Friday, April 18, 2025
Friday, April 18, 2025

Aam Admi Party ಮಾಡಾಳ್ ವಿರೂಪಾಕ್ಷಪ್ಪ ಭ್ರಷ್ಟಾಚಾರ ಪ್ರಕರಣ ಮರು ತನಿಖೆಯಾಗಲಿ- ಡಾ.ಸುಂದರ ಗೌಡ

Date:

Aam Admi Party ಭ್ರಷ್ಟಚಾರ ಸಂಬಂಧಿಸಿದ ಮಾಡಾಳ್ ವಿರೂಪಾಕ್ಷಪ್ಪನವರ ಪ್ರಕರಣವನ್ನು ಮರುತನಿಖೆ ನಡೆಸಿ ನ್ಯಾಯಸಮ್ಮತ ತೀರ್ಮಾನ ಕೈಗೊಳ್ಳಬೇಕು ಎಂದು ಜಿಲ್ಲಾ ಆಮ್‌ಆದ್ಮಿ ಮಾಧ್ಯಮ ಉಸ್ತುವಾರಿ ಡಾ. ಕೆ.ಸುಂದರಗೌಡ ಒತ್ತಾಯಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು ವಿರೂಪಾಕ್ಷಪ್ಪ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಅನುಮತಿ ನೀಡುವ ವಿಚಾರದಲ್ಲಿನ ಲೋಪದಿಂದಾಗಿ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟಚಾರ ಪ್ರಕರಣವನ್ನು ನ್ಯಾಯಾಲಯದಲ್ಲಿ ವಜಾವಾಗುತ್ತಿರುವುದು ಬೇಸರದ ಸಂಗತಿ ಎಂದು ಆಕ್ಷೇಪಿಸಿದ್ದಾರೆ.

ನೂರಾರು ಕೋಟಿ ಲೂಟಿ ಮಾಡಿರುವ ವಿರೂಪಾಕ್ಷಪ್ಪ ವಿರುದ್ಧದ ಪ್ರಕರಣವನ್ನು ಪ್ಯಾಸಿಕ್ಯೂಷನ್ ಅನುಮತಿ ಪಡೆದಿಲ್ಲ ಎಂದು ರದ್ದು ಮಾಡಲಾಗುತ್ತದೆ ಎಂದ ಅವರು ಯಾವ ಸೀಮೆಯ ರೈತರು ಅಡಿಕೆ ಮಾರಾಟ ಮಾಡಿ ೮ ಕೋಟಿ ಹಣವನ್ನು ಮನೆಯಲ್ಲಿಟ್ಟುಕೊಂಡಿರುತ್ತಾರೆ. ಈಗಲಾದರೂ ಬಿಜೆಪಿ ನಾಯಕರ ಭ್ರಷ್ಟಾಚಾರದ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Aam Admi Party ರಾಜ್ಯಸರ್ಕಾರ ನಕಲಿ ಗ್ಯಾರಂಟಿಗಳ ಮೂಲಕ ರಾಜ್ಯವನ್ನು ಉದ್ದಾರ ಮಾಡಲು ಸಾಧ್ಯವಿಲ್ಲ. ಹೀಗಾಗಿ ಭ್ರಷ್ಟ ಚಾರ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸ ಬೇಕು ಎಂದು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....