Friday, December 5, 2025
Friday, December 5, 2025

Malanadu Vidya Samasthe Chikmagalur ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ವಾರ್ಷಿಕೋತ್ಸವಗಳು ಸಹಕಾರಿ

Date:

Malanadu Vidya Samasthe Chikmagalur ಸಮಾಜದ ಪ್ರತಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಸಲುವಾಗಿ ಹಲವಾರು ವರ್ಷಗಳ ಹಿಂದೆಯೇ ವಿದ್ಯಾಸಂಸ್ಥೆಯನ್ನು ಸ್ಥಾಪಿಸಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಭದ್ರಬುನಾದಿ ಹಾಕಿ ಕೊಟ್ಟವರು ಸಂಸ್ಥೆಯ ಹಿರಿಯರು ಎಂದು ಮಲೆನಾಡು ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಡಿ.ಎಲ್. ವಿಜಯ್ ಕುಮಾರ್ ಹೇಳಿದರು.

ಚಿಕ್ಕಮಗಳೂರು ನಗರದ ಎಂ.ಇ.ಎಸ್. ವಿದ್ಯಾಸಂಸ್ಥೆಯ ಶ್ರೀಮತಿ ಕಮಲಾಬಾಯಿ ನಾಗರಾಜಸಿಂಗ್ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಬುಧವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಪೂರಕವಾಗಿದ್ದು ಮಕ್ಕಳು ಇಂತಹ ಅವಕಾಶವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ತಮ್ಮಲ್ಲಿರುವ ಹುದುಗಿರುವ ಪ್ರತಿಭಾ ಅನಾವರ ಣಕ್ಕೆ ಮುಂದಾಗಬೇಕು ಎಂದು ಸಲಹೆ ಮಾಡಿದರು.

ಚಿಕ್ಕಮಗಳೂರು ನಗರದ ಹೃದಯ ಭಾಗದಲ್ಲಿರುವ ವಿದ್ಯಾಸಂಸ್ಥೆ ಪ್ರಾರಂಭದಲ್ಲಿ ಬೆರಳೆಣಿಕೆಯಷ್ಟು ಮಾತ್ರ ಮಕ್ಕಳು ಸೇರ್ಪಡೆ ಗೊಳ್ಳುತ್ತಿದ್ದು ಇದೀಗ ಸಾವಿರಾರು ವಿದ್ಯಾರ್ಥಿಗಳು ಸಂಸ್ಥೆಯ ಅಭ್ಯಾಸಿಸುವ ಮೂಲಕ ದೇಶ-ವಿದೇಶಗಳಲ್ಲಿ ಉದ್ಯೋಗದಲ್ಲಿದ್ದಾರೆ. ಜೊತೆಗೆ ಸುತ್ತಮುತ್ತಲಿನ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವಾರು ಶಾಖೆಗಳನ್ನು ತೆರೆದು ಸರ್ಕಾರಿ ಶಾಲೆಯಂತೆ ಬಿಂಬಿತವಾಗಿದೆ ಎಂದರು.
ಮಲೆನಾಡು ವಿದ್ಯಾಸಂಸ್ಥೆಯಲ್ಲಿ ಪರಿಣಿತ ಬೋಧಕ ವೃಂದದರಿoದ ಪ್ರತಿವರ್ಷವು ಉತ್ತಮ ಫಲಿತಾಂಶ ವನ್ನು ಪಡೆದುಕೊಂಡಿದೆ ಎಂದ ಅವರು ದಿನದ ಎಂಟುಗoಟೆಗಳ ಶಾಲೆಯಲ್ಲಿ ಅಭ್ಯಾಸಿಸುವ ಮಕ್ಕಳಿಗೆ ಉಳಿದ ಸಮಯದಲ್ಲಿ ಪೋಷಕರು ಮಕ್ಕಳ ಓದಿನ ಅಭ್ಯಾಸದ ಬಗ್ಗೆ ಗಮನಹರಿಸಬೇಕು. ಜೊತೆಗೆ ಬಿಡುವಿನ ಸಮಯದಲ್ಲಿ ಶಾಲೆಗೆ ಭೇಟಿ ನೀಡಿ ಮಕ್ಕಳ ಚಟುವಟಿಕೆಯನ್ನು ಪರಿಶೀಲಿಸಬೇಕು ಎಂದರು.

ವಿದ್ಯಾಸoಸ್ಥೆ ಉಪಾದ್ಯಕ್ಷೆ ರಾಧಾಸುಂದ್ರೇಶ್ ಮಾತನಾಡಿ ಇಂದಿನ ಕಾಲದಲ್ಲಿ ಆಂಗ್ಲಭಾಷೆಯ ವ್ಯಾಮೋಹ ಕ್ಕೆ ಒಳಗಾಗಿ ಅಂಕಗಳಿಗಷ್ಟೇ ಸೀಮಿತರಾಗಬಾರದು. ಬಾಲ್ಯದಿಂದಲೇ ಮಕ್ಕಳಿಗೆ ಸಮಾಜವನ್ನು ಎದುರಿಸುವ ಆತ್ಮಸ್ಥೈರ್ಯ ತುಂಬಿಸುವ ಕೆಲಸ ಮಾಡಿ ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಪೋಷಕರು ಮುಂದಾಗ ಬೇಕು ಎಂದರು.

ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶಾರದಾ ಮಾತನಾಡಿ ಪ್ರಸ್ತುತ ಪ್ರಾಥಮಿಕ ಶಾಲಾ ವಿಭಾಗದಲ್ಲಿ 400ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸದಲ್ಲಿ ತೊಡಗಿದ್ದು ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕ್ರೀಡಾಚಟು ವಟಿಕೆಗಳನ್ನು ಮಕ್ಕಳಿಗೆ ಆಯೋಜಿಸಿ ಪ್ರೋತ್ಸಾಹಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಇ.ಎಸ್. ಅಧ್ಯಕ್ಷ ಎಂ.ಕೇಶವಮೂರ್ತಿ ವಹಿಸಿದ್ದರು. ಇದೇ ವೇಳೆ ವಿವಿಧ ತರಗತಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ವೇದಿಕೆಯ ಗಣ್ಯರು ವಿತರಿಸಿದರು.

Malanadu Vidya Samasthe Chikmagalur ಈ ಸಂದರ್ಭದಲ್ಲಿ ಎಂ.ಇ.ಎಸ್. ಕಾರ್ಯಕಾರಿ ಮಂಡಳಿ ಸದಸ್ಯ ಜಯಶ್ರೀ, ಆಡಳಿತ ವ್ಯವಸ್ಥಾಪಕಿ ಲಕ್ಷ್ಮೀ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಾದ ರಮ್ಯ, ಪೂರ್ಣೇಶ್ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕರಾದ ಅನುಷಾ ನಿರೂಪಿಸಿದರು.

ಪಾರ್ವತಿ ಸ್ವಾಗತಿಸಿದರು. ವಿದ್ಯಾರ್ಥಿನಿ ಪೂರ್ವಿಕಾ ತಂಡ ಪ್ರಾರ್ಥಿಸಿದರು. ಸರಸ್ವತಿ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...