Minister of Higher Education ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನವನ್ನು 15 ಸಾವಿರದಷ್ಟು ಹೆಚ್ಚಳ ಮಾಡಿದ್ದು,
ಜ.1ರಿಂದಲೇ ಹೆಚ್ಚಳದ ಪ್ರಯೋಜನ
ದೊರೆಯಲಿದೆ.
ಅತಿಥಿ ಉಪನ್ಯಾಸಕ ಸಂಘಟನೆಗಳ
ಮುಖಂಡರ ಜತೆ ಶುಕ್ರವಾರ ನಡೆದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ
ಡಾ.ಎಂ.ಸಿ.ಸುಧಾಕರ್ ಅವರು, ವಿದ್ಯಾರ್ಹತೆ, ಅನುಭವದ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ಗೌರವಧನ ಪ್ರಸ್ತುತ 26,000 ದಿಂದ 32,000 ಇದೆ. ಸದ್ಯ ಕಾರ್ಯನಿರ್ವಹಿಸುತ್ತಿರುವ 10,600
ಅತಿಥಿ ಉಪನ್ಯಾಸಕರಿಗೂ ವೇತನ ಹೆಚ್ಚಳದ ಲಾಭ
ಸಮಾನವಾಗಿ ದೊರಕಲಿದೆ.
Minister of Higher Education ಇದರಿಂದ ಸರ್ಕಾರಕ್ಕೆ
ವಾರ್ಷಿಕ 155 ಕೋಟಿ ಹೆಚ್ಚುವರಿ ಹೊರೆ ಬೀಳಲಿದೆ
ಎಂದರು.
ಅತಿಥಿ ಉಪನ್ಯಾಸಕರಾಗಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿದವರಿಗೆ, ಅವರು 60ನೇ ವರ್ಷಕ್ಕೆ ನಿವೃತ್ತರಾಗುವ ವೇಳೆ 35 ಲಕ್ಷ
ಧನಸಹಾಯ ನೀಡಲಾಗುವುದು. ಅದಕ್ಕಾಗಿ 172
ಕೋಟಿ ನಿಗದಿ ಮಾಡಲಾಗಿದೆ ಎಂದರು.