Monday, November 25, 2024
Monday, November 25, 2024

Aadhaar E-KYC ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಆಧಾರ್ ಇ- ಕೆವೈಸಿ ಮಾಡಿಸಲು ಅಂತಿಮ ದಿನಾಂಕವಿಲ್ಲ

Date:

Aadhaar E-KYC ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಆಧಾರ್ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕವನ್ನು ಕೇಂದ್ರ ಸರ್ಕಾರವು ನಿಗಧಿಪಡಿಸಿರುವುದಿಲ್ಲ. ಸಾರ್ವಜನಿಕರು ತಮ್ಮ ಬಿಡುವಿನ ವೇಳೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಆಧಾರ್ ಇ-ಕೆವೈಸಿ ಮಾಡಿಸಬಹುದಾಗಿದೆ. ಸಾರ್ವಜನಿಕರು ಆತಂಕದಿoದ ಗ್ಯಾಸ್ ಏಜೆನ್ಸಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ.
ಆದ್ದರಿಂದ ಅನಾವಶ್ಯಕವಾಗಿ ಗೊಂದಲ ಅಥವಾ ತಪ್ಪು ಮಾಹಿತಿಯಿಂದ ಗ್ಯಾಸ್ ಏಜೆನ್ಸಿಗಳ ಬಳಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿರುವುದಿಲ್ಲ ಹಾಗೂ ಸಿಲಿಂಡರ್‌ನ್ನು ಮನೆಗೆ ಡೆಲಿವರಿ ಪಡೆಯುವ ವೇಳೆಯಲ್ಲಿ ಕೂಡ ಇ-ಕೆವೈಸಿ ಮಾಡಿಸಲು ಅವಕಾಶವಿರುತ್ತದೆ. ಅಲ್ಲದೇ ಹೆಲೋ ಬಿಪಿಸಿಎಲ್, ಇಂಡಿಯನ್ ಆಯ್ಲ್ ಒನ್ ಮತ್ತು ವಿಟ್ರನ್ ಹೆಚ್‌ಪಿ ಗ್ಯಾಸ್ ಈ ಮೊಬೈಲ್ ಆಪ್‌ಗಳ Aadhaar E-KYC ಮೂಲಕ ಇ-ಕೆವೈಸಿ ಮಾಡಿಸಬಹುದಾಗಿದೆ ಎಂದು ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ಅವಿನ್ ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

COSMO Club Shivamogga ಅಧ್ಯಯನಶೀಲ ತತ್ವದತ್ತ ಮುನ್ನಡೆದು ಸಮರ್ಥ ಸಮಾಜಕ್ಕೆ ದೀಪವಾಗೋಣ- ರಂಜಿನಿ ದತ್ತಾತ್ರಿ

COSMO Club Shivamogga ನಮ್ಮ ನಿಮ್ಮ ನಗುವಿಗೊಂದು ದೀಪ, ಸಂತಸದ ಬೆಳಕಿಗೊಂದು...

MESCOM ನವೆಂಬರ್ 27. ಎಂ.ಆರ್.ಎಸ್. ನಲ್ಲಿ ತ್ರೈಮಾಸಿಕ ನಿರ್ವಹಣೆ. ಶಿವಮೊಗ್ಗದ ಬಹುಪಾಲು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ...