Aam Admi Party ಭ್ರಷ್ಟಚಾರ ಸಂಬಂಧಿಸಿದ ಮಾಡಾಳ್ ವಿರೂಪಾಕ್ಷಪ್ಪನವರ ಪ್ರಕರಣವನ್ನು ಮರುತನಿಖೆ ನಡೆಸಿ ನ್ಯಾಯಸಮ್ಮತ ತೀರ್ಮಾನ ಕೈಗೊಳ್ಳಬೇಕು ಎಂದು ಜಿಲ್ಲಾ ಆಮ್‌ಆದ್ಮಿ ಮಾಧ್ಯಮ ಉಸ್ತುವಾರಿ ಡಾ. ಕೆ.ಸುಂದರಗೌಡ ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ವಿರೂಪಾಕ್ಷಪ್ಪ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಅನುಮತಿ ನೀಡುವ ವಿಚಾರದಲ್ಲಿನ ಲೋಪದಿಂದಾಗಿ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟಚಾರ ಪ್ರಕರಣವನ್ನು ನ್ಯಾಯಾಲಯದಲ್ಲಿ ವಜಾವಾಗುತ್ತಿರುವುದು ಬೇಸರದ ಸಂಗತಿ ಎಂದು ಆಕ್ಷೇಪಿಸಿದ್ದಾರೆ.
ನೂರಾರು ಕೋಟಿ ಲೂಟಿ ಮಾಡಿರುವ ವಿರೂಪಾಕ್ಷಪ್ಪ ವಿರುದ್ಧದ ಪ್ರಕರಣವನ್ನು ಪ್ಯಾಸಿಕ್ಯೂಷನ್ ಅನುಮತಿ ಪಡೆದಿಲ್ಲ ಎಂದು ರದ್ದು ಮಾಡಲಾಗುತ್ತದೆ ಎಂದ ಅವರು ಯಾವ ಸೀಮೆಯ ರೈತರು ಅಡಿಕೆ ಮಾರಾಟ ಮಾಡಿ ೮ ಕೋಟಿ ಹಣವನ್ನು ಮನೆಯಲ್ಲಿಟ್ಟುಕೊಂಡಿರುತ್ತಾರೆ. ಈಗಲಾದರೂ ಬಿಜೆಪಿ ನಾಯಕರ ಭ್ರಷ್ಟಾಚಾರದ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
Aam Admi Party ರಾಜ್ಯಸರ್ಕಾರ ನಕಲಿ ಗ್ಯಾರಂಟಿಗಳ ಮೂಲಕ ರಾಜ್ಯವನ್ನು ಉದ್ದಾರ ಮಾಡಲು ಸಾಧ್ಯವಿಲ್ಲ. ಹೀಗಾಗಿ ಭ್ರಷ್ಟ ಚಾರ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸ ಬೇಕು ಎಂದು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.