Thursday, April 24, 2025
Thursday, April 24, 2025

Mathematics Learning ಗಣಿತ ಎಂದರೆ ಕಬ್ಬಿಣದ ಕಡಲೆ ಎಂಬ ಭಯ ವಿದ್ಯಾರ್ಥಿಗಳಲ್ಲಿದೆ- ಮುರಳಿ

Date:

Mathematics Learning ವಿದ್ಯಾರ್ಥಿಗಳ ಕಲಿಕೆಯ ಉತ್ಸಾಹ ಹೆಚ್ಚಿಸಿ ಬೌದ್ಧಿಕ ಮಟ್ಟ ವೃದ್ಧಿ ಯಾಗಲು ಗಣಿತ ಕಲಿಕಾ ಆಂದೋಲನ ಸ್ಪರ್ಧೆ ಸಹಕಾರಿಯಾಗಲಿದೆ ಎಂದು ಗಂಗನಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಮುರುಳಿ ಹೇಳಿದರು.

ಕಡೂರು ತಾಲ್ಲೂಕು ಹೋಚಿಹಳ್ಳಿ ಕ್ಲಸ್ಟರ್ ಗಂಗನಗಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಅಕ್ಷರ ಫೌಂಡೇಷನ್ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಗಣಿತ ಕಲಿಕಾ ಆಂದೋಲನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾನ್ಯವಾಗಿ ವಿದ್ಯಾರ್ಥಿಗಳಿಗೆ ಗಣಿತ ವಿಷಯ ಎಂದರೆ ಕಬ್ಬಿಣದ ಕಡಲೆ ಎಂಬ ಮನೋಭಾವನೆ ಇದೆ. ತರಗತಿಗಳಲ್ಲಿ ಶಿಕ್ಷಕರು ಸರಳ ಮತ್ತು ಪರಿಣಾಮಕಾರಿಯಾಗಿ ಬೋಧನೆ ಕೌಶಲಗಳ ಜತೆಗೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಇದು ನೆರವಾಗಲಿದೆ. ಈ ನಿಟ್ಟಿನಲ್ಲಿ ಗಣಿತ ಕಲಿಕಾ ಆಂದೋಲನ ಸ್ಪರ್ಧಾ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.
ಗಣಿತ ಕಲಿಕಾ ಆಂದೋಲನಾ ಸ್ಪರ್ಧೆ ಕಾರ್ಯಕ್ರಮದಲ್ಲಿ ಗಂಗನಹಳ್ಳಿ, ಗರಗದಹಳ್ಳಿ, ಕಾವಲಹಟ್ಟಿ, ಜಿ.ವಿ.ಹಟ್ಟಿ ಸೇರಿದಂತೆ ಐದು ಸರ್ಕಾರಿ ಶಾಲೆಗಳಿಂದ 60 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಗಣಿತ ವಿಷಯ ಸಂಬoಧಿತ 20ಬಹು ಆಯ್ಕೆಯುಳ್ಳ ಪ್ರಶ್ನೆ ಪತ್ರಿಕೆ ನೀಡಿ ಪರೀಕ್ಷೆ ನಡೆಸಲಾಯಿತು. ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಣೆ ಮಾಡಲಾಯಿತು.

Mathematics Learning ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಜೆ.ಎಂ. ಶ್ರೀಧರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಗಣಿತ ಕಲಿಕಾ ಆಂದೋಲನ ಸ್ಪರ್ಧಾ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯ ಶಿಕ್ಷಕರಾದ ಮಹಲಿಂಗಯ್ಯ, ಸಹ ಶಿಕ್ಷಕಿ ಟಿ. ಕೆ. ಸಾಕಮ್ಮ ಸೇರಿದಂತೆ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ...