Department Of Labour Commission ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಫ್ಲಿಪ್‍ಕಾರ್ಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಪೊ ಬಿಗ್ ಬಾಸ್ಕೆಟ್, ಡೊಮಿನೊಸ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿರುವ ಗಿಗ್ ಕಾರ್ಮಿಕರಿಗೆ ದೇಶದಲ್ಲಿಯೇ ಮೊದಲ ಬಾರಿಗೆ ವಿಮಾ ಯೋಜನೆ ಜಾರಿಯಾಗಿದೆ.
ಎಲ್ಲಾ ಅರ್ಹ ಅಸಂಘಟಿತ ಗಿಗ್ ಕಾರ್ಮಿಕರಿಗೆ ಸೇವಾ ಸಿಂಧು ಪೋರ್ಟಲ್‍ನಲ್ಲಿ ನೋಂದಾಯಿಸಬಹುದಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ, ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯವಾಗಲಿದ್ದು, ಯೋಜನೆ ಸಂಪೂರ್ಣ ಉಚಿತ, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯ ಇರುವುದಿಲ್ಲ. ಅಪಘಾತದಲ್ಲಿ ಮರಣ ಹೊಂದಿದ್ದಲ್ಲಿ ವಿಮಾ ಪರಿಹಾರ 2 ಲಕ್ಷ ರೂ. ಹಾಗೂ ಜೀವ ವಿಮಾ 2 ಲಕ್ಷ ರೂ. ಸೇರಿ ಒಟ್ಟು 4 ಲಕ್ಷ ರೂ, ಅಪಘಾತದಿಂದ ಶಾಶ್ವತ ದುರ್ಬಲ ಹೊಂದಿದ್ದಲ್ಲಿ 2 ಲಕ್ಷ ರೂ ವರೆಗೆ ಸೌಲಭ್ಯ, ಆಸ್ಪತ್ರೆ ವೆಚ್ಚ ಮರುಪಾವತಿ ಒಂದು ಲಕ್ಷ ರೂ. ವರೆಗೆ ಸೌಲಭ್ಯಗಳು ಇರುತ್ತದೆ.
Department Of Labour Commission 18 ರಿಂದ 60 ವರ್ಷದೊಳಗಿನ ಗಿಗ್ ಕಾರ್ಮಿಕರು ಸೇವಾಸಿಂಧು ಪೋರ್ಟಲ್ ಮೂಲಕ ತಮ್ಮ ಹೆಸರು ನೋಂದಾಯಿಸಬೇಕು. ಆದಾಯ ತೆರಿಗೆ ಪಾವತಿದಾರರಾಗಿರಬಾರದು, ಭವಿಷ್ಯನಿಧಿ ಹಾಗೂ ಇಎಸ್‍ಐ ಫಲಾನುಭವಿಯಾಗಿರಬಾರದು ಹಾಗೂ ಕರ್ನಾಟಕದಲ್ಲಿ ಡೆಲಿವರಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಮಾತ್ರ ಅನ್ವಯಿಸುತ್ತದೆ. ಆಧಾರ್ ಸಂಖ್ಯೆ, ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ, ವೇತನ ಚೀಟಿ, ವೇತನ ಪಡೆದ ಬ್ಯಾಂಕ್ ಪಾಸ್‍ಬುಕ್ ಹಾಗೂ ಇ-ಶ್ರಮ್ ಕಾರ್ಡ್ ಈ ಎಲ್ಲಾ ದಾಖಲಾತಿಗಳನ್ನು ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಾರ್ಮಿಕ ನಿರೀಕ್ಷಕರುಗಳ ಕಚೇರಿಯ ಕಾರ್ಮಿಕ ಅಧಿಕಾರಿ ದೂ.ಸಂ. 08182-248940 ನ್ನು ಸಂಪರ್ಕಿಸಬಹುದು ಹಾಗೂ ಶಿವಮೊಗ್ಗ ಜಿಲ್ಲೆಯ ಕಾರ್ಮಿಕ ಅಧಿಕಾರಿಯವರ ಕಚೇರಿ ಅಥವಾ ಕಾರ್ಮಿಕ ನಿರೀಕ್ಷಕರ ಕಚೇರಿ ಶಿವಮೊಗ್ಗ, ಭದ್ರಾವತಿ, ಸೊರಬ, ಸಾಗರ, ಹೊಸನಗರ, ತೀರ್ಥಹಳ್ಳಿ, ಶಿಕಾರಿಪುರ ಕಚೇರಿಗಳನ್ನು ಸಂಪರ್ಕಿಸಬಹುದೆಂದು ಕಾರ್ಮಿಕ ಅಧಿಕಾರಿ ಸುಮ ಹೆಚ್.ಎಸ್ ಅವರು ತಿಳಿಸಿದ್ದಾರೆ.