Saturday, November 23, 2024
Saturday, November 23, 2024

Congress Foundation Day ಸಮಾನತೆ,ಸೌಹಾರ್ದತೆ & ಸಾಮಾಜಿಕನ್ಯಾಯ ಸ್ಥಾಪನೆಗೆ ಕಾಂಗ್ರೆಸ್ ಹೋರಾಟಿದೆ- ಡಾ.ಅಂಶುಮಂತ್

Date:

Congress Foundation Day ಸ್ವಾತಂತ್ರ್ಯ ಸಂಗ್ರಾಮದಿoದ ಹಿಡಿದು ಇಂದಿನವರೆಗೂ ಸಮಾನತೆ, ಸೌಹಾರ್ದತೆ ಹಾಗೂ ಸಾಮಾಜಿಕ ನ್ಯಾಯದ ಸ್ಥಾಪನೆಗಾಗಿ ಹೋರಾಡುತ್ತಿರುವುದು ಕಾಂಗ್ರೆಸ್ ಎಂದು ಪಕ್ಷದ ಜಿಲ್ಲಾ ಧ್ಯಕ್ಷ ಡಾ. ಅಂಶುಮoತ್ ಹೇಳಿದರು.

ಚಿಕ್ಕಮಗಳೂರು ನಗರದ ರಾಮನಹಳ್ಳಿ ಸಮೀಪದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಏರ್ಪಡಿಸಿದ್ದ 139ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಕಾರ್ಯಕರ್ತರಿಗೆ ಪರಸ್ಪರ ಸಿಹಿ ವಿತರಿಸುವ ಮೂಲಕ ಗುರುವಾರ ಸಂಭ್ರಮಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಪೂರ್ವದ ಮೊದಲೇ 1885ರಲ್ಲಿ ಕೇವಲ 32 ಮಂದಿ ಸದಸ್ಯತ್ವದಿಂದ ಆರಂಭವಾದ ಕಾಂಗ್ರೆಸ್ ಪಕ್ಷವು ಇದೀಗ ಕೋಟಿಗಟ್ಟಲೇ ಮಂದಿ ಸದಸ್ಯತ್ವವನ್ನು ಹೊಂದಿ ಅಭೂತಪೂರ್ವವಾಗಿ ಮುನ್ನಡೆದಿದೆ. ಜೊತೆಗೆ ಪಕ್ಷದಿದಂದ ನೆಹರು, ಇಂದಿರಾಗಾoಧಿ, ರಾಜೀವ್‌ಗಾಂಧಿ, ಲಾಲ್‌ಬಹದ್ದೂರ್ ಶಾಸ್ತ್ರಿ ಸೇರಿದಂತೆ ಅನೇಕ ಮಂದಿ ಪ್ರಧಾನಿ ಹುದ್ದೆಗೇರಿ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದರು ಎಂದರು.

ದೇಶಕ್ಕಾಗಿ ಪ್ರಾಣದ ಹಂಗುತೊರೆದು ತ್ಯಾಗಗೈದ ಕಾಂಗ್ರೆಸ್ ಮಹಾನುಭಾವರಿಂದ ಇಂದಿಗೂ ಸಮಾಜದಲ್ಲಿ ಶಾಂತಿ, ಸಮೃದ್ದಿ ಹಾಗೂ ಸಹೋದರತೆ ಬೆಳೆದುಬಂದಿದೆ. ಆದರೆ ಇಂದಿನ ಬಿಜೆಪಿ ಸರ್ಕಾರಗಳು ಇವುಗಳೆನ್ನೆಲ್ಲಾ ಗಾಳಿಗೆ ತೂರಿ ಕಾನೂನನ್ನು ತಮಗೆ ಬೇಕಾಗುವಂತೆ ಉಪಯೋಗಿಸಿಕೊಂಡಿರುವುದಲ್ಲದೇ ಜನಸಾಮಾನ್ಯರ ದಿನ ನಿತ್ಯದ ಬದುಕನ್ನು ಸರ್ವನಾಶದತ್ತ ಕೊಂಡೊಯ್ಯುತ್ತಿದೆ ಎಂದರು.
ಕಾoಗ್ರೆಸ್ ಜನಪರ ಯೋಜನೆಗಳಿಂದ ಹಳ್ಳಿಗಳಿಗೂ ಅಂಬುಲೆನ್ಸ್ ಸೇವೆ, ತಲಾ ಐದು ಕೆಜಿ ಅಕ್ಕಿ ವ್ಯವಸ್ಥೆ ಕಲ್ಪಿಸಿ ನುಡಿದಂತೆ ನಡೆದಿದೆ. ಅದಲ್ಲದೇ ಇಂದಿನ ಡಿಜಿಟಲೀಕರಣ ವ್ಯವಹಾರಕ್ಕೆ ಮೂಲವಾರಸುದಾರರೇ ಕಾಂ ಗ್ರೆಸ್‌ನ ರಾಜೀವ್ ಗಾಂಧಿಯವರ ಆಲೋಚನೆಗಳೆಂದ ಅವರು ಸಾಮಾನ್ಯ ಜನರಿಗೂ ಆತ್ಮವಿಶ್ವಾಸವನ್ನು ಮೂಡಿ ಸುವ ಯೋಜನೆಗಳನ್ನು ಕಾಂಗ್ರೆಸ್ ನೀಡುತ್ತಿದೆ ಎಂದು ತಿಳಿಸಿದರು.

