CM Siddharamiah ಎಲ್ಲಾ ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು ಹಾಗೂ ತಹಶೀಲ್ದಾರರಿಗೆ ಬಾಕಿಯಿರುವ ಕೇಸುಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗಿದೆ. ಅಸಿಸ್ಟೆಂಟ್ ಕಮೀಷನರ್ ನ ಬಳಿ 3,995 ಕೇಸುಗಳು ಬಾಕಿಯಿದ್ದು, ಅಭಿಯಾನದ ರೀತಿಯಲ್ಲಿ ಕಾರ್ಯನಿರ್ವಹಿಸಿ, ಕೇಸುಗಳನ್ನು ಇತ್ಯರ್ಥಪಡಿಸಲು ಸೂಚಿಸಲಾಗಿದೆ. ಖಾತೆ, ಸರ್ವೆ, ಪೋಡಿಗಳು ಸರಿಯಾಗಿ ಆಗದಿರುವ ಕಾರಣ ಸಹಾಯಕ ಆಯುಕ್ತರು, ತಹಶೀಲ್ದಾರರ ಬಳಿ ಪ್ರಕರಣಗಳು ಬಾಕಿ ಉಳಿದಿರುತ್ತವೆ. ಆದ್ದರಿಂದ ಗ್ರಾಮ ಲೆಕ್ಕಿಗರು, ಕಂದಾಯ ಅಧಿಕಾರಿಗಳು, ತಹಶೀಲ್ದಾರರು, ಸಹಾಯಕ ಆಯುಕ್ತರು ತಮ್ಮ ತಮ್ಮ ಹಂತದಲ್ಲಿ ಕೆಲಸವನ್ನು ಮಾಡಬೇಕು. ಜನರ ಕೈಗೆ ಅಧಿಕಾರಿಗಳು ಸಿಗದಿರುವುದು ಸಮಸ್ಯೆಯಾಗಿದ್ದು, ಜನರ ಭೇಟಿಗೆ ಸಮಯ ನಿಗದಿಪಡಿಸಬೇಕು.
CM Siddharamiah ತಹಶೀಲ್ದಾರರ ಕಚೇರಿಯಲ್ಲಿ ತಾಲ್ಲೂಕುವಾರು ಸರ್ಕಾರಿ ಜಮೀನು, ಒತ್ತುವರಿ ಆಗಿರುವ ಬಗ್ಗೆ ಒತ್ತುವರಿ ತೆರವುಗೊಳಿಸಿರುವ ಬಗ್ಗೆ ಮಾಹಿತಿಯನ್ನು ನೀಡಬೇಕು. ಎಷ್ಟೇ ಪ್ರಭಾವಿಗಳಿದ್ದರೂ, ಅವರಿಂದ ಒತ್ತುವರಿಯಾಗಿರುವ ಕೆರೆ ಮತ್ತು ಸರ್ಕಾರಿ ಭೂಮಿಯನ್ನು ತೆರವುಗೊಳಿಸಲು ಸೂಚಿಸಲಾಗಿದೆ. ಅರಣ್ಯ ಇಲಾಖೆಯವರೊಂದಿಗೆ ಸಂಯೋಜಿಸಿ ಸರ್ಕಾರಿ ಭೂಮಿ ಮತ್ತು ಅರಣ್ಯ ಭೂಮಿಯ ಯಾವುವು ಎಂಬ ಬಗ್ಗೆ ಜಂಟಿ ಸರ್ವೇ ನಡೆಸಿ, ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.