಯ. ಮುಂದೆ ಇಂಥವು ಮರುಕಳಿಸಿದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಖಚಿತ.

ಜಿಲ್ಲಾಧಿಕಾರಿಗಳ ಮತ್ತು ತಹಶೀಲ್ದಾರ್‌ಗಳ ಖಾತೆಯಲ್ಲಿ ಬರ ನಿರ್ವಹಣೆಗೆ ಅಗತ್ಯವಾದ ಹಣ ಇದೆ. ಜನ-ಜಾನವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗದಂತೆ ಜಿಲ್ಲಾಧಿಕಾರಿಗಳು ಕ್ರಮ ವಹಿಸಬೇಕು.

ಮೇವಿಗೆ ತೊಂದರೆ ಇಲ್ಲ . ಮುಂದಿನ ಹಲವು ವಾರಗಳಿಗೆ ಆಗುವಷ್ಟು ಮೇವು ಸಂಗ್ರಹ ಇದೆ. ಗುಳೆ ಹೋಗುವುದನ್ನು ತಪ್ಪಿಸಲು ಉದ್ಯೋಗ ಸೃಷ್ಟಿ ಬಗ್ಗೆ ಆದ್ಯತೆ ನೀಡಬೇಕು.
ನರೇಗಾ ಉದ್ಯೋಗ 100 ರಿಂದ 150 ದಿನಗಳಿಗೆ ಹೆಚ್ಚಿಸಲು ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಇನ್ನೂ ಕೇಂದ್ರದಿಂದ ಒಪ್ಪಿಗೆ ಸಿಕ್ಕಿಲ್ಲ.

ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಆಗುವವರೆಗೂ ರೈತರಿಗೆ 2 ಸಾವಿರ ತಕ್ಷಣಕ್ಕೆ ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದೇನೆ.
ಸಣ್ಣ ಪುಟ್ಟ ಸಮಸ್ಯೆಗಳಿಗೂ ಕೋಲಾರದ ಜನ ನನ್ನ ಬಳಿಗೆ ಬಂದರೆ ಇಲ್ಲಿ ಜಿಲ್ಲಾಡಳಿತ ವಿಫಲ ಎಂದೇ ಪರಿಗಣಿಸಬೇಕಾಗುತ್ತದೆ. ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು.

CM Siddharamaih ಜನರ ಹಣದಲ್ಲಿ ಅಧಿಕಾರಿಗಳಿಗೆ ಸವಲತ್ತುಗಳು ಸಿಗುತ್ತಿವೆ. ಆದ್ದರಿಂದ ನಾವು ಜನರ ಪರವಾಗಿರಬೇಕು. ರೈತರನ್ನು ಪೊಲೀಸ್ ಮತ್ತು ಇತರೆ ಇಲಾಖೆ ಅಧಿಕಾರಿಗಳು ಸತಾಯಿಸಬಾರದು. ಇದನ್ನು ನಾನು ಸಹಿಸಲ್ಲ. ಇದನ್ನು ಎಸ್.ಪಿ ಗಳು ಗಮನಿಸಬೇಕು. ಎಸ್.ಪಿ ಗಳು ಠಾಣೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು.

ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕೋಲಾರ ಜಿಲ್ಲೆ ಪ್ರಗತಿ ಸಾಧಿಸಬೇಕು. ಆರೋಗ್ಯ ಮತ್ತು ಶಿಕ್ಷಣದಲ್ಲಿ ಮುಂದಿರಬೇಕು. ಮಕ್ಕಳಲ್ಲಿ ಅನಿಮೀಯ, ರಕ್ತ ಹೀನತೆ 0.6℅ ಹೆಚ್ಚಾಗಿದೆ. ಇದನ್ನು ನಿಯಂತ್ರಿಸಲು ಏನು ಕ್ರಮ ಕೈಗೊಳ್ಳಲಾಗಿದೆ? ಅನಿಮಿಯ ಮುಕ್ತ ಕರ್ನಾಟಕ ನಮ್ಮ ಸರ್ಕಾರದ ಮಹತ್ವದ ಕಾರ್ಯಕ್ರಮ. ಇದನ್ನು ಪರಿಣಾಮಕರಿಯಾಗಿ ಜಾರಿ ಮಾಡಬೇಕು.

ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಲ್ಲಿ ನಾವು ಊಟ ಕೊಡುತ್ತಿದ್ದೇವೆ. ಆದರೂ ರಕ್ತಹೀನತೆ ಪ್ರಮಾಣ 0.6℅ ಹೆಚ್ಚಾಗಿದ್ದು ಏಕೆ ಎಂದು ಪರಿಶೀಲಿಸಿ, ತಕ್ಷಣ ಪರಿಹಾರ ಮಾಡಬೇಕು.
31 ಜಿಲ್ಲೆಗಳಲ್ಲಿ ತಲಾ ಆದಾಯದಲ್ಲಿ ಕೋಲಾರ 19ನೇ ಸ್ಥಾನದಲ್ಲಿದೆ ಏಕೆ? ಜಿಲ್ಲಾ ಮಟ್ಟದ ಅಧಿಕಾರಿಗಳೇ ಹೊಣೆಯಾಗಿದ್ದು, ಮುಂದಿನ ಸಭೆಗಳಲ್ಲಿ ಇದೆಲ್ಲಾ ಸುಧಾರಿಸಿರಬೇಕು.

ಸ್ಮಶಾನ ಮತ್ತು ಖಬರಸ್ತಾನಕ್ಕೆ ಅಗತ್ಯ ಜಾಗಗಳನ್ನು ಒದಗಿಸಬೇಕು.‌ ಸರ್ಕಾರಿ ಸ್ಥಳ ಇಲ್ಲದಿದ್ದರೆ ಖರೀದಿಸಿ ಕೊಡಬೇಕು. ದಲಿತರು ಸೇರಿದಂತೆ ಯಾವುದೇ ಸಮುದಾಯ, ಧರ್ಮದವರಿಗೂ ಶವ ಸಂಸ್ಕಾರಕ್ಕೆ ತೊಂದರೆ ಆಗಕೂಡದು ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...