Congress Foundation Day ಪಕ್ಷದ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ ಮಾತನಾಡಿ ಕಾರ್ಯಕರ್ತರು ಕೇವಲ ಇಂದು ಸಂಸ್ಥಾಪನಾ ದಿನ ಆಚರಿಸಿದರೆ ಸಾಲದು, ಪ್ರತಿನಿತ್ಯವು ಕಾಂಗ್ರೆಸ್ ಬೆಳವಣಿಗೆಗೆ ಪೂರಕ ಚಟುವಟಿಕೆ ನಡೆಸಿದರೆ ಮಾತ್ರ ಸಂಸ್ಥಾ ಪನಾ ದಿನಕ್ಕೆ ನಿಜವಾದ ಅರ್ಥ ಬರಲಿದೆ. ಹೀಗಾಗಿ ಕಾರ್ಯಕರ್ತರು ಪಕ್ಷದ ತತ್ವಸಿದ್ದಾಂತಗಳು ಹಾಗೂ ಪ್ರಾಮಾ ಣಿಕ ಸೇವೆಯ ಗುಣ ಬೆಳೆಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಮಾಜಿ ಅಧ್ಯಕ್ಷ ಡಾ. ಡಿ.ಎಲ್.ವಿಜಯ್‌ಕುಮಾರ್ ಮಾತನಾಡಿ ಕಾಂಗ್ರೆಸ್ ದೇಶದಲ್ಲಿ ಕುಸಿಯುತ್ತಿದೆ ಎಂಬ ಬಿಜೆಪಿಗರ ಹೇಳಿಕೆಗಳಿಗೆ ರಾಜ್ಯದ ತಕ್ಕ ಉತ್ತರ ಸಿಕ್ಕಿದ್ದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ದೇಶದಲ್ಲಿ ಅಧಿಕಾರ ಹಿಡಿದು ಜಾತ್ಯಾತೀತವಾಗಿ ಅಧಿಕಾರ ನಡೆಸಲಿರುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಎದೆಕುಂದದೇ ರಾಹುಲ್‌ಗಾಂಧಿಯವರ ಕೈಬಲಪಡಿಸಬೇಕು ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ ಪಕ್ಷವು ಸ್ಥಾಪಿತಗೊಂಡ ದಿನದಿಂದಲೂ ಹಲ ವಾರು ಆಗು-ಹೋಗುಗಳ ದಾರಿಯಲ್ಲಿ ಸಾಗಿ ಇಂದು ಮುಗಿಲೆತ್ತರಕ್ಕೆ ಬೆಳೆದಿದೆ. ದೇಶದ ಮೊದಲ ಪ್ರಧಾನಿ ನೆಹರು ಅವರ ಮಾರ್ಗದರ್ಶನದಲ್ಲಿ ಇಂದಿಗೂ ಪಕ್ಷದ ಮುಖಂಡರುಗಳು ಕಾರ್ಯನಿರ್ವಹಿಸಿರುವುದಲ್ಲದೇ ರಾಜ್ಯದ ಮೇಲೆ ವಿಶೇಷ ಅಭಿಮಾನದಿಂದ ರಾಷ್ಟಾçಧ್ಯಕ್ಷ ಹುದ್ದೆಯನ್ನು ಖರ್ಗೆಯವರಿಗೆ ನೀಡಿದೆ ಎಂದರು.

ಕಾರ್ಯಕ್ರಮಕ್ಕೂ ಸಮುದಾಯದ ಭವನದ ಮುಂಭಾಗದಲ್ಲಿ ಕಾಂಗ್ರೆಸ್ ಪಕ್ಷದ ಧ್ವಜಾರೋಹಣ ನೆರವೇರಿಸಿ ವಂದೇ ಮಾತರಂ ಗೀತೆಯನ್ನು ಮುಖಂಡರುಗಳು ಹಾಡಿ ಸಂಸ್ಥಾಪನ ದಿನಾಚರಣೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಿಡಿಎ ಮಾಜಿ ಅಧ್ಯಕ್ಷ ಹನೀಫ್, ಕೆಪಿಸಿಸಿ ವಕ್ತಾರ ಹೆಚ್.ಹೆಚ್.ದೇವರಾಜ್, ಜಿಲ್ಲಾ ಉಪಾಧ್ಯಕ್ಷ ಬಿ.ಹೆಚ್.ಹರೀಶ್, ನಗರ ಅಧ್ಯಕ್ಷ ತನೋಜ್‌ಕುಮಾರ್, ನಗರಸಭಾ ಸದಸ್ಯರಾದ ಲಕ್ಷ್ಮಣ, ಮಂಜುಳಾ, ಓಬಿಸಿ ಜಿಲ್ಲಾಧ್ಯಕ್ಷ ಪುಟ್ಟೇಗೌಡ, ಮುಖಂಡರುಗಳಾದ ಸಿ.ಸಿ.ಮಧು, ಅನ್ಸರ್‌ಆಲಿ, ಪ್ರಕಾಶ್ ರೈ, ನಾಗಭೂಷಣ್, ಜಯರಾಜ್‌ಅರಸ್, ಕೆ.ಭರತ್, ಜೇಮ್ಸ್ ಡಿಸೋಜಾ, ತೇರೇಸಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...