Saturday, December 6, 2025
Saturday, December 6, 2025

Acharya Tulsi National College of Commerce ಮತದಾನದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳ್ಳುತ್ತದೆ-ನ್ಯಾ.ರಾಜಣ್ಣ ಸಂಕಣ್ಣನವರ್

Date:

Acharya Tulsi National College of Commerce ಸದೃಢ ದೇಶ ನಿರ್ಮಾಣ ಮಾಡುವಲ್ಲಿ ಮತದಾನವು ಮಹತ್ತರ ಪಾತ್ರ ವಹಿಸುತ್ತಿದ್ದು, ಪ್ರಜಾಪ್ರಭುತ್ವ ದೇಶದಲ್ಲಿ ಮತದಾನವು ನಮ್ಮ ಮೂಲ ಹಕ್ಕುಗಳ ಜತೆಯಲ್ಲಿ ಸಮಾಜದ ಆರೋಗ್ಯದ ದೃಷ್ಠಿಯಿಂದಲೂ ತುಂಬಾ ಮುಖ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಜಣ್ಣ ಸಂಕಣ್ಣನವರ್ ಅಭಿಪ್ರಾಯಪಟ್ಟರು.

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಐಕ್ಯೂಎಸಿ, ಎನ್‌ಎಸ್‌ಎಸ್, ರೆಡ್‌ಕ್ರಾಸ್, ರೋವರ್, ರೇಂಜರ್ ಘಟಕಗಳ ವತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ನಮ್ಮ ಮತದಾನ ಸದೃಢ ಭಾರತ ನಿರ್ಮಾಣಕ್ಕೆ ಆಧಾರ. ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೇ ನಿರ್ಭಯವಾಗಿ ಮತದಾನ ಮಾಡಬೇಕು ಎಂದು ತಿಳಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸುವ ದೃಷ್ಠಿಯಿಂದ ಮತದಾನವು ತುಂಬಾ ಮುಖ್ಯವಾದ ಕರ್ತವ್ಯ ಆಗಿದೆ. ಅಮೂಲ್ಯವಾದ ಮತವನ್ನು ಮಾರಿಕೊಳ್ಳದೇ ಪಾವಿತ್ರ್ಯತೆ ಕಾಪಾಡಿ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು. ದೇಶವನ್ನು ಭ್ರಷ್ಟಮುಕ್ತಗೊಳಿಸಬೇಕು. ದೇಶದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.

ಜಾಗೃತಿ ಜಾಥಾ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಟಿಎನ್‌ಸಿಸಿ ಕಾಲೇಜಿನ ಪ್ರಾಚಾರ್ಯೆ ಪ್ರೊ. ಮಮತಾ.ಪಿ.ಆರ್. ಮಾತನಾಡಿ, ವಿದ್ಯಾರ್ಥಿಗಳು ಮತದಾನದ ಬಗ್ಗೆ ಸಮಗ್ರ ಮಾಹಿತಿ ತಿಳಿದುಕೊಳ್ಳಬೇಕು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನಕ್ಕೆ ವಿಶೇಷ ಪ್ರಾಮುಖ್ಯತೆ ಇದ್ದು, ಅದರ ಮಹತ್ವ ಅರಿತುಕೊಂಡು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಿಳಿಸಿದರು.

Acharya Tulsi National College of Commerce ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಮಾತನಾಡಿ, ಮತದಾನ ಮಾಡುವವರ ಸಂಖ್ಯೆ ಕಡಿಮೆ ಆಗುತ್ತಿದ್ದು, ನಮ್ಮ ಹಕ್ಕನ್ನು ನಾವು ಕಳೆದುಕೊಳ್ಳುತ್ತಿದ್ದೇವೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾನ ಗುರುತೀನ ಚೀಟಿ ಮಾಡಿಸಿಕೊಂಡು ಚುನಾವಣೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಮತದಾನದ ಬಗ್ಗೆ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಯಿತು. ಎನ್‌ಎಸ್‌ಎಸ್ ಅಧಿಕಾರಿ ಪ್ರೊ. ಎಸ್.ಜಗದೀಶ್, ಪ್ರೊ. ನಾಗರಾಜ್.ಕೆ.ಎಂ., ಪ್ರೊ. ಮಂಜುನಾಥ್.ಎನ್., ಪ್ರವೀಣ.ಬಿ.ಎನ್., ರಂಗನಾಥ್.ಆರ್., ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...